Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನನ್ನ ಅಧಿಕಾರದ ಅವಧಿಯಲ್ಲಿ ಜನರ...

ನನ್ನ ಅಧಿಕಾರದ ಅವಧಿಯಲ್ಲಿ ಜನರ ಹೃದಯದಲ್ಲಿ ಉಳಿಯುವಂತಹ ಕೆಲಸ ಮಾಡುತ್ತೇನೆ : ಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ11 Nov 2026 10:02 PM IST
share
ನನ್ನ ಅಧಿಕಾರದ ಅವಧಿಯಲ್ಲಿ ಜನರ ಹೃದಯದಲ್ಲಿ ಉಳಿಯುವಂತಹ ಕೆಲಸ ಮಾಡುತ್ತೇನೆ : ಸಿಎಂ ಡಿ.ಕೆ.ಶಿವಕುಮಾರ್

ಮೈಸೂರು: “ನನ್ನ ಅಧಿಕಾರದ ಅವಧಿಯಲ್ಲಿ ಜನರ ಹೃದಯದಲ್ಲಿ ಉಳಿಯುವಂತಹ ಕೆಲಸ ಮಾಡುತ್ತೇನೆ. ನನ್ನ ಅವಧಿಯಲ್ಲಿ ಯಾರಿಗೂ ಕೆಟ್ಟದ್ದನ್ನು ಬಯಸುವುದಿಲ್ಲ. ಸಿದ್ದರಾಮಯ್ಯ ಅವರೊಂದಿಗೆ ಕೆಲಸ ಮಾಡಿದ್ದೇನೆ. ಅವರಿಗೆ ಮಾತ್ರವಲ್ಲ, ಯಾರಿಗೂ ಕೆಟ್ಟದ್ದನ್ನು ಬಯಸುವ ವ್ಯಕ್ತಿ ನಾನಲ್ಲ. ಮುಂದೆಯೂ ಯಾರಿಗೂ ಕೆಟ್ಟದ್ದನ್ನು ಬಯಸುವುದಿಲ್ಲ. ಇದು ನನ್ನ ಬದ್ಧತೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಮೈಸೂರಿನ ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಬುಧವಾರ ನಡೆದ ಸಂಶೋಧಕಿ ರಮ್ಯಾ ವಿರಚಿತ ‘ಚಲಿಸುವ ಬಂಡೆ’ ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.

“ನನ್ನ ಮೇಲೆ ಅನೇಕ ಶ್ರೀಗಳು, ಜನರು ಹಾಗೂ ನಮ್ಮ ಪಕ್ಷದ ನಾಯಕರು ವಿಶ್ವಾಸವಿಟ್ಟಿದ್ದಾರೆ. ಆ ವಿಶ್ವಾಸಕ್ಕೆ ತಕ್ಕಂತೆ ನನ್ನ ಬದುಕನ್ನು ಕಟ್ಟಿಕೊಂಡು ಹೋಗುತ್ತೇನೆ. ನನ್ನ ಜೀವನದಲ್ಲಿ ಸಾಕ್ಷಿಗುಡ್ಡೆಗಳನ್ನು ಸೃಷ್ಟಿಸುವ ಪ್ರಯತ್ನ ಮಾಡುತ್ತೇನೆ. ಈ ರಾಜ್ಯದ ರಾಜಕಾರಣದ ಬದಲಾವಣೆಗಳನ್ನು ನಾನು ಕಣ್ಣಾರೆ ನೋಡಿದ್ದೇನೆ. ಅದರ ಭಾಗವಾಗಿಯೂ ಇದ್ದೇನೆ. ಬಂಗಾರಪ್ಪನವರು, ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾದ ಸಂದರ್ಭಗಳು, ನಾನು ಪಕ್ಷದ ಅಧ್ಯಕ್ಷನಾದ ನಂತರ ನಡೆದ ಬೆಳವಣಿಗೆಗಳು, ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದ ರಾಜಕೀಯ ಸನ್ನಿವೇಶಗಳು ಸೇರಿದಂತೆ ಅನೇಕ ಘಟನೆಗಳು ನನ್ನೊಳಗಿವೆ” ಎಂದರು.

