Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಮಾಜದಲ್ಲಿನ ಅಸಮಾನತೆ ತೊಲಗಿಸಲು...

ಸಮಾಜದಲ್ಲಿನ ಅಸಮಾನತೆ ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ26 Oct 2025 12:17 AM IST
share
ಸಮಾಜದಲ್ಲಿನ ಅಸಮಾನತೆ ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು: ಸಿಎಂ ಸಿದ್ದರಾಮಯ್ಯ
Everyone must be educated to eliminate inequality in society: CM Siddaramaiah

ಬೆಂಗಳೂರು: ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣ ಪಡೆಯುವುದು ಅಗತ್ಯವಾಗಿದ್ದು, ಸಮಾಜದ ಅಸಮಾನತೆಯನ್ನು ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದ್ದಾರೆ.

ಶನಿವಾರ ಬಿಡದಿ ಸಮೀಪದಲ್ಲಿನ ಜಾಮಿಯಾ ಮಸೀದಿ ಮತ್ತು ಮುಸ್ಲಿಂ ಚಾರಿಟೇಬಲ್ ಫಂಡ್ ಟ್ರಸ್ಟ್ ನಿರ್ವಹಣೆಯ ಜೆಯು ಸಮೂಹ ಸಂಸ್ಥೆಗಳ ವತಿಯಿಂದ ಜೆಯು ಗ್ರೂಪ್ ಆಫ್ ಇನ್ಸ್ಟಿಯೂಟ್ಯೂಟ್‍ನಲ್ಲಿ ಆಯೋಜಿಸಲಾಗಿದ್ದ Darul Quran Campas ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯಾವುದೇ ಜಾತಿ ಧರ್ಮಕ್ಕೆ ಸೇರಿದ್ದರೂ, ಪ್ರತಿಯೊಬ್ಬರಿಗೂ ವಿದ್ಯೆ ಮುಖ್ಯ. ಸ್ವಾಭಿಮಾನಿ ಬದುಕಿಗೆ ಶಿಕ್ಷಣ ಮುಖ್ಯ. ಸಾಮಾಜಿಕ ಸಂಕೋಲೆಗಳಿಂದ ಮುಕ್ತರಾಗಲು ಶಿಕ್ಷಣ ಅಗತ್ಯವೆಂದು ಡಾ.ಅಂಬೇಡ್ಕರ್ ತಿಳಿಸಿದ್ದಾರೆ. ಪ್ರತಿಯೊಬ್ಬ ಮುಸಲ್ಮಾನನೂ ಶಿಕ್ಷಣವಂತನಾಗಬೇಕು. ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣ ಪಡೆಯುವುದು ಅಗತ್ಯವಾಗಿದ್ದು, ಸಮಾಜದ ಅಸಮಾನತೆಯನ್ನು ತೊಲಗಿಸಲು ಶಿಕ್ಷಿತರಾಗಲೇಬೇಕು ಎಂದರು.

ಸಂವಿಧಾನ ಅಸ್ತಿತ್ವಕ್ಕೆ ಬಂದ ನಂತರವಷ್ಟೇ ಎಲ್ಲರಿಗೂ ಶಿಕ್ಷಣ ಪಡೆಯುವ ಸಮಾನ ಅವಕಾಶ ಸಾಧ್ಯವಾಯಿತು. ಶಿಕ್ಷಣಕ್ಕೆ ಸರ್ಕಾರ ಹೆಚ್ಚು ಒತ್ತು ನೀಡಿದ್ದು, ಇದಕ್ಕಾಗಿ ಅನುದಾನವನ್ನೂ ನೀಡಲಾಗುವುದು. ಅಲ್ಲದೇ ವಸತಿ ಶಾಲೆಗಳನ್ನು ಸ್ಥಾಪಿಸಿ ಮುಸಲ್ಮಾನ ಬಂಧುಗಳಿಗೆ ಪ್ರಾಥಮಿಕ, ಹಿರಿಯ ಪ್ರಾಥಮಿಕ ಶಿಕ್ಷಣಕ್ಕೂ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.

