Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೀನು ಆಹಾರ, ಮೀನು ತೈಲ ರಫ್ತು...

ಮೀನು ಆಹಾರ, ಮೀನು ತೈಲ ರಫ್ತು ನಿರ್ಬಂಧಕ್ಕೆ ಮೀನುಗಾರರ ತೀವ್ರ ವಿರೋಧ; ತರಾತುರಿ ನಿರ್ಧಾರ ಕೈಗೊಳ್ಳದಂತೆ ಕೇಂದ್ರಕ್ಕೆ ಸಂಘಟನೆಗಳ ಮನವಿ

ಯೋಗೇಶ್ ಮಲ್ಲೂರು/ವಾರ್ತಾಭಾರತಿಯೋಗೇಶ್ ಮಲ್ಲೂರು/ವಾರ್ತಾಭಾರತಿ25 Nov 2026 12:16 AM IST
share
ಮೀನು ಆಹಾರ, ಮೀನು ತೈಲ ರಫ್ತು ನಿರ್ಬಂಧಕ್ಕೆ ಮೀನುಗಾರರ ತೀವ್ರ ವಿರೋಧ; ತರಾತುರಿ ನಿರ್ಧಾರ ಕೈಗೊಳ್ಳದಂತೆ ಕೇಂದ್ರಕ್ಕೆ ಸಂಘಟನೆಗಳ ಮನವಿ

ಬೆಂಗಳೂರು: ಮೀನು ಆಹಾರ ಮತ್ತು ಮೀನು ತೈಲ(ಎಫ್‍ಎಂಎಫ್‍ಒ) ರಫ್ತಿನ ಮೇಲೆ ನಿರ್ಬಂಧ ಹೇರುವ ಕೇಂದ್ರ ಸರಕಾರದ ಪ್ರಸ್ತಾವಿತ ಕ್ರಮಕ್ಕೆ ಸಂಬಂಧಿಸಿದಂತೆ ಮೀನುಗಾರಿಕಾ ಉದ್ಯಮ ಹಾಗೂ ಮೀನುಗಾರರ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಭಾರತೀಯ ಮೀನು ಆಹಾರ ಮತ್ತು ಮೀನು ತೈಲ ರಫ್ತುದಾರರು ಮತ್ತು ತಯಾರಕರ ಸಂಘ(ಐಎಫ್‍ಎಎಫ್‍ಇಎ)ದ ವತಿಯಿಂದ ಮಂಗಳವಾರ ನಗರದ ಖಾಸಗಿ ಹೋಟೆಲ್‍ನಲ್ಲಿ ಅಖಿಲ ಭಾರತ ಮಟ್ಟದ ಪಾಲುದಾರರ ಸಭೆಯನ್ನು ನಡೆಸಲಾಯಿತು.

ಮೀನು ಆಹಾರ ಮತ್ತು ಮೀನು ತೈಲದ ರಫ್ತು ನಿರ್ಬಂಧದಿಂದ ಮೀನುಗಾರಿಕಾ ಉದ್ಯಮ, ಮೀನುಗಾರರು ಹಾಗೂ ಕರಾವಳಿ ಭಾಗದ ಜನರ ಜೀವನೋಪಾಯದ ಮೇಲೆ ಅಡ್ಡಪರಿಣಾಮ ಉಂಟಾಗಲಿದ್ದು, ಮೀನುಗಾರರ ಹಿತಾಸಕ್ತಿ ಕಡೆಗಣಿಸದಂತೆ ಸಭೆಯಲ್ಲಿ ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಯಿತು.

