Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ರಾಮಕೃಷ್ಣ...

ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ರಾಮಕೃಷ್ಣ ಹೆಗಡೆ ಹೆಸರು : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ29 Aug 2025 11:24 PM IST
share
ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ರಾಮಕೃಷ್ಣ ಹೆಗಡೆ ಹೆಸರು : ಡಿ.ಕೆ.ಶಿವಕುಮಾರ್

ಬೆಂಗಳೂರು, ಆ. 29 ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಇಡಲಾಗುವುದು" ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.

ಶುಕ್ರವಾರ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ 99ನೇ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

"ರಾಮಕೃಷ್ಣ ಹೆಗಡೆ ಅವರ ಹೆಸರು ಶಾಶ್ವತವಾಗಿ ಉಳಿದುಕೊಳ್ಳಬೇಕು. ಹೀಗಾಗಿ ನಿಮ್ಮೆಲ್ಲರ ಜೊತೆ ಒಂದು ದಿನ ಚರ್ಚೆ ಮಾಡಿ, ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಅವರ ಹೆಸರು ಇಡಲಾಗುವುದು. ಇದಕ್ಕೆ ನಾನು ಬದ್ಧ" ಎಂದರು.

ಹೆಗಡೆ ಅವರದ್ದು ಪರಿಶುದ್ಧ ಆಡಳಿತ ಹಾಗೂ ರಾಜಕಾರಣ:

"ತಮಗೆ ಬಹುಮತ ಇದ್ದರೂ ಇಡೀ ದೇಶದಲ್ಲಿ ಮಧ್ಯದಲ್ಲೇ ಜನಾದೇಶ ಬಯಸಿ ಚುನಾವಣೆಗೆ ಹೋಗಿದ್ದರೆ, ಅದು ರಾಮಕೃಷ್ಣ ಹೆಗಡೆ ಅವರು ಮಾತ್ರ. ಅವರಲ್ಲಿ ಕ್ಷಮಿಸುವ ಗುಣ, ಹೃದಯ ಶ್ರೀಮಂತಿಕೆ ಇತ್ತು. ಅವರಲ್ಲಿ ನಾವು ಎಂದಿಗೂ ದ್ವೇಷ ರಾಜಕಾರಣ ನೋಡಲಿಲ್ಲ. ಇದು ನಮ್ಮೆಲ್ಲರಿಗೂ ದೊಡ್ಡ ಆದರ್ಶ. ಅವರದ್ದು ಪರಿಶುದ್ಧ ಆಡಳಿತ ಹಾಗೂ ರಾಜಕಾರಣ" ಎಂದರು.

"ರಾಮಕೃಷ್ಣ ಹೆಗಡೆ ಅವರು ಕನಕಪುರದಿಂದ ಸ್ಪರ್ಧೆ ಮಾಡಿದ್ದರು. ಅವರನ್ನು ಸೋಲಿಸಲು ನಾನು ವಿದ್ಯಾರ್ಥಿ ನಾಯಕನಾಗಿ ಹೋರಾಟ ಮಾಡಿದೆ. ನನ್ನ ಹೋರಾಟ ಗಮನಿಸಿ 1985 ರಲ್ಲಿ ಪಕ್ಷ ನನಗೆ ಟಿಕೆಟ್ ನೀಡಿತು. ಅವರು ಮುಖ್ಯಮಂತ್ರಿ ಆಗಿದ್ದಾಗ ನಡೆದ ಲೋಕಸಭೆ ಚುನಾವಣೆಯಲ್ಲಿ ಅವರ ಪಕ್ಷಕ್ಕೆ ಹಿನ್ನಡೆಯಾದಾಗ, ನನ್ನ ನಾಯಕತ್ವಕ್ಕೆ ಬೆಂಬಲ ಸಿಗಲಿಲ್ಲ ಎಂದು ಮತ್ತೆ ಚುನಾವಣೆಗೆ ಹೋದರು" ಎಂದು ಮೆಲುಕು ಹಾಕಿದರು.

