Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಬೆಂಗಳೂರಿನಲ್ಲಿ ಗುಣಮಟ್ಟದ ರಸ್ತೆ...

‘ಬೆಂಗಳೂರಿನಲ್ಲಿ ಗುಣಮಟ್ಟದ ರಸ್ತೆ ನಿರ್ಮಾಣ ಮಾಡುವುದು ರಾಕೆಟ್ ಸೈನ್ಸ್ ಗಿಂತ ಕ್ಲಿಷ್ಟವೇ?’: GBA ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ತರಾಟೆ

ವಾರ್ತಾಭಾರತಿವಾರ್ತಾಭಾರತಿ16 Jun 2026 9:54 PM IST
share
‘ಬೆಂಗಳೂರಿನಲ್ಲಿ ಗುಣಮಟ್ಟದ ರಸ್ತೆ ನಿರ್ಮಾಣ ಮಾಡುವುದು ರಾಕೆಟ್ ಸೈನ್ಸ್ ಗಿಂತ ಕ್ಲಿಷ್ಟವೇ?’: GBA ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ತರಾಟೆ

ಬೆಂಗಳೂರು: ನಗರದಲ್ಲಿ ಒಂದು ಕಡೆಯಿಂದ ರಸ್ತೆ ಮಾಡುತ್ತಾ ಹೋದರೆ, ಮತ್ತೊಂದು ಕಡೆಯಿಂದ ರಸ್ತೆಗುಂಡಿಗಳು ನಿರ್ಮಾಣವಾಗುತ್ತಿರುತ್ತವೆ. ಹೀಗೆ ವರ್ಷ ಪೂರ್ತಿ ರಸ್ತೆಗುಂಡಿ ಮುಚ್ಚುವುದೇ ಕೆಲಸವಾಗಿದೆ. ಹಾಗಾದರೆ ನಗರದಲ್ಲಿ ಗುಣಮಟ್ಟದ ರಸ್ತೆ ನಿರ್ಮಾಣ ಮಾಡುವುದು ರಾಕೆಟ್ ಸೈನ್ಸ್ ಗಿಂತ ಕ್ಲಿಷ್ಟವೇ ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವ ಕೃಷ್ಣ ಬೈರೇಗೌಡ ಜಿಬಿಎ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮಂಗಳವಾರ ನಗರದಲ್ಲಿರುವ ಜಿಬಿಎ ಕೇಂದ್ರ ಕಚೇರಿಯಲ್ಲಿ ನಡೆದ ‘ಐದು ನಗರ ಪಾಲಿಕೆಗಳು, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ ಸೇರಿದಂತೆ ವಿವಿಧ ವಿಷಯಗಳ ಕುರಿತ ಸಭೆ’ಯಲ್ಲಿ ಮಾತನಾಡಿದ ಅವರು, ಬೆಂಗಳೂರು ಎಂದರೆ ರಸ್ತೆಗುಂಡಿ ಬಿಟ್ಟು, ಬೇರೆ ಏನು ಚರ್ಚೆ ಆಗುತ್ತಿಲ್ಲ. ದಕ್ಷಿಣ ಭಾರತದ ಮಟ್ಟಿಗೆ ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಬೆಂಗಳೂರಿನ ರಸ್ತೆಗಳು ತೀರಾ ಕಳಪೆಯಾಗಿವೆ ಎಂದರು.

‘ಇನ್ನು ಮುಂದೆ ಹಳೆ ಕಲ್ಲು ಹೊಸ ಬಿಲ್ಲು’ ಎಂಬಂತೆ ರಸ್ತೆ ಗುಂಡಿ ಮುಚ್ಚುವ ತಾತ್ಕಾಲಿಕ ಪರಿಹಾರದ ಬದಲಾಗಿ ಅಧಿಕಾರಿಗಳು ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಮುಂದಾಗಬೇಕು. ಕೆಟ್ಟ ರಸ್ತೆಗಳ ಕಾರಣಕ್ಕೆ ಉಂಟಾಗುತ್ತಿರುವ ಜನರ ಬವಣೆ ನೀಗಬೇಕು. ಒಳ್ಳೆಯ ಕೆಲಸ ಮಾಡುವ ಅಧಿಕಾರಿಗಳ ಹಿಂದೆ ನಾನು ಎಂದಿಗೂ ಬೆಂಬಲವಾಗಿ ನಿಲ್ಲುತ್ತೇನೆ ಎಂದು ಅವರು ತಿಳಿಸಿದರು.

