Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಶಾ ಕಾರ್ಯಕರ್ತೆಯರ ಬಗ್ಗೆ ಮಾತನಾಡುವ...

ಆಶಾ ಕಾರ್ಯಕರ್ತೆಯರ ಬಗ್ಗೆ ಮಾತನಾಡುವ ನೈತಿಕತೆ ಎನ್‍ಡಿಎ ನಾಯಕರಿಗಿಲ್ಲ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ27 Nov 2026 6:35 PM IST
share
ಆಶಾ ಕಾರ್ಯಕರ್ತೆಯರ ಬಗ್ಗೆ ಮಾತನಾಡುವ ನೈತಿಕತೆ ಎನ್‍ಡಿಎ ನಾಯಕರಿಗಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು : ಆಶಾ ಕಾರ್ಯಕರ್ತೆಯರ ಬಗ್ಗೆ ಮಾತನಾಡುವ ನೈತಿಕತೆ ಎನ್‍ಡಿಎ ನಾಯಕರಿಗೆ ಇಲ್ಲ. ಅವರಿಗೆ ಆಶಾ ಕಾರ್ಯಕರ್ತೆಯರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರಕಾರ ನೀಡಬೇಕಿರುವ ಹಣದ ಬಗ್ಗೆ ಧ್ವನಿ ಎತ್ತಲಿ. ಇದುವರೆಗೂ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ಈ ವಿಚಾರವಾಗಿ ಮಾತನಾಡಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿಕಾರಿದರು.

ಶುಕ್ರವಾರ ನಗರದ ಕೆಂಗೇರಿಯಲ್ಲಿರುವ ಬಿಜಿಎಸ್ ಮೈದಾನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಎನ್‍ಡಿಎ ಮೈತ್ರಿಕೂಟದ ಯಾವುದೇ ನಾಯಕರ ಹೇಳಿಕೆಗೆ ಉತ್ತರ ನೀಡುವುದಿಲ್ಲ. ಕೇಂದ್ರ ಸರಕಾರ ಆಶಾ ಕಾರ್ಯಕರ್ತೆಯರಿಗೆ ಈವರೆಗೂ 1 ರೂ. ಹೆಚ್ಚಳ ಮಾಡಿಲ್ಲ. ಅವರ ವೇತನ ಹೆಚ್ಚಳ ಮಾಡಿರುವುದು ನಾವು ಎಂದು ಹೇಳಿದರು.

ಆಶಾ ಕಾರ್ಯಕರ್ತೆಯರ ವಿಚಾರದಲ್ಲಿ ನಾವು ರಾಜಕೀಯ ಮಾಡಲ್ಲ. ಆಶಾ ಕಾರ್ಯಕರ್ತೆಯರ ಯೋಜನೆ ತಂದಿದ್ದು ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದಲ್ಲಿ ಪ್ರಧಾನಿಯಾಗಿದ್ದ ಡಾ.ಮನಮೋಹನ್ ಸಿಂಗ್ ಎಂದು ಶಿವಕುಮಾರ್ ತಿಳಿಸಿದರು.

ಸಹಿ ಹಾಕಲೇಬೇಕು ಎಂದು ಪಟ್ಟು ಹಿಡಿದರೆ ಅದು ಸಾಧ್ಯವಿಲ್ಲ: ನಿಮ್ಮ ಮೇಲೆ ನಮಗೆ ನಂಬಿಕೆ ಇದೆ. ನಮಗೆ ಅವಕಾಶ ಕೊಟ್ಟರೆ ನಾವು ಹೋಗಿ ನಮ್ಮ ಕೆಲಸ ಮಾಡಲು ಸಿದ್ಧರಿದ್ದೇವೆ ಎಂದು ಅನೇಕ ಆಶಾ ಕಾರ್ಯಕರ್ತೆಯರು ಕರೆ ಹಾಗೂ ಸಂದೇಶದ ಮೂಲಕ ನನಗೆ ಹೇಳುತ್ತಿದ್ದಾರೆ. ಆಶಾ ಕಾರ್ಯಕರ್ತೆಯರಲ್ಲೆ ಬಿರುಕು ತರಬಾರದು ಎಂಬ ಉದ್ದೇಶಕ್ಕೆ ನಾನು ಕೂಡ ಮೌನವಾಗಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದರು.

