Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆರ್ಯವೈಶ್ಯ ಸಮುದಾಯದ ಬೇಡಿಕೆ...

ಆರ್ಯವೈಶ್ಯ ಸಮುದಾಯದ ಬೇಡಿಕೆ ಈಡೇರಿಸುತ್ತೇನೆ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ24 Aug 2026 12:48 AM IST
share
ಆರ್ಯವೈಶ್ಯ ಸಮುದಾಯದ ಬೇಡಿಕೆ ಈಡೇರಿಸುತ್ತೇನೆ : ಡಿ.ಕೆ.ಶಿವಕುಮಾರ್

ಬೆಂಗಳೂರು : ಹದಿನೈದು ದಿನಗಳಲ್ಲಿ ಆರ್ಯವೈಶ್ಯ ಸಮುದಾಯದ ಎರಡು ಬೇಡಿಕೆ ಈಡೇರಿಸುತ್ತೇನೆ. ಆದರೆ, ಮುಂಬರಲಿರುವ 2028ಕ್ಕೆ ನೀವು ನಮ್ಮ ಪಕ್ಷಕ್ಕೆ ಮತ ಹಾಕುವ ಮೂಲಕ ಮತ್ತೆ ನನ್ನನ್ನು ಸಿಎಂ ಆಗಿ ಅಧಿಕಾರಕ್ಕೆ ತರುವುದು ನಿಮ್ಮ ಕೆಲಸ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ರವಿವಾರ ನಗರದ ಫ್ರೀಡ್‍ಂ ಪಾರ್ಕ್‍ನಲ್ಲಿ ಕರ್ನಾಟಕ ಆರ್ಯವೈಶ್ಯ ಮಹಾಸಭಾ ಆಯೋಜಿಸಿದ್ದ ಗ್ಲೋಬಲ್ ಆಕ್ಸಿಲರೇಟರ್ ವಿಷನ್ ಸಮಿಟ್ ಪ್ರಚಾರ ಅಭಿಯಾನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಮ್ಮ ಸಮಸ್ಯೆಗೆ ಸ್ವಾತಂತ್ರ್ಯ ಕೊಡಲು ನಾನು ಬದ್ಧನಾಗಿದ್ದೇನೆ. ನನಗೆ ಜೈಕಾರ ಬೇಡ ಮತ ಹಾಕಿ ಎಂದರು.

ಬನಶಂಕರಿಯ ಜಾಗದ ಬೇಡಿಕೆ ಹಾಗೂ ನೆಲಮಂಗಲದ ದಾಬಸ್‍ಪೇಟೆಯಲ್ಲಿ ವಿದ್ಯಾಸಂಸ್ಥೆಗೆ ಎದುರಾಗಿರುವ ಸಮಸ್ಯೆಗಳ ಕುರಿತು ಸಮುದಾಯದ ಮುಖಂಡರು ಪ್ರಸ್ತಾಪಿಸಿದ್ದಾರೆ. ಈ ಸಮಸ್ಯೆಗಳಿಗೆ ಮುಂದಿನ 15 ದಿನಗಳಿಂದ ಒಂದು ತಿಂಗಳೊಳಗೆ ಸೂಕ್ತ ಪರಿಹಾರ ಕಲ್ಪಿಸಲಾಗುವುದು ಎಂದರು.

ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್.ಸುಧೀಂದ್ರ ಮಾತನಾಡಿ, ಕರ್ನಾಟಕ ಆರ್ಯವೈಶ್ಯ ಮಹಾಸಭಾದಿಂದ ಡಿಸೆಂಬರ್ 25, 26, 27ರ ವರೆಗೆ ಮೂರು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಗ್ಲೋಬಲ್ ಆಕ್ಸಿಲರೇಟರ್ ವಿಷನ್ ಸಮಿಟ್ ನಡೆಯಲಿದೆ. ಕ್ರಿಯಾಶೀಲ ಯುವ ಉದ್ದಿಮೆದಾರರನ್ನು ಉತ್ತೇಜಿಸುವುದು ಈ ಸಮಿಟ್‍ನ ಮುಖ್ಯ ಉದ್ದೇಶ. ಜಾಗತೀಕ ವ್ಯಾಪಾರ, ವಹಿವಾಟುಗಳಲ್ಲಿ ಇಂದಿನ ಯುವ ಪೀಳಿಗೆಯನ್ನು ತೊಡಗಿಸಲು ಪ್ರೇರೇಪಿಸುವುದು ಆಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಕಾರ್ಯಕ್ರಮದಲ್ಲಿ ಆಂಧ್ರ ಸರಕಾರದ ವಾಣಿಜ್ಯ, ಕೈಗಾರಿಕೆ ಮತ್ತು ಆಹಾರ ಸಂಸ್ಕರಣಾ ಸಚಿವ ಟಿ.ಜಿ. ಭರತ್, ಪರಿಷತ್ ಸದಸ್ಯ ಡಿ.ಎಸ್.ಅರುಣ್, ಮಾಜಿ ಶಾಸಕ ಎಚ್.ಪಿ.ಮಂಜುನಾಥ್, ರಾಜಗೋಪಾಲ್ ಶ್ರೀರಾಮ್ ತಾತಯ್ಯ, ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ವಿ.ರಾಮಪ್ರಸಾದ್, ಆರ್ಯವೈಶ್ಯ ಮಹಾಸಭಾದ ಅಧ್ಯಕ್ಷ ಆರ್.ಪಿ.ರವಿಶಂಕರ್, ಪ್ರಧಾನ ಕಾರ್ಯದರ್ಶಿ ಕೆ.ಆರ್.ಕೃಷ್ಣ, ಖಜಾಂಚಿ ಎನ್.ಎಸ್. ಶ್ರೀನಿವಾಸ ಮೂರ್ತಿ, ಹನುಮಂತಯ್ಯ, ಎ.ಆರ್.ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Tags

D.K.Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X