ಬೆಂಗಳೂರು ಬಹಳಷ್ಟು ಸವಾಲುಗಳನ್ನು ಹೊಂದಿರುವ ನಗರವಾಗಿದೆ. ನಗರದಲ್ಲಿ ವಾಸಿಸುವ 1.5 ಕೋಟಿ ಜನರ ಜೀವನ ಗುಣಮಟ್ಟವನ್ನು ಸುಧಾರಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಬೆಂಗಳೂರು ನಮ್ಮ ರಾಜ್ಯ ಹಾಗೂ ದೇಶದ ಅಮೂಲ್ಯ ಆಸ್ತಿಯಾಗಿದ್ದು, ವಿಶ್ವದ ವಿವಿಧ ಭಾಗಗಳ ಜನರು ಹಾಗೂ ಅನೇಕ ಸಂಸ್ಥೆಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ. ಆ ನಿಟ್ಟಿನಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.

ಸಂಚಾರ ದಟ್ಟಣೆ ನಿವಾರಣೆಗೆ ಟನಲ್ ರಸ್ತೆ, ಎಲಿವೇಟೆಡ್ ಕಾರಿಡಾರ್ ಹಾಗೂ ಸಂಚಾರಯುಕ್ತ ರಸ್ತೆ ನಿರ್ಮಾಣದಂತಹ ಯೋಜನೆಗಳನ್ನು ರೂಪಿಸಿ ಅನುಷ್ಠಾನದ ಹಂತಕ್ಕೆ ತರಲಾಗಿದೆ. ನಗರದಲ್ಲಿದ್ದ ಅಸ್ಪಷ್ಟ ಖಾತೆ ಸಮಸ್ಯೆಗೆ ಪರಿಹಾರವಾಗಿ ದೇಶದಲ್ಲಿಯೇ ಮೊದಲ ಬಾರಿಗೆ ಅತ್ಯುತ್ತಮ ಮಾದರಿಯ ಇ-ಖಾತಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ಅವರು ವಿವರಿಸಿದರು.

ನಗರದ ದೀರ್ಘಾವಧಿಯ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ಸಮಗ್ರವಾಗಿ ರೂಪಿಸಲಾಗಿದೆ. ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ನಾವು ಕೆಲಸ ಮಾಡುತ್ತೇವೆ. ಇದರ ಜೊತೆಗೆ ಜನರ ದಿನನಿತ್ಯದ ಸಮಸ್ಯೆಗಳ ಪರಿಹಾರಕ್ಕೂ ಹೆಚ್ಚಿನ ಆದ್ಯತೆ ನೀಡಬೇಕಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಬೇಕು ಎಂದು ಅವರು ಸೂಚನೆ ನೀಡಿದರು.