ಕೇಂದ್ರ ಸರಕಾರವು ಫಿಶ್‍ಮೀಲ್ ಮತ್ತು ಫಿಶ್‍ಆಯಿಲ್ ರಫ್ತಿಗೆ ಸಂಬಂಧಿಸಿದಂತೆ ಯಾವುದೇ ನೀತಿ ನಿರ್ಧಾರ ಕೈಗೊಳ್ಳುವ ಮೊದಲು ಸಂಬಂಧಪಟ್ಟ ಸಂಘಟನೆಗಳು ಹಾಗೂ ಪಾಲುದಾರರೊಂದಿಗೆ ಸಮಾಲೋಚನೆ ನಡೆಸಬೇಕು. ವೈಜ್ಞಾನಿಕ ಅಧ್ಯಯನ, ದೇಶೀಯ ಬೇಡಿಕೆ, ಪೂರೈಕೆ ಮತ್ತು ಮಾರುಕಟ್ಟೆಯ ವಾಸ್ತವಿಕ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿದ ನಂತರವೇ ನಿರ್ಧಾರ ಕೈಗೊಳ್ಳಬೇಕು ಎಂದು ಐಎಫ್‍ಎಎಫ್‍ಇಎ ಒತ್ತಾಯಿಸಿತು.

ರಫ್ತು ನಿರ್ಬಂಧ ಜಾರಿಗೊಳಿಸಿದರೆ ಮೀನು ಖರೀದಿ ಬೆಲೆ, ಮಾರುಕಟ್ಟೆ ವ್ಯವಸ್ಥೆ ಹಾಗೂ ಮೀನುಗಾರರ ಆದಾಯದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ಈಗಾಗಲೇ ಇಂಧನ, ಕಾರ್ಮಿಕರು, ದೋಣಿ ನಿರ್ವಹಣೆ ಸೇರಿದಂತೆ ವಿವಿಧ ವೆಚ್ಚಗಳ ಏರಿಕೆಯಿಂದ ಸಂಕಷ್ಟದಲ್ಲಿರುವ ಮೀನುಗಾರರಿಗೆ ಮತ್ತಷ್ಟು ಆರ್ಥಿಕ ಹೊರೆ ಉಂಟಾಗಲಿದೆ. ಮೀನುಗಳಿಗೆ ಸೂಕ್ತ ಬೆಲೆ ದೊರೆಯದಿದ್ದರೆ ಅನೇಕ ಮೀನುಗಾರರು ಮೀನುಗಾರಿಕೆ ಚಟುವಟಿಕೆ ಸ್ಥಗಿತಗೊಳಿಸುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಪಾಲುದಾರರು ಗಂಭೀರ ಆತಂಕ ವ್ಯಕ್ತಪಡಿಸಿದರು.

ಇದೇ ವೇಳೆ, ರಾಷ್ಟ್ರೀಯ ಮೀನುಗಾರರ ಸಂಘವೂ ಭಾರತೀಯ ಮೀನು ಆಹಾರ ಮತ್ತು ಮೀನು ತೈಲ ರಫ್ತುದಾರರು ಮತ್ತು ತಯಾರಕರ ಸಂಘಕ್ಕೆ ತನ್ನ ಸಂಪೂರ್ಣ ಬೆಂಬಲ ಘೋಷಿಸಿದ್ದು, ಕೇಂದ್ರ ಸರಕಾರ ಯಾವುದೇ ಏಕಪಕ್ಷೀಯ ಅಥವಾ ಆತುರದ ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ಒತ್ತಾಯಿಸಿತು.

ರಫ್ತು ನಿರ್ಬಂಧದಿಂದ ಮೀನುಗಾರರು ಮಾತ್ರವಲ್ಲದೆ ಮೀನುಗಾರಿಕಾ ಕಾರ್ಮಿಕರು, ದೋಣಿ ಮಾಲಕರು, ಹರಾಜುದಾರರು, ಮೀನು ವ್ಯಾಪಾರಿಗಳು ಹಾಗೂ ಅವರ ಕುಟುಂಬಗಳ ಜೀವನೋಪಾಯಕ್ಕೂ ಧಕ್ಕೆಯಾಗಲಿದೆ ಎಂದು ರಾಷ್ಟ್ರೀಯ ಮೀನುಗಾರರ ಸಂಘ ತಿಳಿಸಿತು.

