Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಕ್ರಮ ಎಲ್‌ಇಡಿ, ವಾಣಿಜ್ಯ ಜಾಹೀರಾತು...

ಅಕ್ರಮ ಎಲ್‌ಇಡಿ, ವಾಣಿಜ್ಯ ಜಾಹೀರಾತು ಫಲಕಗಳ ಸಕ್ರಮಗೊಳಿಸುವಿಕೆ ನ್ಯಾಯಾಲಯದ ತೀರ್ಪಿಗೆ ಒಳಪಡಲಿದೆ : ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ10 Aug 2026 10:10 PM IST
share
ಅಕ್ರಮ ಎಲ್‌ಇಡಿ, ವಾಣಿಜ್ಯ ಜಾಹೀರಾತು ಫಲಕಗಳ ಸಕ್ರಮಗೊಳಿಸುವಿಕೆ ನ್ಯಾಯಾಲಯದ ತೀರ್ಪಿಗೆ ಒಳಪಡಲಿದೆ : ಹೈಕೋರ್ಟ್

ಬೆಂಗಳೂರು : ನಗರದಲ್ಲಿರುವ ಅಕ್ರಮ ಎಲ್‌ಇಡಿ ಹಾಗೂ ವಾಣಿಜ್ಯ ಜಾಹೀರಾತು ಫಲಕಗಳ ವಿರುದ್ಧ ಕೈಗೊಂಡಿರುವ ಕ್ರಮಗಳ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ) ನಿರ್ದೇಶಿಸಿರುವ ಹೈಕೋರ್ಟ್, ಇಂತಹ ಯಾವುದೇ ಜಾಹೀರಾತು ಫಲಕಗಳ ಸಕ್ರಮಗೊಳಿಸುವಿಕೆಯು ಅವುಗಳ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಿದೆ.

ಗ್ರೇಟರ್‌ ಬೆಂಗಳೂರು ಪ್ರದೇಶಗಳಲ್ಲಿ (ಜಾಹೀರಾತು) ನಿಯಮ 2025ರ ನಿಯಮ 8(7)(6)ರ ಹಾಗೂ ಈ ಸಂಬಂಧ 2026ರ ಫೆಬ್ರವರಿ 4ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರದ ನಿವೃತ್ತ ನೌಕರ ಹಾಗೂ ಸಾಮಾಜಿಕ ಕಾರ್ಯಕರ್ತ ಕೆ. ಲಕ್ಷ್ಮಣ್ ಸಲ್ಲಿರುವ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಎಸ್. ಹೇಮಲತಾ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ವಾಣಿಜ್ಯ ಜಾಹೀರಾತುಗಳನ್ನು ಪ್ರದರ್ಶಿಸುವ ಸ್ವಯಂ-ಎಲ್‌ಇಡಿ ಫಲಕಗಳನ್ನು ಶಾಲಾ ಆವರಣಗಳು ಸೇರಿ ನಗರದಾದ್ಯಂತ ಅಕ್ರಮವಾಗಿ ಅಳವಡಿಸಲಾಗಿದ್ದು, ಅವುಗಳ ವಿರುದ್ಧ ಜಿಬಿಎ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು.

ಜಿಬಿಎ ಪರ ವಕೀಲರು, ಈ ವಿಷಯದಲ್ಲಿ ಮಾಹಿತಿ ಪಡೆದು ನ್ಯಾಯಾಲಯಕ್ಕೆ ತಿಳಿಸಲಾಗುವುದು. ಅದಕ್ಕಾಗಿ ಒಂದು ವಾರ ಕಾಲಾವಕಾಶ ಕೋರಿತಲ್ಲದೆ, ಹೊಸ ಜಾಹೀರಾತು ನಿಯಮಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದನ್ನು ಆಲಿಸಿ‌ದ ನ್ಯಾಯಪೀಠ, ಅಕ್ರಮ ಜಾಹೀರಾತು ಫಲಕಗಳ ವಿಚಾರದಲ್ಲಿ 2026ರ ಜೂನ್ 18ರಂದು ಹೊರಡಿಸಲಾಗಿರುವ ಆದೇಶದ ಅನುಸಾರ ಕೈಗೊಂಡ ಕ್ರಮಗಳ ವರದಿಯನ್ನು ಸಲ್ಲಿಸುವಂತೆ ಜಿಬಿಎ ಪರ ವಕೀಲರಿಗೆ ನಿರ್ದೇಶಿಸಿತು. ಜತೆಗೆ, ಈವರೆಗೆ ಯಾವುದೇ ಅಕ್ರಮ ಜಾಹೀರಾತು ಫಲಕಗಳನ್ನು ಸಕ್ರಮಗೊಳಿಸಲಾಗಿದೆಯೇ ಎಂಬುದನ್ನು ವರದಿಯಲ್ಲಿ ನಿರ್ದಿಷ್ಟವಾಗಿ ಉಲ್ಲೇಖಿಸಬೇಕು ಎಂದು ಸೂಚಿಸಿದ ನ್ಯಾಯಪೀಠ, ಅಂತಹ ಯಾವುದೇ ಸಕ್ರಮಗೊಳಿಸುವಿಕೆಯು ಹಾಲಿ ಅರ್ಜಿಯಲ್ಲಿ ನ್ಯಾಯಾಲಯ ನೀಡುವ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಿ, ವಿಚಾರಣೆಯನ್ನು ಅಕ್ಟೋಬರ್ 13 ಕ್ಕೆ ಮುಂದೂಡಿತು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X