Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. Bengaluru | 6 ತಿಂಗಳಲ್ಲಿ ಬಾಕಿ ವೈಟ್...

Bengaluru | 6 ತಿಂಗಳಲ್ಲಿ ಬಾಕಿ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಳಿಸಲು ಸಚಿವ ಕೃಷ್ಣಬೈರೇಗೌಡ ಸೂಚನೆ

ವಾರ್ತಾಭಾರತಿವಾರ್ತಾಭಾರತಿ23 Jun 2026 12:03 AM IST
share
Bengaluru | 6 ತಿಂಗಳಲ್ಲಿ ಬಾಕಿ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಳಿಸಲು ಸಚಿವ ಕೃಷ್ಣಬೈರೇಗೌಡ ಸೂಚನೆ
ಸಂಚಾರ ದಟ್ಟಣೆ ನಿವಾರಿಸಲು ಶಾಶ್ವತ ಪರಿಹಾರಕ್ಕೆ ‘ಬಿ-ಸ್ಮೈಲ್’ ದಿಕ್ಸೂಚಿ!

ಬೆಂಗಳೂರು: ನಗರದಲ್ಲಿ ಬಿ-ಸ್ಮೈಲ್ ವತಿಯಿಂದ ಕೈಗೆತ್ತಿಕೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಮಗ್ರ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸೂಚನೆ ನೀಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಸೋಮವಾರ ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಸ್ಮಾರ್ಟ್ ಇನ್‍ಫ್ರಾಸ್ಟ್ರಕ್ಚರ್ ಲಿಮಿಟೆಡ್(ಬಿ-ಸ್ಮೈಲ್) ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ದೀರ್ಘಕಾಲದ ಸಂಚಾರ ದಟ್ಟಣೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ ಎಂದರು.

ಬಿ-ಸ್ಮೈಲ್ ವತಿಯಿಂದ ಸಂಚಾರ ಸಮಸ್ಯೆಗಳಿಗೆ ದೀರ್ಘಾವಧಿಯ ಪರಿಹಾರ ಒದಗಿಸಲು ಕೈಗೆತ್ತಿಕೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ನೀಲನಕ್ಷೆ ರೂಪಿಸಿದ್ದು, ಅನೇಕ ಯೋಜನೆಗಳು ಅನುಷ್ಠಾನದ ಹಂತದಲ್ಲಿವೆ. ನಾನು ಯಾವುದೇ ಹೊಸ ಸಲಹೆ-ಸೂಚನೆಗಳನ್ನು ನೀಡಿಲ್ಲ. ಈಗಾಗಲೇ ರೂಪಿಸಿರುವ ಯೋಜನೆಗಳನ್ನು ತ್ವರಿತಗತಿಯಲ್ಲಿ ಮತ್ತು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲಾಗಿದೆ ಎಂದು ಕೃಷ್ಣಬೈರೇಗೌಡ ಹೇಳಿದರು.

ನಗರದಲ್ಲಿ ಹೆಚ್ಚು ಸಂಚಾರ ದಟ್ಟಣೆ ಇರುವ ರಸ್ತೆಗಳು ಹಾಳಾದರೆ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ 2016ರಿಂದ ಪ್ರಮುಖ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಮುಖ್ಯ ರಸ್ತೆಗಳನ್ನು ಸುಸ್ಥಿತಿಯಲ್ಲಿಡಲು, ಪದೇಪದೇ ಹಾಳಾಗುವುದನ್ನು ತಡೆಯಲು ಹಾಗೂ 20-30 ವರ್ಷಗಳ ಕಾಲ ಬಾಳಿಕೆ ಬರುವ ರಸ್ತೆಗಳನ್ನು ನಿರ್ಮಿಸಲು ಈ ಕಾಮಗಾರಿ ಸಹಕಾರಿಯಾಗಲಿದೆ ಎಂದು ಕೃಷ್ಣಬೈರೇಗೌಡ ತಿಳಿಸಿದರು.