ದ್ವೇಷವನ್ನು ಪ್ರಚೋದಿಸುವುದಿಲ್ಲ: ತಮ್ಮ ಧರ್ಮವನ್ನು ಪಾಲಿಸುತ್ತಾ ಪರ ಧರ್ಮವನ್ನು ಗೌರವಿಸಬೇಕು, ಸಹಬಾಳ್ವೆ, ಸೌಹಾರ್ದತೆಯನ್ನು ಪಾಲಿಸಬೇಕು ಎಂದು ಸಂವಿಧಾನ ತಿಳಿಸುತ್ತದೆ. ಯಾವುದೇ ಧರ್ಮ ದ್ವೇಷವನ್ನು ಪ್ರಚೋದಿಸುವುದಿಲ್ಲ. ದ್ವೇಷರಾಜಕಾರಣ ಮಾಡಬಾರದು. ದ್ವೇಷದಿಂದ ಯಾರ ಮನಸ್ಸನ್ನೂ ಗೆಲ್ಲಲು ಸಾಧ್ಯವಿಲ್ಲ.ಈ ಅರಿವಿಗೆ ಶಿಕ್ಷಣ ಮುಖ್ಯ. ಅಂಬೇಡ್ಕರ್ ಅವರು ತಿಳಿಸಿದಂತೆ, ಸಾಮಾಜಿಕ ಅಸಮಾನತೆ ಹೋಗಲಾಡಿಸಬೇಕು ಎಂದು ಸಿದ್ದರಾಮಯ್ಯ ಸಲಹೆ ಮಾಡಿದರು.

ಶಿಕ್ಷಣದಿಂದ ಮಾತ್ರ ಸಮಾನತೆ: ಸಮಾನ ಅವಕಾಶಗಳನ್ನು ಒದಗಿಸುವ ಪ್ರಯತ್ನ ಮಾಡಬೇಕು. ಸ್ವಾತಂತ್ರ್ಯ ರಕ್ಷಣೆ ಮಾಡಲು ಅಸಮಾನತೆ ತೆಗೆದುಹಾಕಬೇಕು. ಅಸಮಾನತೆ ತೆಗೆದು ಹಾಕದಿದ್ದರೆ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುವುದಿಲ್ಲ. ಶಿಕ್ಷಣದಿಂದ ಮಾತ್ರ ಸಮಾನತೆ ತರಲು, ಜ್ಞಾನ, ವ್ಯಕ್ತಿತ್ವ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಹಾಗೂ ಸಾಮಾಜಿಕ ಗೌರವ ಗಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಶಿಕ್ಷಣಕ್ಕೆ ಒತ್ತು: ಸಂಘ-ಸಂಸ್ಥೆಗಳು, ಸರಕಾರದ ಸಂಸ್ಥೆಗಳು ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ಕೊಟ್ಟು ಕೆಲಸ ಮಾಡಬೇಕು. ನಮ್ಮ ಸರಕಾರ 4900 ಕೋಟಿ ರೂಪಾಯಿಗಳಿಗೂ ಹೆಚ್ಚು ಮೊತ್ತವನ್ನು ಶಿಕ್ಷಣಕ್ಕಾಗಿ ನಮ್ಮ ಸರಕಾರ ವೆಚ್ಚ ಮಾಡುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಅಝೀಂ ಪ್ರೇಂ ಜಿ ಯವರ ವಿಪ್ರೋ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಆರು ದಿನಗಳ ಕಾಲ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತಿದೆ. ಇದಲ್ಲದೆ ರಾಗಿ ಮಾಲ್ಟ್, ಹಾಲು, ಬಿಸಿಯೂಟ ಒದಗಿಸಲಾಗುತ್ತಿದೆ. ಕಾಲೇಜಿನಲ್ಲಿ ಓದುವ ಹೆಣ್ಣುಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಅಝೀಂ ಪ್ರೇಂ ಜಿ ಅವರೂ ಇದಕ್ಕೆ ಕೈಜೋಡಿಸುತ್ತಿದ್ದಾರೆ. ಅವರಿಗೆ ಸರಕಾರದ ಪರವಾಗಿ ಧನ್ಯವಾದ ಹೇಳಲು ಬಯಸುತ್ತೇನೆ ಎಂದರು.

