Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚುನಾವಣಾ ವ್ಯವಸ್ಥೆ ಹಾಳಾದರೆ ದಲಿತರಿಗೆ...

ಚುನಾವಣಾ ವ್ಯವಸ್ಥೆ ಹಾಳಾದರೆ ದಲಿತರಿಗೆ ಅಪಾಯ : ಡಿಸಿಎಂ ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ15 Sept 2026 7:18 PM IST
share
ಚುನಾವಣಾ ವ್ಯವಸ್ಥೆ ಹಾಳಾದರೆ ದಲಿತರಿಗೆ ಅಪಾಯ : ಡಿಸಿಎಂ ಡಾ.ಜಿ.ಪರಮೇಶ್ವರ್

ಬೆಂಗಳೂರು : ಕೇಂದ್ರ ಸರಕಾರವೂ ಪದೇ ಪದೇ ಚುನಾವಣೆ ವ್ಯವಸ್ಥೆಯನ್ನು ಹಾಳು ಮಾಡಲು ಮುಂದಾಗುತ್ತಿದೆ. ಒಂದು ವೇಳೆ ಇದರಲ್ಲಿ ಯಶಸ್ಸು ಕಂಡರೆ ದಲಿತರು ಸೇರಿದಂತೆ ಸಮಾಜದ ಕೆಳಸ್ತರು ಅಪಾಯಕ್ಕೆ ಸಿಲುಕುತ್ತಾರೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಸಮಾಜ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದು ಕೇಂದ್ರ ಸರಕಾರ ಚುನಾವಣಾ ವ್ಯವಸ್ಥೆಯನ್ನು ಹಾಳು ಮಾಡಲು ಪ್ರಯತ್ನಿಸುತ್ತಿದೆ. ಈ ಮೂಲಕ ಅಧಿಕಾರದಲ್ಲಿ ಶಾಶ್ವತವಾಗಿ ಉಳಿಯಲು ಯತ್ನಿಸುತ್ತಿದೆ. ಇದು ಬಹಳ ಅಪಾಯಕಾರಿ. ಇದರ ಪರಿಣಾಮ ಮೊದಲು ಬೀರುವುದೇ ಸಮಾಜದ ಕೆಳಸ್ತರದಲ್ಲಿರುವವರ ಮೇಲೆ. ಅದರಲ್ಲೂ, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ಇದರಿಂದ ತೊಂದರೆಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನೊಂದೆಡೆ, ಮೀಸಲಾತಿ ಏಕೆ ಎಂಬ ಅಸಂಬದ್ಧ ಪ್ರಶ್ನೆಗಳನ್ನು ಕೇಳಲಾಗುತ್ತಿದೆ. ಐದು ಸಾವಿರ ವರ್ಷಗಳಿಂದ ತುಳಿತಕ್ಕೆ ಒಳಗಾದವರನ್ನು ನಾವು ಮೇಲೆತ್ತಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಮೀಸಲಾತಿ ವ್ಯವಸ್ಥೆಯನ್ನು ತಂದರೇ ವಿನಃ ಬೇರೆ ಯಾವುದೇ ಕಾರಣಕ್ಕಲ್ಲ. ಶೋಷಿತ ಸಮುದಾಯಗಳು ಮುಖ್ಯವಾಹಿನಿಗೆ ಬರಬಾರದೆ? ಎಂದ ಪ್ರಶ್ನಿಸಿದ ಅವರು, ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ಹೋಗುವ ಯಾರೂ ಅಧಿಕಾರದಲ್ಲಿ ಉಳಿಯುವುದಿಲ್ಲ. ಸಂವಿಧಾನ ರಚನೆಯಾಗಿ 80 ವರ್ಷಗಳೇ ಕಳೆದರೂ ಇಂದು ಅದರ ಪ್ರಖರತೆ ಹಾಗೆಯೇ ಉಳಿದಿದೆ. ಹಾಗಾಗಿ ಸಂವಿಧಾನಕ್ಕೆ ಧಕ್ಕೆ ತರಲು ಯತ್ನಿಸುತ್ತಿರುವವರನ್ನು ಅಧಿಕಾರದಿಂದ ದೂರವುಳಿಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಬೇಕಿದೆ ಎಂದರು.

