Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪರಿಶಿಷ್ಟರ ಮೀಸಲಾತಿಗೆ ಸಂವಿಧಾನಾತ್ಮಕ...

ಪರಿಶಿಷ್ಟರ ಮೀಸಲಾತಿಗೆ ಸಂವಿಧಾನಾತ್ಮಕ ರಕ್ಷಣೆ ಕಲ್ಪಿಸಲು ಕೋರಿ ಪ್ರಧಾನಿ ಮೋದಿಗೆ ಉಪಮುಖ್ಯಮಂತ್ರಿ ಡಾ.ಪರಮೇಶ್ವರ್ ಪತ್ರ

ವಾರ್ತಾಭಾರತಿವಾರ್ತಾಭಾರತಿ14 Nov 2026 7:30 PM IST
share
ಪರಿಶಿಷ್ಟರ ಮೀಸಲಾತಿಗೆ ಸಂವಿಧಾನಾತ್ಮಕ ರಕ್ಷಣೆ ಕಲ್ಪಿಸಲು ಕೋರಿ ಪ್ರಧಾನಿ ಮೋದಿಗೆ ಉಪಮುಖ್ಯಮಂತ್ರಿ ಡಾ.ಪರಮೇಶ್ವರ್ ಪತ್ರ

ಬೆಂಗಳೂರು : ತಮಿಳುನಾಡಿನ ಮಾದರಿಯಲ್ಲಿಯೇ ಕರ್ನಾಟಕ ರಾಜ್ಯದಲ್ಲಿ ಎಸ್‍ಸಿ-ಎಸ್‍ಟಿ ವರ್ಗಗಳಿಗೆ ಕಲ್ಪಿಸಿರುವ ಶೇ.24ರಷ್ಟು ಮೀಸಲಾತಿಗೂ ರಕ್ಷಣೆ ಒದಗಿಸಿ, ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಬೇಕು. ಆ ನಿಟ್ಟಿನಲ್ಲಿ ಸಂವಿಧಾನಾತ್ಮಕ ರಕ್ಷಣೆ ಕೋರಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಡಾ.ವೀರೇಂದ್ರ ಕುಮಾರ್‍ಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪತ್ರ ಬರೆದಿದ್ದಾರೆ.

ಶನಿವಾರ ಮೂವರಿಗೆ ಪ್ರತ್ಯೇಕ ಪತ್ರ ಬರೆದಿರುವ ಡಾ.ಪರಮೇಶ್ವರ್, ಎಸ್‍ಸಿ ಮೀಸಲಾತಿ ಶೇ.17 ಮತ್ತು ಎಸ್‍ಟಿ ಮೀಸಲಾತಿ ಶೇ.7ಕ್ಕೆ ಹೆಚ್ಚಿಸುವ ಕಾಯ್ದೆಯನ್ನು ಸಂವಿಧಾನದ 9ನೆ ಅನುಸೂಚಿಗೆ ಸೇರಿಸಬೇಕು. ಸಂಸತ್ತಿನಲ್ಲಿ ಅಗತ್ಯ ಸಂವಿಧಾನ ತಿದ್ದುಪಡಿ ಮಸೂದೆ ಮಂಡಿಸಲು ಕೇಂದ್ರ ಸರಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಎಸ್‍ಸಿ ಮತ್ತು ಎಸ್‍ಟಿ ಆಯೋಗಗಳೊಂದಿಗೆ ಸಮಾಲೋಚನೆ ನಡೆಸಿ, ನ್ಯಾಯಾಲಯ ಗುರುತಿಸಿರುವ ಸಂವಿಧಾನಾತ್ಮಕ ಹಾಗೂ ಪ್ರಕ್ರಿಯಾತ್ಮಕ ಸಮಸ್ಯೆಗಳನ್ನು ಪರಿಹರಿಸಬೇಕು. ಸಂಬಂಧಪಟ್ಟ ಕೇಂದ್ರ ಸಚಿವಾಲಯಗಳು ಸಮನ್ವಯದಿಂದ ಕಾಲಮಿತಿಯೊಳಗೆ ನಿರ್ಧಾರ ಕೈಗೊಳ್ಳಬೇಕು. ದೇಶದಲ್ಲಿ ಶೇ.50ರ ಮೀಸಲಾತಿ ಮಿತಿಯ ಕುರಿತು ರಾಷ್ಟ್ರಮಟ್ಟದಲ್ಲಿ ಮರುಪರಿಶೀಲನೆ ಮತ್ತು ವ್ಯಾಪಕ ಚರ್ಚೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ರಾಜ್ಯ ಸರಕಾರ ಎಸ್‍ಸಿಗಳಿಗೆ ಶೇ.15ರಿಂದ ಶೇ.17ಕ್ಕೆ ಹಾಗೂ ಎಸ್‍ಟಿಗೆ ಶೇ.3ರಿಂದ ಶೇ.7ಕ್ಕೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಸರಕಾರವು 2022ರಲ್ಲಿ ಕಾಯ್ದೆ ರೂಪಿಸಿತ್ತು. 2023ರ ಜನವರಿ 11ರಂದು ರಾಜ್ಯಪಾಲರ ಅಂಕಿತ ಪಡೆದ ಈ ಕಾಯ್ದೆಯು 2022ರ ನ.1ರಿಂದ ಅನ್ವಯವಾಗುವಂತೆ ಜಾರಿಗೊಂಡಿತ್ತು. ಏಳು ದಶಕಗಳಿಂದ ಈ ಸಮುದಾಯಗಳ ಮೀಸಲಾತಿ ಪ್ರಮಾಣದಲ್ಲಿ ಬದಲಾವಣೆಯಾಗಿರಲಿಲ್ಲ.