ರಾಜಕೀಯದಲ್ಲಿ ಈಜುವುದು ಸುಲಭವಲ್ಲ

ರಾಜಕಾರಣದಲ್ಲಿ ಈಜುವುದು ಸುಲಭವಲ್ಲ. ಈಜಿ ದಡ ಸೇರುವುದು ಬಹಳ ಕಷ್ಟ. ಆದರೂ ದೊಡ್ಡ ಸಾಧನೆಗಳನ್ನು ಮಾಡಲು ಪ್ರಯತ್ನಿಸಿದ್ದೇವೆ.‌ ಕೆಲವರು ಎಲ್ಲದರಲ್ಲೂ ನಕಾರಾತ್ಮಕ ಅಂಶಗಳನ್ನೇ ಹುಡುಕುತ್ತಾರೆ. ನನಗೆ ಒಂದು ತಿಂಗಳು, ಎರಡು ತಿಂಗಳು, ಮೂರು ತಿಂಗಳು ಅಥವಾ ಆರು ತಿಂಗಳು ಆಡಳಿತ ಮಾಡಲು ಅವಕಾಶ ನೀಡಿ, ಇವರು ಏನು ಮಾಡುತ್ತಾರೆ ಎಂದು ನೋಡೋಣ ಎಂದು ಕೆಲವರು ಕಾಯುತ್ತಿದ್ದಾರೆ. ವಿರೋಧ ಪಕ್ಷದವರಿಗೆ ನನ್ನ ಬೆಳವಣಿಗೆಯನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕೆಲವರಿಗೆ ನನ್ನ ಹೆಸರು ಹೇಳಲೂ ಆಗುತ್ತಿಲ್ಲ. ಆದರೆ ನಾನು ಇಂತಹ ಟೀಕೆಗಳಿಗೆ ಬಗ್ಗುವ ವ್ಯಕ್ತಿಯಲ್ಲ. ತಾಳ್ಮೆಯಿಂದ ಇದ್ದೇನೆ ಅಷ್ಟೇ. ನನಗೆ ನನ್ನ ಮೇಲೆ ಮಾತ್ರವಲ್ಲ, ಈ ರಾಜ್ಯದ ಜನರ ಮೇಲೂ ನಂಬಿಕೆ ಇದೆ ಎಂದು ಹೇಳಿದರು.

ಕುಮಾರಸ್ವಾಮಿ ಅವರೊಂದಿಗೆ ನಮಗೆ ಸಾಕಷ್ಟು ರಾಜಕೀಯ ಭಿನ್ನಾಭಿಪ್ರಾಯಗಳಿದ್ದವು. ಆದರೂ ನಮ್ಮ ಪಕ್ಷದವರು ಅವರೊಂದಿಗೆ ಕೈಜೋಡಿಸಬೇಕು ಎಂದಾಗ, ಸರ್ಕಾರದಲ್ಲಿ ಇದ್ದಷ್ಟು ದಿನವೂ ಅವರಿಗೆ ತೊಂದರೆ ಆಗಬೇಕು ಅಥವಾ ಮೋಸ ಮಾಡಬೇಕು ಎಂದು ನಾನು ಬಯಸಲಿಲ್ಲ. ಅವರ ಕೈ ಬಲಪಡಿಸಲು ಪ್ರಯತ್ನಿಸಿದೆ. ಅವರು ನಮ್ಮನ್ನು ಒಪ್ಪಿಕೊಳ್ಳುತ್ತಾರೆಯೇ ಇಲ್ಲವೇ ಎಂಬುದು ಮುಖ್ಯವಲ್ಲ. ನಮ್ಮ ಆತ್ಮಸಾಕ್ಷಿ ಒಪ್ಪಿದರೆ ಸಾಕು. ಆತ್ಮಸಾಕ್ಷಿಗಿಂತ ದೊಡ್ಡದು ಯಾವುದೂ ಇಲ್ಲ” ಎಂದರು.