ಪ್ರಪಂಚದಲ್ಲಿ 90 ಪ್ರಜಾಪ್ರಭುತ್ವದ ದೇಶಗಳಿವೆ. ಇನ್ನುಳಿದ ದೇಶಗಳಲ್ಲಿ ನಡೆಯುವಂತಹ ವಿದ್ಯಮಾನಗಳೇ ಬೇರೆ, ಆಡಳಿತವೇ ಬೇರೆ. ನಮ್ಮ ನೆರೆಯ ದೇಶಗಳಾದ ಶ್ರೀಲಂಕಾ, ಬಾಂಗ್ಲಾದೇಶ, ಪಾಕಿಸ್ತಾನ, ನೇಪಾಳಗಳಲ್ಲಿ ಏನೇನು ನಡೆಯಿತು ಎಂಬುದನ್ನು ಗಮನಿಸಿದ್ದೇವೆ. ಆದರೆ ನಮ್ಮ ದೇಶದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಹಾಕಿಕೊಟ್ಟಿರುವ ಅಡಿಪಾಯ ಭದ್ರವಾಗಿರುವುದರಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗುವಂತಹ ಬೆಳವಣಿಗೆಗೆ ಗೆಲುವು ಸಿಕ್ಕಿಲ್ಲ ಎಂದು ಅವರು ಹೇಳಿದರು.

ದೇಶದ ಜನಸಂಖ್ಯೆಯಲ್ಲಿ ಶೇ.65ರಷ್ಟು ಯುವ ಸಮುದಾಯವಿದೆ. 16ರಿಂದ35 ವಯೋಮಾನದ ಸಮುದಾಯವಿದು. ಇವರು ಮುಂದಿನ ಭವಿಷ್ಯವನ್ನು ನಿರ್ಮಿಸುವವರು. ಈಗ ಜೆನ್‍ಝೀ ಮುನ್ನೆಲೆ ಬಂದಿದೆ. ಇವರಿಗೆ ನಾವು ಪ್ರಾಮುಖ್ಯತೆ ನೀಡಬೇಕಿದೆ. ಉತ್ತಮ ರಾಜಕೀಯ ವ್ಯವಸ್ಥೆಯನ್ನು ಅವರಿಗೆ ಹಸ್ತಾಂತರಿಸುವ ಜವಾಬ್ದಾರಿ ನಮ್ಮ ಮೇಲಿದೆ. ಹಾಗಾಗಿ ಅವರಿಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಧಾರೆಯೆರೆಯಬೇಕಿದೆ. ಈ ನಿಟ್ಟಿನಲ್ಲಿ ನಮ್ಮ ಸರಕಾರ ಸಾಕಷ್ಟು ಕೆಲಸಗಳನ್ನು ನಿರಂತರವಾಗಿ ನಡೆಸುತ್ತ ಬಂದಿದೆ. ಪ್ರತಿಯೊಂದು ಶಾಲಾ-ಕಾಲೇಜುಗಳಿಗೆ, ಮನೆಗಳಿಗೆ ಸಂವಿಧಾನದ ಪೀಠಿಕೆಯನ್ನು ತಲುಪಿಸಿದ್ದೇವೆ. ನಿರಂತರವಾಗಿ ಸಂವಿಧಾನದ ಪೀಠಿಕೆಯನ್ನು ಮನನ ಮಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಪ್ರಾಮುಖ್ಯತೆಯನ್ನು ಅರ್ಥೈಸಿಕೊಳ್ಳುವಂತೆ ಮಾಡುತ್ತಿದ್ದೇವೆ ಎಂದು ಪರಮೇಶ್ವರ್ ಹೇಳಿದರು.

Tags

Dr. G. Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X