"ಆ ಸಂದರ್ಭದಲ್ಲಿ ನನಗೆ ದೇವೇಗೌಡರ ವಿರುದ್ಧ ಸಾತನೂರಿನಲ್ಲಿ ಸ್ಪರ್ಧಿಸಲು ಪಕ್ಷ ಟಿಕೆಟ್ ನೀಡಿತು. ಆಗ ನಾನು ಸೇರಿದಂತೆ ಬಹುತೇಕರು ಹೆಗಡೆ ಅವರ ಹೆಸರಿನ ಅಲೆಯಲ್ಲಿ ಕೊಚ್ಚಿ ಹೋದೆವು. ನಂತರ ನಾನು ಜಿಲ್ಲಾ ಪರಿಷತ್ ಸದಸ್ಯನಾಗಿ ರಾಜಕೀಯ ಮುಂದುವರಿಸಿದೆ ಎಂದು ಸ್ಮರಿಸಿದರು.

"ನಾನು ವಿಧಾನಸಭೆಯಲ್ಲಿ ರಾಮಕೃಷ್ಣ ಹೆಗಡೆ ಅವರನ್ನು ನೋಡಿದ್ದೇನೆ. ಟೆಲಿಫೋನ್ ಟ್ಯಾಪಿಂಗ್ ಬಗ್ಗೆ ನಡೆದ ಚರ್ಚೆಯಲ್ಲಿ ಹೆಗಡೆ ಅವರು ಮಾಡಿದ ಭಾಷಣ ನಾನು ಕಂಡ ಅತ್ಯುತ್ತಮ ಭಾಷಣಗಳಲ್ಲಿ ಒಂದು. ವೀರೇಂದ್ರ ಪಾಟೀಲರ ಜೊತೆ ಉತ್ತಮ ಸ್ನೇಹ ಹೊಂದಿದ್ದರೂ ಅವರು ತಮ್ಮ ಪಕ್ಷದ ಸಿದ್ಧಾಂತದ ಗೆರೆ ದಾಟಲಿಲ್ಲ" ಎಂದು ಶ್ಲಾಘಿಸಿದರು.

ಏಣಿಯಂತೆ ಬಳಸಿಕೊಂಡು ಬಿಸಾಡಿದರು:

"ರಾಮಕೃಷ್ಣ ಹೆಗಡೆ ಅವರು ತಮ್ಮ ಬದುಕಿನಲ್ಲಿ ಬಿಟ್ಟುಹೋದ ಆದರ್ಶ, ಸಾಕ್ಷಿಗುಡ್ಡೆಗಳು ಇನ್ನೂ ಜೀವಂತವಾಗಿವೆ. ಅವರೊಬ್ಬ ದೂರದೃಷ್ಟಿ ನಾಯಕ. ತಮ್ಮ ಜಾತಿಯವರು, ಮನೆಯವರನ್ನು ಬೆಳೆಸಬೇಕು ಎಂಬ ಹಂಬಲ ಇರಲಿಲ್ಲ. ನೂರಾರು ನಾಯಕರನ್ನು ಅವರು ಬೆಳೆಸಿದ್ದಾರೆ. ಕೆಲವರು ಅವರ ಪ್ರಾಮಾಣಿಕತೆಗೆ ನಿಯತ್ತು ತೋರಿದರು. ಮತ್ತೇ ಕೆಲವರು ಹತ್ತಿದ ಏಣಿಯನ್ನು ಒದೆಯುವಂತೆ ಬಿಸಾಕಿದರು. ರಾಮಕೃಷ್ಣ ಹೆಗಡೆ ಅವರನ್ನು ಉಚ್ಚಾಟನೆ ಮಾಡಿದ ದಿನ ನನಗೆ ಚೆನ್ನಾಗಿ ನೆನಪಿದೆ. ನಾನು ವಿಧಾನಸಭೆಗೆ ಹೋಗುತ್ತಿರುವಾಗ ದೇಶಪಾಂಡೆ ಅವರು ಗಾಬರಿಯಿಂದ ಕೆಳಗೆ ಇಳಿದು ಬರುತ್ತಿದ್ದರು. ನಾನು ಯಾಕೆ ಗಾಬರಿ ಎಂದು ಕೇಳಿದೆ. ಆಗ ಅವರು ಹೇಳಿದರು. ಆ ಸಂದರ್ಭದಲ್ಲಿ ಕೇವಲ ದೇಶಪಾಂಡೆ ಅವರು ಮಾತ್ರ ಧ್ವನಿ ಎತ್ತಿದ್ದರು, ಉಳಿದವರು ಅಧಿಕಾರದ ಆಸೆಗೆ ಮೌನಕ್ಕೆ ಶರಣಾಗಿದ್ದರು" ಎಂದು ಹೇಳಿದರು.