2011ರ ಜನಗಣತಿಯ ಪ್ರಕಾರ ರಾಜ್ಯದಲ್ಲಿ ಎಸ್‍ಸಿ ಜನಸಂಖ್ಯೆ ಶೇ.17.15 ಹಾಗೂ ಎಸ್‍ಟಿ ಜನಸಂಖ್ಯೆ ಶೇ.6.95ರಷ್ಟಿದೆ. ಸಾಮಾಜಿಕ ಹಾಗೂ ಶೈಕ್ಷಣಿಕ ಹಿಂದುಳಿದಿರುವಿಕೆಯನ್ನು ಪರಿಗಣಿಸಿ ನ್ಯಾ.ಎಚ್.ಎನ್. ನಾಗಮೋಹನ್ ದಾಸ್ ಆಯೋಗವು ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು ಮಾಡಿತ್ತು. ಅಲ್ಲದೆ, ಈ ಕಾಯ್ದೆಗೆ ಸಂವಿಧಾನಾತ್ಮಕ ರಕ್ಷಣೆ ಒದಗಿಸಲು 9ನೇ ಅನುಸೂಚಿಗೆ ಸೇರಿಸುವಂತೆಯೂ ಸಲಹೆ ನೀಡಿತ್ತು.

ಆದರೆ, ಒಟ್ಟು ಮೀಸಲಾತಿ ಶೇ.56ಕ್ಕೆ ಏರಿಕೆಯಾಗುವುದು ಶೇ.50ರ ಮೀಸಲಾತಿ ಮಿತಿಯನ್ನು ಮೀರಿದಂತಾಗುತ್ತದೆಂಬ ಕಾರಣಕ್ಕೆ ಹೈಕೋರ್ಟ್ 2026ರ ಅಕ್ಟೋಬರ್ 12ರಂದು ಮೀಸಲಾತಿ ಹೆಚ್ಚಳದ ನಿಬಂಧನೆಗಳನ್ನು ರದ್ದುಗೊಳಿಸಿದೆ. ಈ ತೀರ್ಪಿನ ವಿರುದ್ಧ ರಾಜ್ಯ ಸರಕಾರ ಸುಪ್ರೀಂ ಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಕರ್ನಾಟಕ ಸರಕಾರವು 2023ರ ಮಾರ್ಚ್ 23ರಂದೇ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. 2025ರ ಡಿಸೆಂಬರ್ 18ರಂದು ವಿಧಾನಸಭೆಯಲ್ಲಿಯೂ ಈ ಸಂಬಂಧ ನಿರ್ಣಯ ಅಂಗೀಕರಿಸಲಾಗಿದೆ. 2026ರ ಎಪ್ರಿಲ್ 16ರಂದು ನಿಕಟಪೂರ್ವ ಸಿಎಂ ಸಿದ್ದರಾಮಯ್ಯ ಪ್ರಧಾನಿಗೆ ಪತ್ರ ಬರೆದಿದ್ದರು. ಆದರೂ ಕೋರ್ಟ್‍ನಲ್ಲಿ ಪ್ರಕರಣ ಬಾಕಿಯಿದೆ ಎಂಬ ಕಾರಣ ನೀಡಿ ಕೇಂದ್ರ ಸರಕಾರ ಈ ವಿಷಯವನ್ನು ಮುಂದೂಡಿತ್ತು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಸಾಮಾಜಿಕ ನ್ಯಾಯದ ವಿಚಾರವು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿದ್ದು, ಅವಕಾಶವಂಚಿತ ಸಮುದಾಯಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸಮಾನ ಅವಕಾಶ ಕಲ್ಪಿಸುವುದು ರಾಷ್ಟ್ರದ ಸಾಮೂಹಿಕ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ದೀರ್ಘಕಾಲದ ಬೇಡಿಕೆಗೆ ಕೇಂದ್ರ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿ, ನಿಗದಿತ ಅವಧಿಯೊಳಗೆ ನಿರ್ಧಾರ ಕೈಗೊಳ್ಳಬೇಕು ಎಂದು ಡಾ.ಜಿ. ಪರಮೇಶ್ವರ್ ಆಗ್ರಹಿಸಿದ್ದಾರೆ.

Tags

Dr. G. Parameshwara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X