Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೇಕೆದಾಟು ಅಣೆಕಟ್ಟು ಕಟ್ಟಿ ತಮಿಳುನಾಡಿಗೂ...

ಮೇಕೆದಾಟು ಅಣೆಕಟ್ಟು ಕಟ್ಟಿ ತಮಿಳುನಾಡಿಗೂ ನೀರು ಕೊಡುತ್ತೇವೆ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ14 Nov 2026 7:58 PM IST
share
ಮೇಕೆದಾಟು ಅಣೆಕಟ್ಟು ಕಟ್ಟಿ ತಮಿಳುನಾಡಿಗೂ ನೀರು ಕೊಡುತ್ತೇವೆ : ಡಿ.ಕೆ.ಶಿವಕುಮಾರ್

ಬೆಂಗಳೂರು : ಮೇಕೆದಾಟು ಯೋಜನೆ ಕರ್ನಾಟಕದ ಹಕ್ಕು. ಸುಪ್ರೀಂ ಕೋರ್ಟ್ ನೀಡಿರುವ ಆದೇಶದಂತೆ ಯೋಜನೆ ಅನುಷ್ಠಾನಗೊಳಿಸುವುದು ನಮ್ಮ ಕರ್ತವ್ಯ. ತಮಿಳುನಾಡಿನವರು ವಿರೋಧ ವ್ಯಕ್ತಪಡಿಸುವ ಬದಲು ನಿಯೋಗದೊಂದಿಗೆ ಬರಲಿ. ಯೋಜನೆಯಿಂದ ಅವರಿಗೆ ಆಗುವ ಅನುಕೂಲ ವಿವರಿಸುತ್ತೇನೆ. ರಾಜ್ಯದ ಹಿತಾಸಕ್ತಿ ಕಾಪಾಡಲು ಯಾವುದೇ ಹಂತದಲ್ಲೂ ಹಿಂದೆ ಸರಿಯುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಶನಿವಾರ ವಿಧಾನ ಸೌಧದ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಯಾರಾದರೂ ವಿರೋಧ ವ್ಯಕ್ತಪಡಿಸಲಿ. ಇದು ನಮ್ಮ ರಾಜ್ಯ, ನಮ್ಮ ಹಕ್ಕು ಎಂಬುದನ್ನು ತಮಿಳುನಾಡಿನವರೂ ಅರ್ಥಮಾಡಿಕೊಳ್ಳಬೇಕು. ಅವರು ಬೇಕಾದರೆ ತಮ್ಮ ನಿಯೋಗದೊಂದಿಗೆ ಬರಲಿ. ಅವರನ್ನು ಅಣೆಕಟ್ಟು ನಿರ್ಮಾಣದ ಜಾಗಕ್ಕೆ ಕರೆದುಕೊಂಡು ಹೋಗಿ, ಯೋಜನೆ ಬಗ್ಗೆ ವಿವರಿಸಲು ಸಿದ್ಧನಿದ್ದೇನೆ ಎಂದರು.

ತಮಿಳುನಾಡಿನಲ್ಲಿ ರಾಜಕೀಯ ನಡೆಯುತ್ತಿದೆ. ಕಾಂಗ್ರೆಸ್ ವಿರೋಧಿಸದಿದ್ದರೆ ಡಿಎಂಕೆ ವಿರೋಧಿಸುತ್ತದೆ, ಡಿಎಂಕೆ ವಿರೋಧಿಸದಿದ್ದರೆ ಎಐಎಡಿಎಂಕೆ ವಿರೋಧಿಸುತ್ತದೆ. ಆದರೆ ಇದು ರಾಜಕೀಯ ವಿಚಾರವಲ್ಲ. ದೇಶದ ಕಾನೂನನ್ನು ಎಲ್ಲರೂ ಗೌರವಿಸಬೇಕು. ಸುಪ್ರೀಂ ಕೋರ್ಟ್ ಆದೇಶವನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ತಮಿಳುನಾಡು 177 ಟಿಎಂಸಿ ನೀರನ್ನು ಪಡೆಯುವುದು ಅವರ ಹಕ್ಕು. ಅದನ್ನು ನಾವು ಪಾಲಿಸುತ್ತೇವೆ ಎಂದು ಅವರು ವಿವರಣೆ ನೀಡಿದರು.

