Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ತ್ಯಾಜ್ಯ ನಿರ್ವಹಣೆ ಹಾಗೂ ನಗರ...

‘ತ್ಯಾಜ್ಯ ನಿರ್ವಹಣೆ ಹಾಗೂ ನಗರ ಮೂಲಸೌಕರ್ಯ ಕ್ಷೇತ್ರದಲ್ಲಿ ಸಹಯೋಗ’ : ಜಪಾನ್ ಸಂಸ್ಥೆಯೊಂದಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ25 Nov 2026 10:44 PM IST
share
‘ತ್ಯಾಜ್ಯ ನಿರ್ವಹಣೆ ಹಾಗೂ ನಗರ ಮೂಲಸೌಕರ್ಯ ಕ್ಷೇತ್ರದಲ್ಲಿ ಸಹಯೋಗ’ : ಜಪಾನ್ ಸಂಸ್ಥೆಯೊಂದಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚರ್ಚೆ

ಟೋಕಿಯೋ : ತ್ಯಾಜ್ಯದಿಂದ ಇಂಧನ ಉತ್ಪಾದನೆ, ನಗರ ಘನತ್ಯಾಜ್ಯ ನಿರ್ವಹಣೆ ಮತ್ತು ನಗರ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಸಹಯೋಗದ ಅವಕಾಶಗಳನ್ನು ಅನ್ವೇಷಿಸುವ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅವರೊಂದಿಗೆ ಜಪಾನ್‍ನ ಜೆಎಫ್‍ಇ ಇಂಜಿನಿಯರಿಂಗ್ ಕಾರ್ಪೊ ರೇಷನ್ ವ್ಯವಸ್ಥಾಪಕ ನಿರ್ದೇಶಕ ಕೀಚಿ ನಾಗಯಾ ಮತ್ತು ಕಂಪನಿಯ ಹಿರಿಯ ಪ್ರತಿನಿಧಿಗಳನ್ನು ಭೇಟಿ ಮಾಡಿದರು.

ಜಪಾನ್ ಮತ್ತು ಭಾರತ ಸೇರಿದಂತೆ ಇತರ ಮಾರುಕಟ್ಟೆಗಳಲ್ಲಿ ನಗರ ಘನತ್ಯಾಜ್ಯವನ್ನು ಇಂಧನವನ್ನಾಗಿ ಪರಿವರ್ತಿಸುವಲ್ಲಿ ಜೆಎಫ್‍ಇ ಇಂಜಿನಿಯರಿಂಗ್ ಹೊಂದಿರುವ ಅನುಭವದ ಕುರಿತು ಈ ಸಂದರ್ಭದಲ್ಲಿ ಚರ್ಚೆ ನಡೆಯಿತು.

ಲ್ಯಾಂಡ್ ಫಿಲ್ ಪ್ರದೇಶಗಳಿಗೆ ಸೇರುವ ತ್ಯಾಜ್ಯದ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವುದರ ಜೊತೆಗೆ, ಸುಮಾರು 15 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಸಾಮಥ್ರ್ಯವಿರುವ ತ್ಯಾಜ್ಯದಿಂದ ಇಂಧನ ತಯಾರಿಸುವ ಘಟಕಗಳನ್ನು ಅಭಿವೃದ್ಧಿಪಡಿಸುವ ತನ್ನ ಪರಿಣತಿಯನ್ನು ಕಂಪನಿಯು ಹಂಚಿಕೊಂಡಿತು.

ತ್ಯಾಜ್ಯ ಸಂಸ್ಕರಣೆ, ಇಂಧನ ಉತ್ಪಾದನೆ ಮತ್ತು ದೀರ್ಘಕಾಲೀನ ಕಾರ್ಯಾಚರಣೆಗಳನ್ನು ಸಂಯೋಜಿಸುವ ಮೂಲಕ, ಕರ್ನಾಟಕದ ನಗರ ತ್ಯಾಜ್ಯ ನಿರ್ವಹಣಾ ಅಗತ್ಯಗಳಿಗೆ ತಕ್ಕಂತೆ ಜೆಎಫ್‍ಇ ಸಂಸ್ಥೆಯ ತಂತ್ರಜ್ಞಾನ ಮತ್ತು ಕಾರ್ಯನಿರ್ವಹಣಾ ಮಾದರಿಗಳನ್ನು ಅಳವಡಿಸಿಕೊಳ್ಳುವ ಸಾಧ್ಯತೆಗಳ ಕುರಿತು ನಿಯೋಗವು ಪರಿಶೀಲಿಸಿತು.

ಆಯಾ ನಗರಗಳ ತ್ಯಾಜ್ಯದ ಸ್ವರೂಪ, ಸಂಗ್ರಹಣಾ ವ್ಯವಸ್ಥೆ, ಪ್ರಮಾಣ ಮತ್ತು ಮೂಲಸೌಕರ್ಯ ಅಗತ್ಯಗಳಿಗೆ ಅನುಗುಣವಾಗಿ ವಿಶೇಷ ಪರಿಹಾರಗಳನ್ನು ಅಭಿವೃದ್ಧಿಪಡಿಸುವ ಕುರಿತು ಚರ್ಚಿಸಲಾಯಿತು. ಬೆಂಗಳೂರಿನ ಹೊರತಾಗಿ ಕರ್ನಾಟಕದ ಇತರ ಪ್ರಮುಖ ನಗರಗಳಿಗೂ ಸುಧಾರಿತ ತ್ಯಾಜ್ಯದಿಂದ ಇಂಧನ ಉತ್ಪಾದಿಸುವ ಪರಿಹಾರಗಳನ್ನು ವಿಸ್ತರಿಸಲು ನಮ್ಮ ಸರಕಾರ ಆಸಕ್ತಿ ಹೊಂದಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಯೋಜನೆಯ ಅಭಿವೃದ್ಧಿ, ಅನುಷ್ಠಾನ ಮತ್ತು ದೀರ್ಘಕಾಲೀನ ಕಾರ್ಯಾಚರಣೆಗಳಿಗಾಗಿ ಜಪಾನಿನ ತಂತ್ರಜ್ಞಾನ ಮತ್ತು ಇಂಜಿನಿಯರಿಂಗ್ ಪರಿಣತಿಯನ್ನು ಸ್ಥಳೀಯ ಸಾಮಥ್ರ್ಯಗಳೊಂದಿಗೆ ಸಂಯೋಜಿಸಲು ಸೂಕ್ತ ಸ್ಥಳೀಯ ಪಾಲುದಾರರನ್ನು ಗುರುತಿಸುವ ಕುರಿತು ಉಭಯ ಕಡೆಯವರು ಚರ್ಚಿಸಿದರು.

ರಾಜ್ಯಾದ್ಯಂತ ಕಾರ್ಯಸಾಧುವಾದ ತ್ಯಾಜ್ಯದಿಂದ ಇಂಧನ ಉತ್ಪಾದನೆ ಮತ್ತು ನಗರ ಮೂಲಸೌಕರ್ಯ ಯೋಜನೆಗಳನ್ನು ಅನ್ವೇಷಿಸಲು ಜೆಎಫ್‍ಇ ಇಂಜಿನಿಯರಿಂಗ್‍ನೊಂದಿಗೆ ಮುಂದಿನ ಹಂತದ ಮಾತುಕತೆಗಳಿಗೆ ನಾವು ಅನುವು ಮಾಡಿಕೊಡಲಿದ್ದೇವೆ ಎಂದು ಶಿವಕುಮಾರ್ ಹೇಳಿದರು.

Tags

DK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X