ಸಾಮಾಜಿಕ, ಸಾಂಸ್ಕೃತಿಕ, ಕಲಾತ್ಮಕ ಹಾಗೂ ಕ್ರೀಡಾ ಚಟುವಟಿಕೆಗಳನ್ನು ಒಳಗೊಂಡ ಸಮಗ್ರ ಅಭಿವೃದ್ಧಿಯಿಂದ ಮಾತ್ರ ಜೀವನದ ಗುಣಮಟ್ಟ ಸುಧಾರಿಸಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲ ದೃಷ್ಟಿಕೋನದೊಂದಿಗೆ ಬೆಂಗಳೂರಿನ ಜನರ ಜೀವನ ಗುಣಮಟ್ಟ ಸುಧಾರಣೆಗೆ ಹೆಚ್ಚಿನ ಪ್ರಯತ್ನ ಮಾಡಲಾಗುವುದು ಎಂದು ಅವರು ತಿಳಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿನ ಅಭಿವೃದ್ಧಿಗೆ ಸ್ಪಷ್ಟವಾದ ದೂರದೃಷ್ಟಿಯ ಯೋಜನೆಗಳನ್ನು ಹೊಂದಿದ್ದಾರೆ. ಅದರಂತೆ ಎಲ್ಲ ಅಧಿಕಾರಿಗಳು, ಆಡಳಿತ ವ್ಯವಸ್ಥೆ ಹಾಗೂ ಆಡಳಿತ ಮತ್ತು ವಿರೋಧ ಪಕ್ಷಗಳ ಜನಪ್ರತಿನಿಧಿಗಳ ಸಹಕಾರದೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬದ್ಧತೆಯಿಂದ ಕೆಲಸ ಮಾಡಲಾಗುವುದು ಎಂದು ಅವರು ಹೇಳಿದರು.

ನಗರದ ರಸ್ತೆ ಗುಂಡಿಗಳನ್ನು ಮುಚ್ಚಲು ಅಗತ್ಯ ಅನುದಾನ ಲಭ್ಯವಿದೆ. ವ್ಯವಸ್ಥಿತವಾಗಿ ಹಾಗೂ ಗುಣಮಟ್ಟದೊಂದಿಗೆ ಗುಂಡಿ ಮುಚ್ಚುವ ಕಾಮಗಾರಿಗಳನ್ನು ಕೈಗೊಳ್ಳಬೇಕು. ಇದರಿಂದ ಭವಿಷ್ಯದಲ್ಲಿ ಉಂಟಾಗುವ ಸಮಸ್ಯೆಗಳನ್ನು ತಡೆಯಲು ಸಾಧ್ಯವಾಗುತ್ತದೆ. ರಸ್ತೆ ಕಾಮಗಾರಿಗಳ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

ನಗರದಲ್ಲಿ ಮನೆ-ಮನೆಗೆ ಕಸ ಸಂಗ್ರಹಿಸುವ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕೆಲವರು ಮನೆ ಬಾಗಿಲಿಗೆ ಕಸ ಸಂಗ್ರಹ ವಾಹನ ಬಂದರೂ ರಸ್ತೆ ಬದಿಯಲ್ಲಿ ಕಸವನ್ನು ತಂದು ಹಾಕುತ್ತಿರುವುದು ಕಂಡುಬರುತ್ತಿದೆ. ಕಸ ಸಂಗ್ರಹಣಾ ವ್ಯವಸ್ಥೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ನಾಗರಿಕರ ಸಹಕಾರವೂ ಅಗತ್ಯವಾಗಿದೆ. ಅಧಿಕಾರಿಗಳು ಮತ್ತು ಸಾರ್ವಜನಿಕರು ಒಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಾಧ್ಯ ಎಂದು ಅವರು ಹೇಳಿದರು.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಮುಖ್ಯ ಆಯುಕ್ತ ಮಹೇಶ್ವರ ರಾವ್, ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್, ಸುಷಮಾ ಗೋಡಬೋಲೆ, ಡಾ.ಕೆ. ಹರೀಶ್ ಕುಮಾರ್, ವೆಂಕಟ ಚಲಪತಿ, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಸಿಇಒ ಕರೀಗೌಡ, ನಗರ ಪಾಲಿಕೆ ಆಯುಕ್ತ ರಮೇಶ್ ಡಿ.ಎಸ್.,ಪೊಮ್ಮಲ ಸುನೀಲ್ ಕುಮಾರ್, ಜಿ. ಜಗದೀಶ್, ರಮೇಶ್ ಕೆ.ಎನ್., ಡಾ. ರಾಜೇಂದ್ರ ಕೆ.ವಿ., ಅಪರ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Krishna Byre GowdaGBA
share
ವಾರ್ತಾಭಾರತಿ
ವಾರ್ತಾಭಾರತಿ
Next Story
X