“ನನಗೆ ಸಿಕ್ಕಿರುವ ಅಧಿಕಾರದ ಅವಧಿಯಲ್ಲಿ ಯಾರೊಬ್ಬರಿಗೂ ಅನಗತ್ಯ ತೊಂದರೆಯಾಗಬಾರದು ಎಂಬುದು ನನ್ನ ಆಶಯ. ಜನರಿಗೆ ಏನಾದರೂ ಸಹಾಯ ಬೇಕಿದ್ದರೆ ಅದನ್ನು ಮಾಡಿಕೊಡಲು ಸಿದ್ಧನಿದ್ದೇನೆ. ನನ್ನಿಂದ ಯಾರಿಗೂ ಕೆಡುಕಾಗಬಾರದು. ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಕೆಲಸ ಮಾಡುತ್ತೇನೆ” ಎಂದು ಭರವಸೆ ನೀಡಿದರು.

ಪದವಿ ಪಡೆದಿದ್ದು ನನ್ನ ಬದುಕಿನ ಅತ್ಯಂತ ಸಂತೋಷದ ಕ್ಷಣ

“ನಾನು ಎಸ್.ಎಂ. ಕೃಷ್ಣ ಅವರ ಸಂಪುಟದಲ್ಲಿ ಕ್ಯಾಬಿನೆಟ್ ಸಚಿವನಾದಾಗಲೂ, ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಎರಡು ಬಾರಿ ಸಚಿವನಾದಾಗಲೂ, ಈಗ ಮುಖ್ಯಮಂತ್ರಿಯಾದಾಗಲೂ ಸಿಗದಷ್ಟು ಸಂತೋಷ ನನಗೆ ಸುಮಾರು 48ನೇ ವಯಸ್ಸಿನಲ್ಲಿ ಮೈಸೂರು ವಿಶ್ವವಿದ್ಯಾಲಯದ ಮುಕ್ತ ವಿಶ್ವವಿದ್ಯಾಲಯದ ಮೂಲಕ ಪದವಿ ಪಡೆದಾಗ ಸಿಕ್ಕಿತ್ತು. ಅದು ನನ್ನ ಬದುಕಿನ ಐತಿಹಾಸಿಕ ದಿನ” ಎಂದು ಹೇಳಿದರು.

“ನಾನು ಪದವಿ ಅಂತಿಮ ವರ್ಷದಲ್ಲಿ ಓದುತ್ತಿದ್ದಾಗಲೇ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಕ್ಕಿತ್ತು. ರಾಜೀವ್ ಗಾಂಧಿ ಅವರು ವೀರಪ್ಪ ಮೊಯಿಲಿ, ಕೆ.‌ಎಚ್. ಪಾಟೀಲ್, ಕೆ ಎಚ್ ರಂಗನಾಥ್ ಸೇರಿದಂತೆ ಹಿರಿಯರು ಅನೇಕ ಯುವಕರನ್ನು ಗುರುತಿಸಿ ಟಿಕೆಟ್ ನೀಡಿದ್ದರು. ಶ್ರೀನಿವಾಸ್ ಪ್ರಸಾದ್, ರೇವಣ್ಣ, ವಿಶ್ವನಾಥ್ ಸೇರಿದಂತೆ ಅನೇಕರು ಆಗ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡಿದ್ದೆವು. ಆಗ ಚುನಾವಣೆಯಲ್ಲಿ ಸೋತಿದ್ದರೂ ರಾಜಕೀಯ ಪಯಣ ಮುಂದುವರಿಸಿದೆ” ಎಂದು ಸ್ಮರಿಸಿದರು.