ಕೇಂದ್ರ ಸರಕಾರ ಮೀನುಗಾರರ ಹಿತಾಸಕ್ತಿಗೆ ಧಕ್ಕೆ ತರುವಂತಹ ನಿರ್ಧಾರಗಳನ್ನು ಕೈಗೊಂಡರೆ ಮೀನುಗಾರ ಸಮುದಾಯ ಬೃಹತ್ ಪ್ರತಿಭಟನೆ ಮತ್ತು ಸಾಮೂಹಿಕ ಹೋರಾಟದ ಮೂಲಕ ವಿರೋಧ ವ್ಯಕ್ತಪಡಿಸಲಿದೆ ಎಂದೂ ಸಂಘ ಎಚ್ಚರಿಕೆ ನೀಡಿತು.

ಮೀನುಗಾರರು, ಕಾರ್ಮಿಕರು, ರಫ್ತುದಾರರು ಹಾಗೂ ದೇಶೀಯ ಪಶು ಆಹಾರ ಉದ್ಯಮ ಸೇರಿದಂತೆ ಮೀನುಗಾರಿಕಾ ಕ್ಷೇತ್ರದ ಸಂಪೂರ್ಣ ಮೌಲ್ಯ ಸರಪಳಿಯ ಹಿತಾಸಕ್ತಿಯನ್ನು ಕೇಂದ್ರ ಸರಕಾರ ಪರಿಗಣಿಸಬೇಕು. ಒಂದು ವಲಯದ ಹಿತಕ್ಕಾಗಿ ಮತ್ತೊಂದು ವಲಯಕ್ಕೆ ನಷ್ಟ ಉಂಟುಮಾಡುವ ನೀತಿಗಳನ್ನು ಜಾರಿಗೊಳಿಸಬಾರದು ಎಂದು ಎರಡೂ ಸಂಘಟನೆಗಳು ಆಗ್ರಹಿಸಿದವು.

ಈ ಸಭೆಯಲ್ಲಿ ಐಎಫ್‍ಎಎಫ್‍ಇಎ ವಕ್ತಾರ ಗಣೇಶ್ ನಖ್ವಾ, ಐಎಫ್‍ಎಎಫ್‍ಇಎ ಅಧ್ಯಕ್ಷ ಮೊಹಮ್ಮದ್ ಶೌಖತ್, ಕಾರ್ಯದರ್ಶಿ ಮೊಹಮ್ಮದ್ ಹಾರಿಸ್ ಸೇರಿದಂತೆ ಐಎಫ್‍ಎಎಫ್‍ಇಎ ಹಾಗೂ ರಾಷ್ಟ್ರೀಯ ಮೀನುಗಾರರ ಸಂಘಗಳ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Tags

Fish OilFishermen BodiesFish Meal
share
ಯೋಗೇಶ್ ಮಲ್ಲೂರು/ವಾರ್ತಾಭಾರತಿ
ಯೋಗೇಶ್ ಮಲ್ಲೂರು/ವಾರ್ತಾಭಾರತಿ

ಯೋಗೇಶ್ ಮಲ್ಲೂರು ಅವರು ವಾರ್ತಾಭಾರತಿ ದಿನಪತ್ರಿಕೆಯ ಬೆಂಗಳೂರು ಬ್ಯೂರೋದಲ್ಲಿ ವರದಿಗಾರ/ಉಪಸಂಪಾದಕ. ಮೂಲತಃ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಲ್ಲೂರಿನವರಾದ ಯೋಗೇಶ್, ತುಮಕೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಪದವಿ ಪಡೆದಿದ್ದಾರೆ. ಇವರು ಹಲವು ದಿನಪತ್ರಿಕೆಗಳು ಹಾಗೂ ಡಿಜಿಟಲ್ ಸುದ್ದಿ ಮಾಧ್ಯಮಗಳಲ್ಲಿ ಕ್ರೈಂ ವರದಿಗಾರರಾಗಿ ಕೆಲಸ ಮಾಡಿದ್ದಾರೆ. ಒಟ್ಟಾರೆ, ಪತ್ರಿಕೋದ್ಯಮ ವಲಯದಲ್ಲಿ ಬೆಂಗಳೂರು, ತುಮಕೂರಿನಲ್ಲಿ ಯೋಗೇಶ್ ಅವರಿಗೆ 7 ವರ್ಷಗಳ ಅನುಭವವಿದೆ.

Next Story
X