Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವೇತನ ಸಹಿತ ಋತುಚಕ್ರ ರಜೆ ನೀತಿ...

ವೇತನ ಸಹಿತ ಋತುಚಕ್ರ ರಜೆ ನೀತಿ ಸಮರ್ಥಿಸಿಕೊಂಡ ಸರಕಾರ: ಅಧಿಸೂಚನೆ ತಡೆಗೆ ಹೈಕೋರ್ಟ್ ನಕಾರ

ವಾರ್ತಾಭಾರತಿವಾರ್ತಾಭಾರತಿ10 Dec 2025 12:47 PM IST
share
Karnataka High Court

ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಅಧಿಸೂಚನೆ ಹೊರಡಿಸಿರುವ ಕ್ರಮವನ್ನು ರಾಜ್ಯ ಸರಕಾರ ಬಲವಾಗಿ ಸಮರ್ಥಿಸಿಕೊಂಡಿದೆ. ಇದೇ ವೇಳೆ, ಸಾರ್ವಜನಿಕ ದೃಷ್ಟಿಯಿಂದ ಅತ್ಯಂತ ಮಹತ್ವದ ಈ ಪ್ರಕರಣವನ್ನು ವಿಸ್ತೃತವಾಗಿ ವಿಚಾರಣೆ ನಡೆಸಬೇಕಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಸರಕಾರದ ಅಧಿಸೂಚನೆಗೆ ತಡೆ ನೀಡಲು ನಿರಾಕರಿಸಿ ವಿಚಾರಣೆಯನ್ನು ಜನವರಿ 20ಕ್ಕೆ ಮುಂದೂಡಿದೆ.

ರಾಜ್ಯ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಬೆಂಗಳೂರು ಹೋಟೆಲ್ಗಳ ಸಂಘ, ಅವಿರತ ಡಿಫೆನ್ಸ್ ಸಿಸ್ಟಮ್, ಫೆಸಿಲ್ ಏರೋಸ್ಪೇಸ್ ಟೆಕ್ನಾಲಜೀಸ್ ಲಿಮಿಟೆಡ್, ಸ್ಯಾಮೋಸ್ ಟೆಕ್ನಾಲಜೀಸ್ ಲಿಮಿಟೆಡ್ಗಳ ಆಡಳಿತ ಮಂಡಳಿಗಳು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ಆರಂಭವಾಗುತ್ತಿದ್ದಂತೆ ನ್ಯಾಯಪೀಠ, ಅರ್ಜಿಗಳಿಗೆ ಸರಕಾರ ಆಕ್ಷೇಪಗಳನ್ನು ಸಲ್ಲಿಸಿದೆಯೇ ಎಂದು ಪ್ರಶ್ನಿಸಿತು. ಇದಕ್ಕೆ ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಆಕ್ಷೇಪಗಳನ್ನು ಸಲ್ಲಿಸಲಾಗಿದೆ, ಅರ್ಜಿದಾರರಿಗೆ ಪ್ರತಿಗಳನ್ನು ಒದಗಿಸಲಾಗುವುದು ಎಂದರು.

ದೇಶದಲ್ಲೇ ಮೊದಲು:

ವಾದ ಮುಂದುವರಿಸಿದ ಅಡ್ವೊಕೇಟ್ ಜನರಲ್, ಮಹಿಳೆಯರ ಹಿತದೃಷ್ಟಿಯಿಂದ ದೇಶದ ಬೇರಾವುದೇ ರಾಜ್ಯದಲ್ಲಿ ಜಾರಿಗೊಳಿಸದ ಪ್ರಗತಿಪರ ಕಾನೂನನ್ನು ಸರಕಾರ ಜಾರಿಗೊಳಿಸಿದೆ. 72 ಆಕ್ಷೇಪಗಳು ಬಂದಿದ್ದು, ಎಲ್ಲವನ್ನೂ ಆಲಿಸಲಾಗಿದೆ. ಸಂವಿಧಾನದ 42ನೇ ಪರಿಚ್ಛೇದದ ಅಡಿ ನೀತಿ ರೂಪಿಸಲು ಸರಕಾರಕ್ಕೆ ಅವಕಾಶವಿದೆ. ಈ ಸಂಬಂಧ ಸುಪ್ರೀಂ ಕೋರ್ಟ್ ನಿರ್ದೇಶನವೂ ಇದೆ. ಕಾನೂನು ಆಯೋಗವೂ ಈ ಕುರಿತು ಶಿಫಾರಸು ಮಾಡಿದೆ. ಇದೆಲ್ಲವನ್ನೂ ಆಕ್ಷೇಪದಲ್ಲಿ ವಿವರಿಸಲಾಗಿದೆ ಎಂದು ಸರಕಾರದ ಕ್ರಮವನ್ನು ಸಮರ್ಥಿಸಿಕೊಂಡರು.

