ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ

ಬೆಂಗಳೂರು, ಆ.26: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ 75 ಮಂದಿ ಸದಸ್ಯನ್ನೊಳಗೊಂಡ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ರಚಿಸಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ.
ಉಪ ಮುಖ್ಯಮಂತ್ರಿ ಹಾಗೂ ಬೆಂಗಳುರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್-ಉಪಾಧ್ಯಕ್ಷ, ಪದನಿಮಿತ್ತ ಸದಸ್ಯರನ್ನಾಗಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ.ಜೆ.ಜಾರ್ಜ್, ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್.
ಕಂದಾಯ ಸಚಿವ ಕೃಷ್ಣ ಬೈರೇಗೌಡ, ವಸತಿ ಸಚಿವ ಝಮೀರ್ ಅಹ್ಮದ್ ಖಾನ್, ಲೋಕಸಭಾ ಸದಸ್ಯರಾದ ಡಾ.ಸಿ.ಎನ್.ಮಂಜುನಾಥ್, ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ರಾಜ್ಯಸಭಾ ಸದಸ್ಯರಾದ ನಾರಾಯಣ ಕೊರಗಪ್ಪ, ಜೈರಾಮ್ ರಮೇಶ್, ಜಗ್ಗೇಶ್, ಲಹರ್ ಸಿಂಗ್ ಸಿರೋಯಾ, ಜಿ.ಸಿ.ಚಂದ್ರಶೇಖರ್.
ಶಾಸಕರಾದ ಎಸ್.ಆರ್.ವಿಶ್ವನಾಥ್, ಬಿ.ಎ.ಬಸವರಾಜ, ಎಸ್.ಟಿ.ಸೋಮಶೇಖರ್, ಮುನಿರತ್ನ, ಎಸ್.ಮುನಿರಾಜು, ಕೆ.ಗೋಪಾಲಯ್ಯ, ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಎ.ಸಿ.ಶ್ರೀನಿವಾಸ್, ಎಸ್.ರಘು, ರಿಝ್ವಾನ್ ಅರ್ಶದ್, ಎನ್.ಎ.ಹಾರಿಸ್, ಎಸ್.ಸುರೇಶ್ ಕುಮಾರ್, ಪ್ರಿಯಕೃಷ್ಣ, ಎಂ.ಕೃಷ್ಣಪ್ಪ, ಉದಯ ಬಿ.ಗರುಡಾಚಾರ್, ಎಲ್.ಎ.ರವಿಸುಬ್ರಹ್ಮಣ್ಯ, ಆರ್.ಅಶೋಕ್, ಸಿ.ಕೆ.ರಾಮಮೂರ್ತಿ, ಮಂಜುಳಾ ಅರವಿಂದ ಲಿಂಬಾವಳಿ, ಎಂ.ಸತೀಶ್ ರೆಡ್ಡಿ, ಎಂ.ಕೃಷ್ಣಪ್ಪ.
ವಿಧಾನಪರಿಷತ್ ಸದಸ್ಯರಾದ ಪುಟ್ಟಣ್ಣ, ಡಾ.ಕೆ.ಗೋವಿಂದರಾಜು, ಎಚ್.ಎಸ್.ಗೋಪಿನಾಥ್, ಬಿ.ಕೆ.ಹರಿಪ್ರಸಾದ್, ಟಿ.ಎನ್.ಜವರಾಯಿಗೌಡ, ಎಸ್.ಕೇಶವ ಪ್ರಸಾದ್, ಎನ್.ನಾಗರಾಜು(ಎಂ.ಟಿ.ಬಿ), ನಸೀರ್ ಅಹ್ಮದ್, ಎಂ.ನಾಗರಾಜು, ಟಿ.ಎ.ಶರವಣ, ಯತೀಂದ್ರ ಸಿದ್ದರಾಮಯ್ಯ.
ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಮಹಾಪೌರರು, ಬೆಂಗಳೂರು ಪೂರ್ವ ನಗರ ಪಾಲಿಕೆಯ ಮಹಾಪೌರರು, ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಮಹಾಪೌರರು, ಬೆಂಗಳೂರು ಉತ್ತರ ನಗರ ಪಾಲಿಕೆಯ ಮಹಾಪೌರರು, ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಮಹಾಪೌರರನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರನ್ನು ಪದನಿಮಿತ್ತ ಸದಸ್ಯ ಕಾರ್ಯದರ್ಶಿ, ಪದನಿಮಿತ್ತ ಸದಸ್ಯರನ್ನಾಗಿ ಬೆಂಗಳೂರು ಘನ ತ್ಯಾಜ್ಯ ನಿರ್ವಹಣೆ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮೇಜರ್ ಮಣಿವಣ್ಣನ್ ಪಿ., ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್.
ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಜೆ.ರವಿಶಂಕರ್, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮಹಾನಗರ ಆಯುಕ್ತ ರಾಜೇಂದ್ರ ಚೋಳನ್, ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದೀಪಾ ಚೋಳನ್, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್.
ಬೆಂಗಳೂರು ಮಹಾನಗರ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್ ಆರ್., ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಡಾ.ಶಿವಶಂಕರ್ ಎನ್., ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತ, ಬೆಂಗಳೂರು ಪೂರ್ವ ನಗರ ಪಾಲಿಕೆಯ ಆಯುಕ್ತ, ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಆಯುಕ್ತ, ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತ, ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಆಯುಕ್ತ.
ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್, ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ನಿರ್ದೇಶಕ ಟಿ.ಎನ್.ಶಿವಶಂಕರ್, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ನಗರ ಯೋಜಕರು ಹಾಗೂ ಮುಖ್ಯ ಅಭಿಯಂತರರನ್ನು ಪದನಿಮಿತ್ತ ಸದಸ್ಯರನ್ನಾಗಿ ಸರಕಾರ ನೇಮಕ ಮಾಡಿದೆ.