ನಿಮ್ಮ ಕಷ್ಟಗಳ ಬಗ್ಗೆ ನಮಗೆ ಅರಿವಿದೆ. ನೀವು ನಿಮ್ಮ ಕೆಲಸದಲ್ಲಿ ನಿರತರಾಗಿ. ನೀವು ಸೇವೆಯ ಉದ್ದೇಶದಿಂದ ಬಂದಿದ್ದು, ಹೋರಾಟಕ್ಕಲ್ಲ. ಹೋರಾಟ ಎಲ್ಲರ ಹಕ್ಕು ಇದೆ. ನಾವು ನಿಮ್ಮ ಜತೆ ಚರ್ಚೆ ಮಾಡುತ್ತೇವೆ. ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ ಅವರು ನಿಮ್ಮ ಜತೆ ಏನು ಮಾತನಾಡಿದ್ದಾರೆ ಎಂಬ ಅರಿವು ನನಗಿದೆ. ಆದರೆ ಸಹಿ ಹಾಕಲೇಬೇಕು ಎಂದು ಪಟ್ಟು ಹಿಡಿದರೆ ಅದು ಸಾಧ್ಯವಿಲ್ಲ. ನನ್ನ ಮೇಲೆ ವಿಶ್ವಾಸ ಇಟ್ಟರೆ ನಾನು ಖಂಡಿತವಾಗಿ ಸಹಾಯ ಮಾಡುವೆ ಎಂದು ಅವರು ಭರವಸೆ ನೀಡಿದರು.

ಆಶಾ ಕಾರ್ಯಕರ್ತೆಯರು ನಮ್ಮ ಸಹೋದರಿಯರು: ರಾಜಕಾರಣ ಮಾಡುವವರು ರಾಜಕಾರಣ ಮಾಡಲಿ. ನನ್ನ ಅಭ್ಯಂತರವಿಲ್ಲ. ನನಗೆ ಈ ವಿಚಾರದಲ್ಲಿ ರಾಜಕಾರಣದ ಅವಶ್ಯಕತೆ ಇಲ್ಲ. ಆಶಾ ಕಾರ್ಯಕರ್ತೆಯರು ನಮ್ಮ ಸಹೋದರಿಯರು. ಅವರ ಹಿತದ ಬಗ್ಗೆ ನಮಗೆ ಕಾಳಜಿ ಇದೆ. ನೀವು ಪ್ರತಿಭಟನೆ ಕೈಬಿಡಿ ಎಂದು ನಾನು ಮತ್ತೊಮ್ಮೆ ವಿನಯದಿಂದ ಮನವಿ ಮಾಡುವೆ. ನಾನು ಎಲ್ಲರನ್ನು ಕರೆದು ತೀರ್ಮಾನ ಮಾಡುವೆ ಎಂದು ಶಿವಕುಮಾರ್ ತಿಳಿಸಿದರು.

ನಾವು ನುಡಿದಂತೆ ನಡೆಯುತ್ತೇವೆ: ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಬಗ್ಗೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದಿರಿ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹೌದು, ನಾವು ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದು, ನುಡಿದಂತೆ ನಡೆಯುತ್ತೇವೆ. ಕೇಂದ್ರ ಸರಕಾರ ತನ್ನ ಪಾಲಿನ ಮೊತ್ತವನ್ನು ಹೆಚ್ಚಳ ಮಾಡಲು ಅವರು ಒತ್ತಡ ಹಾಕಲಿ ಎಂದು ಸವಾಲೆಸೆದರು.

Tags

DK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X