Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಾರದರ್ಶಕ ಪರೀಕ್ಷಾ ವ್ಯವಸ್ಥೆ ಜಾರಿ...

ಪಾರದರ್ಶಕ ಪರೀಕ್ಷಾ ವ್ಯವಸ್ಥೆ ಜಾರಿ ಮಾಡಲು ಸರಕಾರ ಬದ್ಧ : ಮುಖ್ಯಮಂತ್ರಿ

ವಾರ್ತಾಭಾರತಿವಾರ್ತಾಭಾರತಿ20 Nov 2026 11:18 PM IST
share
ಪಾರದರ್ಶಕ ಪರೀಕ್ಷಾ ವ್ಯವಸ್ಥೆ ಜಾರಿ ಮಾಡಲು ಸರಕಾರ ಬದ್ಧ : ಮುಖ್ಯಮಂತ್ರಿ

ಬೆಂಗಳೂರು : ರಾಜ್ಯದಲ್ಲಿ ನಡೆಯುವ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಹಾಗೂ ಹುದ್ದೆಗಳ ನೇಮಕಾತಿ ಪರೀಕ್ಷೆಗಳನ್ನು ಸುಭದ್ರ, ಪಾರದರ್ಶಕ ವ್ಯವಸ್ಥೆಯ ಮೂಲಕ ನಡೆಸಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಶುಕ್ರವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಪರೀಕ್ಷಾ ಸುಧಾರಣೆಗಳ ಕುರಿತ ಉನ್ನತಾಧಿಕಾರ ಸಮಿತಿಯ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ನೇಮಕಾತಿ ಪರೀಕ್ಷೆಗಳಲ್ಲಿ ಪಡೆಯುವ ಅಂಕಗಳ ಜೊತೆಗೆ ಅಭ್ಯರ್ಥಿಗಳು ಶಾಲಾ ಕಾಲೇಜುಗಳಲ್ಲಿ ಪಡೆದಿರುವ ಅಂಕಗಳನ್ನು ಕೂಡ ಪರಿಗಣಿಸುವ ಅಗತ್ಯವಿದೆ ಎಂದರು.

ಇತ್ತೀಚೆಗೆ ನಡೆದ ಕೆಎಎಸ್ ಪೂರ್ವಭಾವಿ ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದು, ಪರೀಕ್ಷಾ ಅಕ್ರಮಗಳಿಗೆ ಅವಕಾಶ ನೀಡಲಾಗಿಲ್ಲ. ನೀಟ್ ಪರೀಕ್ಷೆಯಲ್ಲಿ ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ರಾಜ್ಯದ ಅಭ್ಯರ್ಥಿಗಳಿಗೆ ಹೆಚ್ಚಿನ ಅವಕಾಶ ದೊರೆಯಬೇಕು ಎಂದು ಮುಖ್ಯಮಂತ್ರಿ ಪ್ರತಿಪಾದಿಸಿದರು.

ಕೃಪಾಂಕ ಅಗತ್ಯ: ನೀಟ್ ಮುಂತಾದ ರಾಷ್ಟ್ರ ಮಟ್ಟದ ಪರೀಕ್ಷೆಗಳಲ್ಲಿ ನಗರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧಿಸುವುದು ಕಷ್ಟಕರವಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಬೇಕು. ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಸೀಟುಗಳಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡಬೇಕು ಎಂದು ಮುಖ್ಯಮಂತ್ರಿ ಆಗ್ರಹಿಸಿದರು.

ಪರೀಕ್ಷಾ ಸುಧಾರಣೆಗೆ ಮೆಚ್ಚುಗೆ: ರಾಷ್ಟ್ರಮಟ್ಟದ ಪರೀಕ್ಷಾ ಸುಧಾರಣಾ ಉನ್ನತಾಧಿಕಾರ ಸಮಿತಿಯ ಅಧ್ಯಕ್ಷರಾ ನಂದನ್ ನಿಲೇಕಣಿ ಮಾತನಾಡಿ, ಕೆಇಎ ಪರೀಕ್ಷಾ ವ್ಯವಸ್ಥೆ ಹಾಗೂ ಕೆಪಿಎಸ್‍ಸಿಯಲ್ಲಿ ಇತ್ತೀಚೆಗೆ ಕೈಗೊಂಡ ಸುಧಾರಣಾ ಕ್ರಮಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ದೇಶದ ಬಹುತೇಕ ರಾಜ್ಯಗಳು ನೇಮಕಾತಿ ಪರೀಕ್ಷೆಗಳು ಕಂಪ್ಯೂಟರೀಕರಣವಾಗಬೇಕು ಎಂದು ಒಪ್ಪಿದ್ದು, ಗ್ರಾಮೀಣ ಮತ್ತು ಬಡ ಅಭ್ಯರ್ಥಿಗಳಿಗೆ ಈ ವ್ಯವಸ್ಥೆ ಕಷ್ಟಕರವಾಗದಂತೆ ಎಚ್ಚರವಹಿಸಬೇಕಿದೆ ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಸಮಿತಿಯ ವರದಿಯು ಅಂತಿಮ ಹಂತದಲ್ಲಿದ್ದು, ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಶಿಫಾರಸ್ಸುಗಳಲ್ಲಿ ಸೇರಿಸಿ ಡಿಸೆಂಬರ್ ನಲ್ಲಿ ವರದಿಯನ್ನು ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ವಿಕೇಂದ್ರೀಕೃತ ನೇಮಕಾತಿ ಪರೀಕ್ಷಾ ವ್ಯವಸ್ಥೆಯಿಂದ ಕೇಂದ್ರೀಕೃತ ವ್ಯವಸ್ಥೆಯತ್ತ ನೇಮಕಾತಿ ಪರೀಕ್ಷೆಗಳು ಹೊರಳಿದ್ದು, ವಿಕೇಂದ್ರೀಕೃತ ವ್ಯವಸ್ಥೆಯ ಕಡೆಗೆ ಮರಳುವ ಬಗ್ಗೆಯೂ ವರದಿಯಲ್ಲಿ ಶಿಫಾರಸ್ಸು ಮಾಡಲಾಗುವುದು ಎಂದು ನಂದನ್ ನಿಲೇಕಣಿ ತಿಳಿಸಿದರು.

