ಮಾಜಿ ಸಿಎಂ ಡಿ.ವಿ.ಸದಾನಂದಗೌಡರ ಬ್ಯಾಂಕ್ ಖಾತೆಗಳು ಹ್ಯಾಕ್: 3 ಲಕ್ಷ ರೂ.ವಂಚನೆ

ಡಿ.ವಿ.ಸದಾನಂದಗೌಡ
ಬೆಂಗಳೂರು, ಸೆ.17: ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಅವರ ಮೂರು ಬ್ಯಾಂಕ್ ಖಾತೆಗಳನ್ನು ಸೈಬರ್ ವಂಚಕರು ಹ್ಯಾಕ್ ಮಾಡಿ 3 ಲಕ್ಷ ರೂಪಾಯಿ ಹಣವನ್ನು ದೋಚಿದ್ದಾರೆಂದು ವರದಿಯಾಗಿದೆ.
ಬುಧವಾರ ನಗರದಲ್ಲಿ ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸೆ.16ರಂದು ನನ್ನ ಮೂರು ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಲಾಗಿದ್ದು, ಆರೋಪಿಗಳು ಅದರಲ್ಲಿದ್ದ ತಲಾ ಒಂದೊಂದು ಲಕ್ಷ ರೂಪಾಯಿ ಹಣ ಎಗರಿಸಿದ್ದಾರೆ ಎಂದು ತಿಳಿಸಿದರು.
ಎಚ್ಡಿಎಫ್ಸಿ, ಎಸ್ಬಿಐ ಹಾಗೂ ಆಕ್ಸಿಸ್ ಬ್ಯಾಂಕಿನ ಖಾತೆಯಲ್ಲಿದ್ದ ಹಣ ಕಳ್ಳತನವಾಗಿದೆ. ಯುಪಿಐ ಮೂಲಕ ಹ್ಯಾಕ್ ಮಾಡಿ ಹಣ ಕಳ್ಳತನ ಮಾಡಿದ್ದು ಈ ಬಗ್ಗೆ ಸೈಬರ್ ಕ್ರೈಂ ಠಾಣೆಗೆ ದೂರು ನೀಡಲಿದ್ದೇನೆ ಎಂದು ಡಿ.ವಿ.ಸದಾನಂದಗೌಡ ಹೇಳಿದರು.
Next Story