"ಸಂಶೋಧಕಿ ರಮ್ಯಾ ಅವರು ತಮ್ಮ ಜೀವನದ ಹಲವು ಘಟನೆಗಳು, ಇತಿಹಾಸ ಮತ್ತು ಅಪರೂಪದ ಛಾಯಾಚಿತ್ರಗಳನ್ನು ಸಂಗ್ರಹಿಸಿ ಪುಸ್ತಕ ರೂಪದಲ್ಲಿ ತಂದಿರದ್ದಾರೆ. ನನ್ನ ಊರಿನ ಹಳೆಯ ಮನೆಯ ಚಿತ್ರವನ್ನೂ ಹುಡುಕಿ ಪುಸ್ತಕದಲ್ಲಿ ಸೇರಿಸಿದ್ದಾರೆ. ನನ್ನ ಹೆಸರಿನ ಫಲಕವಿರುವ ಮನೆಯ ಚಿತ್ರವನ್ನೂ ಗುರುತಿಸಿದ್ದಾರೆ. ಇದು ನಿಜಕ್ಕೂ ಸಾಹಸದ ಕೆಲಸ. ಅವರೊಂದಿಗೆ ಹತ್ತು ನಿಮಿಷವೂ ಕುಳಿತು ಮಾತನಾಡಲು ನನಗೆ ಸಾಧ್ಯವಾಗಲಿಲ್ಲ. ಒಬ್ಬ ಮುಖ್ಯಮಂತ್ರಿಯಾಗಿ ಅಲ್ಲ, ಒಬ್ಬ ಅಣ್ಣನಾಗಿ ಅವರಿಗೆ ಸಂಪೂರ್ಣ ಆಶೀರ್ವಾದ ನೀಡಲು ಬಯಸುತ್ತೇನೆ. ನನ್ನ ಬದುಕಿನ ಇತಿಹಾಸವನ್ನು ದಾಖಲಿಸುವ ಕೆಲಸ ಮಾಡಿದ್ದಾರೆ” ಎಂದರು.

“ಪದವಿಯ ಕೊನೆಯ ಹಂತದಲ್ಲಿ ಒಂದು ವಿಷಯ ಬಾಕಿ ಉಳಿದಿತ್ತು. ಪರೀಕ್ಷೆಗೆ ಸಿದ್ಧತೆ ನಡೆಸಲು ನನ್ನ ಅಜ್ಜನ ಬಳಿ ಹೋಗಿ ಸಲಹೆ ಕೇಳಿದ್ದೆ. ಮಹೇಶ್ ಅಣ್ಣನವರೊಂದಿಗೆ ಸೇರಿ ಅವರು ನನಗೆ ಪರೀಕ್ಷೆಯ ಪ್ರಶ್ನೆಗಳ ಬಗ್ಗೆ ಮಾರ್ಗದರ್ಶನ ನೀಡಿದ್ದರು. ಪರೀಕ್ಷೆಗೆ ತಡವಾಗಿ ಬಂದಿದ್ದಕ್ಕೆ ಬೈಗುಳವನ್ನೂ ತಿಂದಿದ್ದೆ. ನಂತರ ಪರೀಕ್ಷೆ ಬರೆದಾಗ ಚರ್ಚಿಸಿದ್ದ ಪ್ರಶ್ನೆಗಳೇ ಪ್ರಶ್ನೆಪತ್ರಿಕೆಯಲ್ಲಿ ಬಂದಿದ್ದವು. ಹೀಗೆ ಪರೀಕ್ಷೆಯಲ್ಲಿ ಉತ್ತೀರ್ಣನಾಗಿ ಪದವಿ ಪಡೆದೆ" ಎಂದರು.