ನಮ್ಮ ಹಕ್ಕುಗಳನ್ನು ರಕ್ಷಿಸುವುದರ ಜತೆಗೆ ಅವರ ಹಕ್ಕುಗಳನ್ನೂ ಗೌರವಿಸುತ್ತೇವೆ. ಅಣೆಕಟ್ಟು ನಿರ್ಮಿಸಿ ನೀರು ಒದಗಿಸುವುದು ನಮ್ಮ ಹಕ್ಕು ಮತ್ತು ಕರ್ತವ್ಯ. ಕೇಂದ್ರ ಸರಕಾರ ಈ ಯೋಜನೆಯಲ್ಲಿ ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಬದಲಿ ಜಾಗ ನೀಡಬೇಕು ಎಂದು ತಿಳಿಸಿದ್ದು ಅದರ ಹೊರತಾಗಿ ಇದು ನಮ್ಮ ಜಾಗದಲ್ಲಿ ನಿರ್ಮಾಣವಾಗುವ ನಮ್ಮ ಯೋಜನೆಯಾಗಿದೆ ಎಂದು ಅವರು ವಿವರಿಸಿದರು.

ಹಿತ ರಕ್ಷಣೆ ಮಾಡುತ್ತೇವೆ: ತಮಿಳುನಾಡಿಗೆ ಸಲ್ಲಬೇಕಾದ ನೀರಿನ ಹಕ್ಕನ್ನು ರಕ್ಷಿಸುವ ಜವಾಬ್ದಾರಿ ನಮ್ಮ ಮೇಲಿದೆ. ಅದೇ ಸಮಯದಲ್ಲಿ ಕರ್ನಾಟಕದ ಹಕ್ಕನ್ನೂ ರಕ್ಷಿಸಬೇಕಿದೆ. ಸುಪ್ರೀಂ ಕೋರ್ಟ್ 177 ಟಿಎಂಸಿ ನೀರಿನ ಹಕ್ಕಿನ ಕುರಿತು ಸ್ಪಷ್ಟಪಡಿಸಿದೆ. ಅವರಿಗೆ ಸಲ್ಲಬೇಕಾದ ನೀರನ್ನು ಒದಗಿಸುವುದು ನಮ್ಮ ಕರ್ತವ್ಯ. ಅಣೆಕಟ್ಟು ನಿರ್ಮಿಸಿ ಅವರಿಗೂ ನೀರು ಕೊಡುತ್ತೇವೆ. ತಮಿಳುನಾಡಿನವರು ಬಂದು ಚರ್ಚೆ ನಡೆಸಲಿ. ಯೋಜನೆಯ ವಾಸ್ತವಾಂಶಗಳನ್ನು ವಿವರಿಸಲು ಸಿದ್ಧನಿದ್ದೇನೆ ಎಂದರು.

ಕೇಂದ್ರದ ಮೇಲೆ ಒತ್ತಡ: ಮೇಕೆದಾಟು ಯೋಜನೆ ಅನುಷ್ಠಾ ನಕ್ಕೆ ಅಗತ್ಯವಿರುವ ಅರಣ್ಯ-ಪರಿಸರ ಇಲಾಖೆಯ ಅನುಮತಿಗಳನ್ನು ನೀಡುವಂತೆ ಕೇಂದ್ರದ ಗಮನ ಸೆಳೆದಿದ್ದೇನೆ. ಎಲ್ಲ ಪಕ್ಷಗಳೂ ಯೋಜನೆ ವಿಚಾರದಲ್ಲಿ ಒಪ್ಪಿಗೆ ಸೂಚಿಸಿವೆ. ಅಗತ್ಯ ದಾಖಲೆಗಳನ್ನು ಸಲ್ಲಿಸುವ ಕೆಲಸ ನಡೆಯುತ್ತಿದೆ. ಅನುಮತಿಗಳು ದೊರೆತರೆ ಯೋಜನೆಯನ್ನು ಮುಂದಕ್ಕೆ ಕೊಂಡೊಯ್ಯಲು ರಾಜ್ಯ ಸರಕಾರ ಸಿದ್ಧವಿದೆ ಎಂದು ತಿಳಿಸಿದರು.