ಹೆಗಡೆ ಅವರ ಬೆಂಬಲ ಕೋರಿದ್ದೆ :

"ಎಸ್ ಎಂ ಕೃಷ್ಣ ಅವರ ಕಾಲದಲ್ಲಿ ಸಂಸತ್ ಚುನಾವಣೆಗೆ ನಿಲ್ಲಬೇಕಾದ ಪರಿಸ್ಥಿತಿ ಬಂದಿತು. ಆಗ ದೇವೇಗೌಡರು ಹಾಗೂ ರಾಮಕೃಷ್ಣ ಹೆಗಡೆ ಅವರ ನಡುವೆ ಭಿನ್ನಾಭಿಪ್ರಾಯ ಇತ್ತು. ಆಗ ನಾನು ಹೆಗಡೆ ಅವರ ಬೆಂಬಲ ಕೊರಲು ಹೋಗಿ ಭೇಟಿ ಮಾಡಿದ್ದೆ. ನಾನು ಪಕ್ಷದ ವ್ಯವಸ್ಥೆಯಲ್ಲಿದ್ದು ನಿನಗೆ ಬೆಂಬಲ ನೀಡುವ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ. ನಿನಗೆ ಒಳ್ಳೆಯದಾಗಲಿ ಎಂದು ನೇರವಾಗಿ ಹೇಳಿದರು. ಅವರ ಪಕ್ಷದ ಅಭ್ಯರ್ಥಿಗೆ ಹೆಗಡೆ ಅವರು ಸಹಾಯ ಮಾಡದೇ ಇದ್ದಿದ್ದರೆ ಆ ಚುನಾವಣೆಯಲ್ಲಿ ನಾನು ಗೆದ್ದು ಸಂಸತ್ತಿಗೆ ಹೋಗುತ್ತಿದ್ದೆ" ಎಂದು ತಿಳಿಸಿದರು.

ಬೆಂಗಳೂರಿನ ಅಭಿವೃದ್ಧಿಗೆ ಅಡಿಪಾಯ ಹಾಕಿದರು:

"ಬೆಂಗಳೂರು ಜಾಗತಿಕ ನಗರವಾಗಿದೆ. 25 ಲಕ್ಷ ಐಟಿ ಉದ್ಯೋಗಿಗಳು ಇಲ್ಲಿದ್ದಾರೆ. 2 ಲಕ್ಷ ವಿದೇಶಿ ಪಾಸ್ ಪೋರ್ಟ್ ಹೊಂದಿರುವವರು ಕೆಲಸ ಮಾಡುತ್ತಿದ್ದಾರೆ. ಬೆಂಗಳೂರು ಇಂದು ಈ ಮಟ್ಟಕ್ಕೆ ಬೆಳೆಯಲು ರಾಮಕೃಷ್ಣ ಅವರ ಕಾಲದಲ್ಲಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಕೊಟ್ಟ ಅನುಮತಿಯೂ ಒಂದು ಕಾರಣ. ಅದರಿಂದ ಬೆಂಗಳೂರಿನಲ್ಲಿ ಕೈಗಾರಿಕಾ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಯಿತು. ಇಲ್ಲಿನ ಇಂಜಿನಿಯರ್ ಕಾಲೇಜುಗಳಲ್ಲಿ ಸಜ್ಜನ್ ಜಿಂದಾಲ್ ಸೇರಿದಂತೆ ಅನೇಕ ಉದ್ಯಮಿಗಳು ಹೊರಗಿಂದ ಬಂದು ಇಲ್ಲಿ ಓದಿದರು" ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X