ಜೈಲಿಗೆ ಹೋದಾಗಲೂ ಆತ್ಮವಿಶ್ವಾಸ ಕಳೆದುಕೊಳ್ಳಲಿಲ್ಲ

“ನಾನು ಜೈಲಿಗೆ ಹೋದಾಗಲೂ ನನ್ನ ಆತ್ಮವಿಶ್ವಾಸ ಕಳೆದುಕೊಳ್ಳಲಿಲ್ಲ. ಜೈಲಿನಿಂದ ಹೊರಬಂದು ಮತ್ತೆ ಪಕ್ಷ ಸಂಘಟಿಸುತ್ತೇನೆ, ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ, ಈ ಸ್ಥಾನದಲ್ಲಿ ಕುಳಿತುಕೊಳ್ಳುತ್ತೇನೆ ಎಂಬ ವಿಶ್ವಾಸ ನನಗಿತ್ತು. ಜೈಲಿನಲ್ಲಿದ್ದಾಗಲೂ ಅದನ್ನೇ ಯೋಚಿಸುತ್ತಿದ್ದೆ. ಆ ಸಂದರ್ಭದಲ್ಲಿ ಜನರು ಬಂದು ನನಗೆ ಧೈರ್ಯ ತುಂಬಿದರು. ನನ್ನ ಕ್ಷೇತ್ರದ ಜನರ ಬೆಂಬಲ ಮರೆಯಲು ಸಾಧ್ಯವಿಲ್ಲ. ಇಂದು ಅವರಿಗೆ ಸಮಯ ಕೊಡಲು ಸಾಧ್ಯವಾಗದಿರುವುದು ಬೇಸರದ ಸಂಗತಿ” ಎಂದರು.

“ನಾನು ಚುನಾವಣೆಗೆ ಹೋಗದಿದ್ದರೂ ಕನಕಪುರ ಕ್ಷೇತ್ರದ ಜನರು 1.23 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ ರಾಜ್ಯಕ್ಕೆ ದೊಡ್ಡ ಸಂದೇಶ ನೀಡಿದರು. ನಾನು ಇಂದು ಈ ಹಂತಕ್ಕೆ ಬರಲು ಕನಕಪುರದ ಜನರ ಪ್ರೀತಿ, ಆಶೀರ್ವಾದ ಮತ್ತು ಬೆಂಬಲವೇ ಕಾರಣ” ಎಂದು ಹೇಳಿದರು.

ನನ್ನ ಬದುಕು ತೆರೆದ ಪುಸ್ತಕ

"ನನ್ನ ಬದುಕು ತೆರೆದ ಪುಸ್ತಕ. ನನ್ನ ಜೀವನದಲ್ಲಿ ಯಾವುದೇ ರಹಸ್ಯಗಳಿಲ್ಲ. ಯಾರು ಬೇಕಾದರೂ ನನ್ನ ಬಗ್ಗೆ ತಿಳಿದುಕೊಳ್ಳಬಹುದು. ಎಲ್ಲ ಜಾತಿ, ಧರ್ಮಗಳ ಜನರನ್ನು ನಾವು ಪ್ರೀತಿಸುತ್ತೇವೆ ಮತ್ತು ಗೌರವಿಸುತ್ತೇವೆ. ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ತತ್ವದಲ್ಲಿ ನಂಬಿಕೆ ಇಟ್ಟಿದ್ದೇನೆ. ನಾನು ರೇಣುಕಾಚಾರ್ಯ ಕಾಲೇಜಿನಲ್ಲಿ ಓದಿದವನು. ನಮ್ಮ ಹಿರಿಯರು ಎಲ್ಲ ಧರ್ಮಗಳಿಗೂ ಗೌರವ ನೀಡುವುದನ್ನು ಕಲಿಸಿದ್ದಾರೆ. ನಾವು ಯಾವ ಜಾತಿಯಲ್ಲಿ ಹುಟ್ಟಿದ್ದೇವೆಯೋ ಆ ಜಾತಿಗೆ ಗೌರವ ನೀಡಬೇಕು. ಆದರೆ ಬೇರೆ ಜಾತಿಯವರನ್ನು ಕೀಳಾಗಿ ಕಾಣಬಾರದು. ಎಲ್ಲಕ್ಕಿಂತ ಮುಖ್ಯವಾದದ್ದು ಮನುಷ್ಯತ್ವ” ಎಂದರು.

Tags

D.K.Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X