ಅಭಿವೃದ್ಧಿಗೆ ಸಹಕಾರ: ರಾಜಕಾರಣ ಮಾಡುವಾಗ ಸ್ಪರ್ಧೆ ಮಾಡೋಣ. ಅಭಿವೃದ್ಧಿ ವಿಚಾರದಲ್ಲಿ ಸಹಕಾರ ನೀಡೋಣ. ರಾಜಕಾರಣದಲ್ಲಿ ನಾವು ರಾಜಕೀಯ ಮಾಡುತ್ತೇವೆ. ಆದರೆ, ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಕೇಂದ್ರದ ಸಹಕಾರ ಪಡೆಯುವುದು ನಮ್ಮ ಜವಾಬ್ದಾರಿ ಎಂದ ಅವರು, ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎಂಬ ಬೇಡಿಕೆಯನ್ನು ಕೇಂದ್ರದ ಮುಂದಿಟ್ಟಿದ್ದೇನೆ. ನಮ್ಮ ಮೆಟ್ರೊ ಯೋಜನೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವೆ ಸಮಾನ ಪಾಲುದಾರಿಕೆ ಇರಬೇಕು ಎಂದು ಒತ್ತಾಯಿಸಿದ್ದೇನೆ. ಮೆಟ್ರೋ ಸಂಪರ್ಕವನ್ನು ಮುಂದಿನ ಹಂತಗಳಲ್ಲಿ 500 ಕಿ.ಮೀ.ವರೆಗೆ ವಿಸ್ತರಿಸುವ ಗುರಿ ಇದ್ದು, ಬಾಕಿ ಇರುವ ಪ್ರಸ್ತಾವನೆಗಳಿಗೂ ತ್ವರಿತ ಅನುಮೋದನೆ ನೀಡಲು ಕೋರಿದ್ದೇನೆ ಎಂದರು.

ಡಬಲ್ ಡೆಕ್ಕರ್ ಫ್ಲೈಓವರ್: ಬೆಂಗಳೂರಿನ ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಗೆ ಕೇಂದ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಸಚಿವ ಕೃಷ್ಣ ಬೈರೇಗೌಡ ಅವರೊಂದಿಗೆ ಪ್ರಧಾನಿಗೆ ಯೋಜನೆ ಅಗತ್ಯವನ್ನು ವಿವರಿಸಿದ್ದೇನೆ. ಬೆಂಗಳೂರಿನಲ್ಲಿ ರಸ್ತೆಗಳ ಪ್ರಮಾಣ ಕೇವಲ ಶೇ.8ರಷ್ಟಿದೆ. ಇತರ ನಗರಗಳಲ್ಲಿ ಇದು ಶೇ.18ರಿಂದ 20ರಷ್ಟಿದೆ. ಬೆಂಗಳೂರಿನಲ್ಲಿ ಪ್ರತಿ ಚದರ ಅಡಿಗೆ ಸುಮಾರು 50ಸಾವಿರ ರೂ.ಪರಿಹಾರ ನೀಡಬೇಕಾದ ಸ್ಥಿತಿ ಇದೆ.

ಇದನ್ನು ಸರಕಾರವೊಂದರಿಂದಲೇ ಭರಿಸುವುದು ಕಷ್ಟ. ಹೀಗಾಗಿ ಕೇಂದ್ರ-ರಾಜ್ಯ ಸರಕಾರಗಳು ಒಟ್ಟಾಗಿ ವೆಚ್ಚ ಹಂಚಿಕೊಳ್ಳುವ ಮೂಲಕ ಡಬಲ್ ಡೆಕ್ಕರ್ ಯೋಜನೆ ಜಾರಿಗೊಳಿಸಬೇಕಿದೆ ಎಂದು ಮನವರಿಕೆ ಮಾಡಿದ್ದೇನೆ. ಈ ಸಂಬಂಧ ಸರ್ವಪಕ್ಷ ನಿಯೋಗ ಕರೆದುಕೊಂಡು ಬರುವುದಾಗಿಯೂ ತಿಳಿಸಿದ್ದು, ಅದಕ್ಕೆ ಒಪ್ಪಿದ್ದಾರೆ. ನಾನು ರಾಜ್ಯದ ಪ್ರತಿನಿಧಿಯಾಗಿ ರಾಜ್ಯದ ಹಿತಕ್ಕಾಗಿ ನನ್ನ ಕೆಲಸ ಮಾಡುತ್ತಿರುವೆ ಎಂದರು.

Tags

DK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X