Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ‘ರಾಜಭವನ ಚಲೋ’; ಕಾಂಗ್ರೆಸ್ ಯುವ ಕಾರ್ಯಕರ್ತರು ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ21 May 2026 9:18 PM IST
share
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ‘ರಾಜಭವನ ಚಲೋ’; ಕಾಂಗ್ರೆಸ್ ಯುವ ಕಾರ್ಯಕರ್ತರು ವಶಕ್ಕೆ

ಬೆಂಗಳೂರು: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಕೇಂದ್ರ ಸರಕಾರದ ವೈಫಲ್ಯಗಳನ್ನು ಖಂಡಿಸಿ ರಾಜಭವನ ಚಲೋ ಪ್ರತಿಭಟನಾ ಮೆರವಣಿಗೆ ನಡೆಸಿದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಗುರುವಾರ ನಗರದ ಫ್ರೀಡಂ ಪಾರ್ಕಿನಲ್ಲಿ ವಿದೇಶಾಂಗ ನೀತಿಗಳಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ ವೈಫಲ್ಯ ಹಾಗೂ ನೀಟ್ ಪರೀಕ್ಷೆಯಲ್ಲಿನ ನಿರಂತರ ಅಕ್ರಮಗಳನ್ನು ಖಂಡಿಸಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಸಚಿವರು, ಕಾಂಗ್ರೆಸ್ ಮುಖಂಡರು ಪಾಲ್ಗೊಂಡು ಕೇಂದ್ರದ ಪ್ರಧಾನಿ ಮೋದಿ ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಆನಂತರ, ರಾಷ್ಟ್ರೀಯ ಯುವ ಕಾಂಗ್ರೆಸ್ಸಿನ ಅಧ್ಯಕ್ಷ ಉದಯ ಬಾನು, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರು ರಾಜಭವನ ಚಲೋ ಪ್ರತಿಭಟನಾ ಮೆರವಣಿಗೆ ನಡೆಸಲು ಮುಂದಾದ ವೇಳೆ ಪೊಲೀಸರು ಎಲ್ಲರನ್ನು ಬಂಧಿಸಿ ವಾಹನದಲ್ಲಿ ಕರೆದೊಯ್ದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ನಾಯಕರು ದೇಶದ ಭವಿಷ್ಯದ ಜತೆ ಚೆಲ್ಲಾಟ ಆಡುತ್ತಿದ್ದಾರೆ. ಈ ಕೂಡಲೇ ಕೇಂದ್ರದ ಶಿಕ್ಷಣ ಸಚಿವ, ಪ್ರಧಾನಿ ಮೋದಿ ರಾಜೀನಾಮೆ ನೀಡಬೇಕೆಂದು ಘೋಷಣೆಗಳನ್ನು ಮೊಳಗಿಸಿದರು.

ಇದಕ್ಕೂ ಮೊದಲು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೇಂದ್ರದ ಪ್ರಧಾನಿ ಮೋದಿ ಸರಕಾಋ ಶಿಕ್ಷಣ ಮಾಫಿಯಾಗೆ ಎಲ್ಲವನ್ನೂ ಒಪ್ಪಿಸಿಬಿಟ್ಟಿದೆ. ಹಿಂದಿನ ರಾಜ್ಯದಲ್ಲಿದ್ದ ಬಿಜೆಪಿ ಸರಕಾರ ಪ್ರಶ್ನೆ ಪತ್ರಿಕೆ ಸೋರಿಕೆಗೆ ಹೆಸರುವಾಸಿಯಾಗಿತ್ತು. ನೂರಾರು ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಬಿಜೆಪಿ ನಾಯಕರ ಮೂಗಿನ ಅಡಿಯಲ್ಲೇ ನಡೆದಿದೆ. ಈಗಲಾದರೂ ಪ್ರಧಾನಿ ಮೋದಿ ‘ಪರೀಕ್ಷಾ ಪೇ ಚರ್ಚಾ ಬಿಟ್ಟು, ಪೇಪರ್ ಲೀಕ್ ಪೇ ಚರ್ಚೆ’ ಮಾಡಬೇಕು’ ಎಂದು ಆಗ್ರಹಿಸಿದರು.

ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಮಾತನಾಡಿ, ನೀಟ್ ಅಕ್ರಮದಿಂದ ಬಹಳಷ್ಟು ವಿದ್ಯಾರ್ಥಿಗಳ ಭವಿಷ್ಯ ಇಂದು ಅತಂತ್ರವಾಗಿದೆ. 22 ಲಕ್ಷ ಜನ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಯಾರು ಕೋಚಿಂಗ್ ಸೆಂಟರ್ ನಡೆಸುತ್ತಿದ್ದರು ಅವರೇ ಇಂದು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದಾರೆ. ಇದೊಂದು ದೊಡ್ಡ ದಂಧೆ ಎಂದು ಆಪಾದಿಸಿದರು.

ಕಾಂಗ್ರೆಸ್ ಶಾಸಕ ರಿಝ್ವಾನ್ ಅರ್ಶದ್ ಮಾತನಾಡಿ, ಒಂದು ಪರೀಕ್ಷೆ ಮುಖಾಂತರ ವಿದ್ಯಾರ್ಥಿಗಳಿಗೆ ಅವಕಾಶ ನೀಡುವಲ್ಲಿ ಕೇಂದ್ರ ಸರಕಾರ ವಿಫಲವಾಗಿದೆ. ಇದಕ್ಕೆ ಸಂಬಂಧಪಟ್ಟವರು ತಮ್ಮ ಸ್ಥಾನದಿಂದ ಹೊರಬರಬೇಕು. ವಿದ್ಯಾರ್ಥಿಗಳಲ್ಲಿ ವಿಶ್ವಾಸ ಮೂಡಿಸುವ ಕೆಲಸವನ್ನು ಮಾಡಬೇಕಾಗಿದೆ ಎಂದು ಒತ್ತಾಯಿಸಿದರು.

ಈ ವೇಳೆ ಸಚಿವರಾದ ಭೈರತಿ ಸುರೇಶ್, ಮಧುಬಂಗಾರಪ್ಪ, ಡಾ.ಶರಣಪ್ರಕಾಶ್ ಪಾಟೀಲ್, ಡಾ.ಸುಧಾಕರ್, ಈಶ್ವರ್ ಖಂಡ್ರೆ, ಕಾಂಗ್ರೆಸ್ ಮುಖಂಡರಾದ ವಿ.ಎಸ್.ಉಗ್ರಪ್ಪ, ಎಂ.ನಾರಾಯಣಸ್ವಾಮಿ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.

ಕಾಂಗ್ರೆಸ್‍ನಿಂದ ಕಾಕ್ರೋಚ್ ಟೀ ಶರ್ಟ್: ‘ನೀಟ್ ಪರೀಕ್ಷೆಯಲ್ಲಾದ ಅಕ್ರಮ ಖಂಡಿಸಿ ಯೂತ್ ಕಾಂಗ್ರೆಸ್ ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿತು. ಈ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿರುವ ಕಾಕ್ರೋಚ್(ಜಿರಳೆ) ಜನತಾ ಪಾರ್ಟಿಯ ‘ಕಾಕ್ರೋಚ್ ಟೀ ಶರ್ಟ್’ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿ ಗಮನ ಸೆಳೆದರು.

‘ಪಿಎಂ ಕಾಂಪ್ರಮೈಸ್, ಐ ಆಮ್ ಕಾಕ್ರೋಚ್’ ಬರಹಯುಳ್ಳ ಟೀ ಶರ್ಟ್ ಬಿಡುಗಡೆ ಮಾಡುವ ಮೂಲಕ ಕೇಂದ್ರ ಸರಕಾರ ಮತ್ತು ಬಿಜೆಪಿ ವಿರುದ್ಧ ಸಚಿವರು, ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದರು.

Tags

NEET Paper LeakCongressRaj Bhavan Chalo
share
ವಾರ್ತಾಭಾರತಿ
ವಾರ್ತಾಭಾರತಿ
Next Story
X