ಪಾರದರ್ಶಕ ಪರೀಕ್ಷಾ ವ್ಯವಸ್ಥೆ ರೂಪಿಸುವಲ್ಲಿ ರಾಜ್ಯ ಸರಕಾರವು ಮುಂಚೂಣಿಯಲ್ಲಿದೆ. ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ ಎಂಬ ವದಂತಿಗಳನ್ನು ತಪ್ಪಿಸಲು ಫ್ಯಾಕ್ಟ್ ಚೆಕ್ ಕೂಡ ಅಳವಡಿಕೆ ಮಾಡಲಾಗುತ್ತಿದೆ. ಸರಕಾರದ ವತಿಯಿಂದ ಅಧಿಕೃತ ಮಾಹಿತಿ ಹೊರಬೀಳುವವರೆಗೆ ಯಾವುದೇ ವದಂತಿಗಳಿಗೆ ಕಿವಿಕೊಡಬಾರದು ಎಂದು ಸೂಚಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಸಮಾಲೋಚನೆ, ಪೋಷಕರಿಗೆ ಅರಿವು ಮೂಡಿಸುವುದು ಹಾಗೂ ವಿದ್ಯಾರ್ಥಿಗಳ ಒತ್ತಡ ಕಡಿಮೆ ಮಾಡಲು 104 ಸಹಾಯವಾಣಿಯನ್ನು ಒದಗಿಸಲಾಗಿದೆ. ಸುಭದ್ರ ಮತ್ತು ಸುರಕ್ಷಿತ ಪರೀಕ್ಷಾ ವ್ಯವಸ್ಥೆ ರೂಪಿಸಲು ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸುವ ಕುರಿತು ಸರಕಾರ ಚಿಂತನೆ ನಡೆಸಿದೆ. ಈ ಮಾಹಿತಿಯನ್ನು ಉನ್ನತಾಧಿಕಾರ ಸಮಿತಿಗೆ ಒದಗಿಸಲಾಗುವುದು ಎಂದು ಅವರು ತಿಳಿಸಿದರು.

ಕಂಪ್ಯೂಟರ್ ಆಧಾರಿತ ಪರೀಕ್ಷಾ ವ್ಯವಸ್ಥೆ: ವಿವಿಧ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ನಡೆಸುವ ಪರೀಕ್ಷೆಗಳಿಗೆ 43,91,248 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, 30,50,996 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಈ ಪರೀಕ್ಷೆಗಳಲ್ಲಿ ಒಟ್ಟು 17,29,318 ಒಎಂಆರ್ ಶೀಟ್ ಗಳನ್ನು ಬಳಸಲಾಗಿದೆ ಎಂದು ರಾಜ್ಯ ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ನೇಮಕಾತಿ ಸುಧಾರಣಾ ಸಮಿತಿ ಅಧ್ಯಕ್ಷ ಎಸ್.ವಿ.ರಂಗನಾಥ್ ತಿಳಿಸಿದರು.

ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ನಡೆಸಲು ಕಂಪ್ಯೂಟರ್ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಭಾರಿ ವೆಚ್ಚವಾಗಲಿದೆ. ಈ ಹಿನ್ನೆಲೆಯಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷಾ ಕೇಂದ್ರಗಳನ್ನು ವಿವಿಧ ಪರೀಕ್ಷೆಗಳನ್ನು ನಡೆಸುವ ಉದ್ದೇಶಕ್ಕಾಗಿಯೇ ಸ್ಥಾಪಿಸುವ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು.