ಸರಕಾರದ ಅಧಿಸೂಚನೆ ಎಲ್ಲ ಕ್ಷೇತ್ರಗಳಿಗೂ ಅನ್ವಯಿಸಲಿದೆಯೇ ಎಂಬ ನ್ಯಾಯಪೀಠದ ಪ್ರಶ್ನೆಗೆ ಅಡ್ವೊಕೇಟ್ ಜನರಲ್ ಹೌದು ಎಂದು ಉತ್ತರಿಸಿದರು. ಇದನ್ನು ಆಲಿಸಿದ ನ್ಯಾಯಪೀಠ, ಪ್ರಕರಣವನ್ನು ವಿಸ್ತೃತವಾಗಿ ವಿಚಾರಣೆ ನಡೆಸಬೇಕಿದ್ದು, ಜನವರಿಯಲ್ಲಿ ನಡೆಸಲಾಗುವುದು. ಅಷ್ಟರಲ್ಲಿ ಸರಕಾರ ಸಲ್ಲಿಸಿರುವ ಆಕ್ಷೇಪಗಳಿಗೆ ಪ್ರತಿಕ್ರಿಯೆಗಳಿದ್ದರೆ ಅರ್ಜಿದಾರರು ಸಲ್ಲಿಸಬಹುದು ಎಂದು ಹೇಳಿತು.

ಅರ್ಜಿದಾರರ ಪರ ವಕೀಲ ಬಿ.ಕೆ. ಪ್ರಶಾಂತ್, ಅಲ್ಲಿಯವರೆಗೆ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಆದೇಶಿಸಬೇಕು ಎಂದು ಕೋರಿದರು. ಇದಕ್ಕೆ ಅಡ್ವೋಕೇಟ್ ಜನರಲ್, ಸರಕಾರ ಈ ಆದೇಶವನ್ನು ಈಗಾಗಲೇ ಎಲ್ಲ ಕ್ಷೇತ್ರಗಳಲ್ಲಿಯೂ ಜಾರಿಗೊಳಿಸಿಯಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದಕ್ಕೆ ನ್ಯಾಯಮೂರ್ತಿಗಳು, ಅರ್ಜಿಯ ಮುಂದಿನ ವಿಚಾರಣೆಯೊಳಗೆ ಏನೂ ಆಗುವುದಿಲ್ಲ. ಇದು ಸಾರ್ವಜನಿಕ ಹಿತದೃಷ್ಟಿಯಿಂದ ಅತ್ಯಂತ ಮಹತ್ವದ ಪ್ರಕರಣವಾಗಿದೆ. ಈ ಸಂಬಂಧ ವಿಸ್ತೃತವಾಗಿ ವಾದ ಆಲಿಸಿದ ಬಳಿಕವೇ ಆದೇಶ ಹೊರಡಿಸಲಾಗುವುದು, ವಿಚಾರಣೆಗೆ ದಿನ ನಿಗದಿಪಡಿಸಲಾಗುವುದು ಎಂದರು.

ಅಂತಿಮವಾಗಿ ನ್ಯಾಯಪೀಠ, ಸರಕಾರದ ಆಕ್ಷೇಪಕ್ಕೆ ಪ್ರತ್ಯುತ್ತರ ದಾಖಲಿಸುವಂತೆ ಅರ್ಜಿದಾರರ ಪರ ವಕೀಲರಿಗೆ ನಿರ್ದೇಶಿಸಿ, ವಿಚಾರಣೆಯನ್ನು ಜನವರಿ 20ಕ್ಕೆ ಮುಂದೂಡಿತು. ಜೊತೆಗೆ, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವವರು ರಿಜಿಸ್ಟ್ರಾರ್ ಕಚೇರಿಯಲ್ಲಿ ಸಲ್ಲಿಸಿ, ಅರ್ಜಿಯ ಪ್ರತಿಯನ್ನು ಸರಕಾರದ ಪರ ವಕೀಲರಿಗೆ ಒದಗಿಸಬೇಕು ಎಂದು ಸೂಚಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X