ನಮ್ಮ ಸರಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ ಸೀಮಿತವಾಗಿದೆ. ಇತ್ತೀಚೆಗೆ ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳು ವಿದ್ಯಾವಂತರಾಗುತ್ತಿರುವುದು ಉತ್ತಮ ಬೆಳವಣಿಗೆ. ಹಿಂದೆ ಶೂದ್ರ ಹೆಣ್ಣು ಮಕ್ಕಳಿಗೆ ವಿದ್ಯೆ ಕಲಿಯುವ ಅವಕಾಶ ಇರಲಿಲ್ಲ. ಈಗ ಸಮಾನ ಅವಕಾಶಗಳು ಲಭ್ಯವಾಗುವಂತೆ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಅನ್ನಭಾಗ್ಯ, ಗೃಹಜ್ಯೋತಿ ಯೋಜನೆಯನ್ನು ನಮ್ಮ ಸರಕಾರ ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದಾಗ ಸರ್ಕಾರ ದಿವಾಳಿಯಾಗುತ್ತದೆ ಎಂದವರು ಈಗ ಇದನ್ನೇ ನಕಲು ಮಾಡುತ್ತಿದ್ದಾರೆ ಎಂದ ಅವರು, ಅಸಮಾನತೆ ಹೋಗಬೇಕೆನ್ನುವ ಕಾರಣದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಸಂವಿಧಾನ ಇದನ್ನೇ ಹೇಳುತ್ತದೆ. ಅದನ್ನು ನಮ್ಮ ಸರಕಾರ ಮಾಡುತ್ತಿದೆ. ಸಂವಿಧಾನ ತಿಳಿದವರಿಗೆ ಸಮಾಜಮುಖಿ ಕೆಲಸ ಮಾಡಲು ಸಾಧ್ಯ ಎಂದರು.

ಪರಸ್ಪರ ಪ್ರೀತಿಸೋಣ:

‘ಮಕ್ಕಳನ್ನು ಯಾವುದೇ ಕಾರಣಕ್ಕೂ ಅವಿದ್ಯಾವಂತರನ್ನಾಗಿಸಬಾರದು. ಶಿಕ್ಷಣ ಕೊಡಿಸಬೇಕು. ಎಲ್ಲರೂ ವಿದ್ಯಾವಂತರಾದರೆ ಭವ್ಯ ಭಾರತ ಕಟ್ಟಬಹುದು, ಸಮಸಮಾಜ ನಿರ್ಮಿಸಬಹುದು. ನಾವೂ-ನೀವೂ ಎಲ್ಲರೂ ಮೊದಲು ಭಾರತೀಯರು. ಆ ಮೇಲೆ ಹಿಂದೂ, ಮುಸ್ಲಿಂ, ಕ್ರೈಸ್ತರು ಎನಿಸಿಕೊಳ್ಳುತ್ತೇವೆ. ಎಲ್ಲರೂ ಭಾರತೀಯರಾಗಿ ಭಾರತವನ್ನು ಕಟ್ಟೋಣ. ದ್ವೇಷ ಬಿಟ್ಟು ಪರಸ್ಪರ ಪ್ರೀತಿ ಮಾಡೋಣ’

-ಸಿದ್ದರಾಮಯ್ಯ, ಮುಖ್ಯಮಂತ್ರಿ










share
ವಾರ್ತಾಭಾರತಿ
ವಾರ್ತಾಭಾರತಿ
Next Story
X