ಎಂಬಿಎ, ಎಂಸಿಎ, ಎಂ.ಟೆಕ್ ಕೋರ್ಸ್; ಪ್ರವೇಶಕ್ಕೆ ನ.12 ಕೊನೆ ದಿನ

ಬೆಂಗಳೂರು : ಎಂಬಿಎ, ಎಂಸಿಎ, ಎಂ.ಟೆಕ್ ಕೋರ್ಸ್ಗಳ ಪ್ರವೇಶಕ್ಕೆ ಅಂತಿಮ ಸುತ್ತಿನಲ್ಲಿ ಸೀಟು ಹಂಚಿಕೆಯಾದವರು ನ.11ರೊಳಗೆ ಶುಲ್ಕ ಪಾವತಿಸಿ, ನ.12ರೊಳಗೆ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಅಂತಿಮ ಸುತ್ತಾಗಿರುವ ಕಾರಣ ಈ ಸುತ್ತಿನಲ್ಲಿ ಯಾವುದೇ ಚಾಯ್ಸ್ ದಾಖಲಿಸಲು ಅವಕಾಶ ಇರುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.
Next Story