ಈ ವೆಚ್ಚವನ್ನು ಕೇಂದ್ರ ಪುರಸ್ತಕೃ ಯೋಜನೆಗಳು ಹಾಗೂ ರಾಜ್ಯ ಸರಕಾರದ ಅನುದಾನದಿಂದ ಹಂತ ಹಂತವಾಗಿ ಭರಿಸಬಹುದಾಗಿದೆ. ಪ್ರಶ್ನೆಗಳ ಸಂಗ್ರಹ ಪ್ರಸ್ತುತ 1:10 ಇದ್ದು, ಇದನ್ನು 1:100 ಗೆ ಏರಿಕೆ ಮಾಡುವ ಅಗತ್ಯವಿದೆ ಎಂದು ವಿವರಿಸಿದ ಅವರು, ನಮ್ಮ ಸಮಿತಿಯ ವರದಿಯು ಅಂತಿಮ ಹಂತದಲ್ಲಿದ್ದು ವಾರದೊಳಗಾಗಿ ವರದಿಯನ್ನು ಸರಕಾರಕ್ಕೆ ಸಲ್ಲಿಸುವುದಾಗಿ ಹೇಳಿದರು.

ವಿಟಿಯು, ಆರೋಗ್ಯ ವಿವಿಯಲ್ಲಿ ಆನ್‍ಲೈನ್ ಪರೀಕ್ಷೆ: ರಾಜ್ಯದಲ್ಲಿ ವಿಟಿಯು ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಗಳಲ್ಲಿ ಆನ್‍ಲೈನ್ ಪರೀಕ್ಷಾ ವ್ಯವಸ್ಥೆಗಳು ಅತ್ಯಂತ ಪಾರದರ್ಶಕವಾಗಿ ನಡೆಯುತ್ತಿವೆ ಎಂದು ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ವಿವರಿಸಿದರು.

ಆಧಾರ್ ಆಧಾರಿತ ದೃಢೀಕರಣ ಅಗತ್ಯ: ರಾಜ್ಯದಲ್ಲಿ ಕೆಇಎ ಕಳೆದ ಮೂರು ವರ್ಷಗಳಲ್ಲಿ ಕೈಗೊಂಡಿರುವ ಸುಧಾರಣಾ ಕ್ರಮಗಳನ್ನು ವಿವರಿಸಿದ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ, ಅಭ್ಯರ್ಥಿಯ ದೃಢೀಕರಣವನ್ನು ವಿವಿಧ ಡಾಟಾಬೇಸ್ ಗಳ ಮೂಲಕ ಪರಿಶೀಲಿಸಿ, ಮುಖಚರ್ಯೆಯನ್ನು ಪ್ರತ್ಯೇಕ ಆ್ಯಪ್‍ನಲ್ಲಿ ದೃಢೀಕರಣ ಮಾಡಲಾಗುತ್ತಿದೆ ಎಂದು ಹೇಳಿದರು.

ಅರ್ಜಿ ಸಲ್ಲಿಸುವುದರಿಂದ ಪ್ರವೇಶ ಪ್ರಕ್ರಿಯೆ/ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಆಧಾರ್ ಆಧಾರಿತ ದೃಢೀಕರಣವನ್ನು ಬಳಸುವುದು ಅಗತ್ಯವಾಗಿದೆ. ಇ-ಆಡಳಿತದಿಂದ ತಾಂತ್ರಿಕ ನೆರವು, ನಕಲಿ ಅಭ್ಯರ್ಥಿಗಳ ಹಾವಳಿ ತಡೆಗಟ್ಟುವುದು ಮುಂತಾದ ಕ್ರಮಗಳನ್ನು ಅಳವಡಿಸಲು ಕ್ರಮ ವಹಿಸಲಾಗುತ್ತಿದೆ. ಕೆಇಎ, ಕೆಪಿಎಸ್‍ಸಿ ಮುಂತಾದ ಸಂಸ್ಥೆಗಳಲ್ಲಿ ತಮ್ಮದೇ ಆದ ತಾಂತ್ರಿಕ ಸಿಬ್ಬಂದಿ ಹೊಂದುವುದು ಅತಿ ಅಗತ್ಯವಾಗಿದೆ ಎಂದು ಅವರು ವಿವರಿಸಿದರು.

ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಪರೀಕ್ಷಾ ಸುಧಾರಣೆ ಕುರಿತ ಸಚಿವ ಸಂಪುಟ ಉಪಸಮಿತಿ ಅಧ್ಯಕ್ಷ ಯು.ಟಿ.ಖಾದರ್, ಪರೀಕ್ಷಾ ಸುಧಾರಣೆ ಕುರಿತು ರಾಜ್ಯ ಸರಕಾರ ರಚಿಸಿರುವ ಸಮಿತಿ ಸದಸ್ಯ ನಿವೃತ್ತ ಐಎಎಸ್ ಅಧಿಕಾರಿ ವಿಜಯಭಾಸ್ಕರ್ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags

DK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X