Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮುಂದಿನ ವಾರ ಸಭೆ ಕರೆದು ದಲಿತರ 19...

ಮುಂದಿನ ವಾರ ಸಭೆ ಕರೆದು ದಲಿತರ 19 ಬೇಡಿಕೆಗಳ ಕುರಿತು ಚರ್ಚೆ: ಡಿಸಿಎಂ ಡಾ. ಜಿ. ಪರಮೇಶ್ವರ್ ಭರವಸೆ

ವಾರ್ತಾಭಾರತಿವಾರ್ತಾಭಾರತಿ3 July 2026 7:07 PM IST
share
ಮುಂದಿನ ವಾರ ಸಭೆ ಕರೆದು ದಲಿತರ 19 ಬೇಡಿಕೆಗಳ ಕುರಿತು ಚರ್ಚೆ: ಡಿಸಿಎಂ ಡಾ. ಜಿ. ಪರಮೇಶ್ವರ್ ಭರವಸೆ
ಫ್ರೀಡಂಪಾರ್ಕ್‌ನಲ್ಲಿ ದಲಿತ ಜನಾಗ್ರಹ ಸಮಾವೇಶ

ಬೆಂಗಳೂರು: ಭೂಮಿ, ವಸತಿ, ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ, ಉದ್ಯೋಗ ಮೀಸಲಾತಿ, ವಿಶೇಷ ಘಟಕ ಯೋಜನೆ ಹಾಗೂ ಏಕಗವಾಕ್ಷಿ ನೀತಿ ಜಾರಿಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ನಡೆದ 'ದಲಿತ ಜನಾಗ್ರಹ ಸಮಾವೇಶ'ಕ್ಕೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು, ಭೇಟಿ ನೀಡಿ ಮನವಿ ಸ್ವೀಕರಿಸಿದರು.

ಪ್ರತಿಭಟನಾಕಾರರು ಸಲ್ಲಿಸಿದ 19 ಬೇಡಿಕೆಗಳ ಕುರಿತು ಮುಂದಿನ ವಾರ ವಿಧಾನಸೌಧದಲ್ಲಿ ಸಂಘಟನೆಯ ಪದಾಧಿಕಾರಿಗಳು, ಸಂಬಂಧಿತ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸುವುದಾಗಿ ಅವರು ಭರವಸೆ ನೀಡಿದರು. ಸಾಧ್ಯವಾದರೆ ಮುಖ್ಯಮಂತ್ರಿಯವರನ್ನೂ ಸಭೆಗೆ ಆಹ್ವಾನಿಸುವುದಾಗಿ ತಿಳಿಸಿದರು.

ದಲಿತ ಸಮುದಾಯದ ಭೂಮಿ, ಶಿಕ್ಷಣ, ವಸತಿ ಸೇರಿದಂತೆ ಹಲವು ಮೂಲಭೂತ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಅರಿವು ಇದೆ. ಅವುಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ಪರಮೇಶ್ವರ ಅವರು ಹೇಳಿದರು.

ಶಿಕ್ಷಣ ಸಮಾಜ ಪರಿವರ್ತನೆಯ ಪ್ರಮುಖ ಸಾಧನವಾಗಿದ್ದು, ದಲಿತ ಸಮುದಾಯದ ಮುಂದಿನ ಪೀಳಿಗೆ ಯಾವುದೇ ರೀತಿಯ ಅನ್ಯಾಯ ಅಥವಾ ನೋವಿಗೆ ಒಳಗಾಗದಂತೆ ವಾತಾವರಣ ನಿರ್ಮಿಸುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.

ಇಂದು ಬೇಡಿಕೆಗಳ ಕುರಿತು ಯಾವುದೇ ನಿರ್ದಿಷ್ಟ ಘೋಷಣೆ ಮಾಡುವುದಿಲ್ಲ. ಆದರೆ ಹಕ್ಕೊತ್ತಾಯಗಳನ್ನು ಗಂಭೀರವಾಗಿ ಪರಿಗಣಿಸಿ, ಕಂದಾಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಸಮಾವೇಶದಲ್ಲಿ ಮಾಜಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಶಾಸಕ ನಾರಾಯಣಸ್ವಾಮಿ, ಮಾವಳ್ಳಿ ಶಂಕರ್, ಪ್ರೊ. ಇಂದಿರಾ ಕೃಷ್ಣಪ್ಪ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.




Tags

DalitG Parameshwara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X