ಒಂದು ಕಿ.ಮೀ. ವೈಟ್ ಟಾಪಿಂಗ್ ಕಾಮಗಾರಿಗೆ ಸುಮಾರು 10 ಕೋಟಿ ರೂ. ವೆಚ್ಚವಾಗುತ್ತದೆ. ಅದೇ ಅವಧಿಯಲ್ಲಿ ಡಾಂಬರೀಕರಣವನ್ನು 5-6 ಬಾರಿ ಮಾಡಿದರೆ ಹೆಚ್ಚಿನ ವೆಚ್ಚವಾಗುತ್ತದೆ. ಈ ಹಿನ್ನೆಲೆಯಲ್ಲಿ ದೀರ್ಘಕಾಲ ಬಾಳಿಕೆ ಬರುವ, ಗುಂಡಿ ಮುಕ್ತ ರಸ್ತೆಗಳನ್ನು ನಿರ್ಮಿಸುವ ಉದ್ದೇಶದಿಂದ ವೈಟ್ ಟಾಪಿಂಗ್ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಕೃಷ್ಣಬೈರೇಗೌಡ ಹೇಳಿದರು.

6 ತಿಂಗಳಲ್ಲಿ ಬಾಕಿ ಕಾಮಗಾರಿ ಪೂರ್ಣಗೊಳಿಸಿ: ಈಗಾಗಲೇ 196 ಕಿ.ಮೀ. ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಂಡಿದೆ. ಹೊಸದಾಗಿ 126 ಕಿ.ಮೀ. ರಸ್ತೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಅದರಲ್ಲಿ 58 ಕಿ.ಮೀ. ಪೂರ್ಣಗೊಂಡಿದೆ. ಉಳಿದ ಕಾಮಗಾರಿಗಳಿಗೆ ವೇಗ ನೀಡಿ ಮುಂದಿನ 6 ತಿಂಗಳಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವೈಜ್ಞಾನಿಕ ರೀತಿಯಲ್ಲಿ ರಸ್ತೆಗಳನ್ನು ನಿರ್ಮಿಸುವುದರ ಜೊತೆಗೆ ಗುಣಮಟ್ಟದ ಪಾದಚಾರಿ ಮಾರ್ಗಗಳನ್ನೂ ನಿರ್ಮಿಸಲಾಗುತ್ತಿದೆ. ವೈಟ್ ಟಾಪಿಂಗ್ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ಯಾವುದೇ ಸಮಸ್ಯೆ ಇಲ್ಲ. ಅಧಿಕಾರಿಗಳು ಗುತ್ತಿಗೆದಾರರ ಮೇಲೆ ಸೂಕ್ತ ಒತ್ತಡ ಹೇರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದ್ದೇನೆ ಎಂದು ಕೃಷ್ಣಬೈರೇಗೌಡ ತಿಳಿಸಿದರು.

ಹೊಸದಾಗಿ 450 ಕಿ.ಮೀ. ರಸ್ತೆಗೆ ವೈಟ್ ಟಾಪಿಂಗ್: ರಾಜ್ಯ ಸರಕಾರವು 2026-27ನೇ ಸಾಲಿನಲ್ಲಿ 3ಸಾವಿರ ಕೋಟಿ ರೂ.ವೆಚ್ಚದಲ್ಲಿ 450ಕಿ.ಮೀ. ಉದ್ದದ ವೈಟ್ ಟಾಪಿಂಗ್ ರಸ್ತೆ ನಿರ್ಮಾಣಕ್ಕೆ ಡಿಪಿಆರ್ ಸಿದ್ಧಪಡಿಸಿದೆ. ಎಲ್ಲಾ ಪ್ರಕ್ರಿಯೆಗಳು ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ಟೆಂಡರ್ ಆಹ್ವಾನಿಸಲಾಗುವುದು. ವೈಟ್ ಟಾಪಿಂಗ್ ಕಾಮಗಾರಿ ನಡೆಯುವ ಎಲ್ಲಾ ಸ್ಥಳಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ಕಾಮಗಾರಿ ನಡೆಯುವ ಪ್ರದೇಶಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಕೃಷ್ಣಬೈರೇಗೌಡ ತಿಳಿಸಿದರು.

ರಸ್ತೆ ಬದಿಯಲ್ಲಿ ಸಾಮಗ್ರಿಗಳನ್ನು ರಾಶಿ ಮಾಡುವುದು, ಜೆಲ್ಲಿ ಹಾಕಿ ಹಾಗೆಯೇ ಬಿಡುವುದು ಹಾಗೂ ರಸ್ತೆ ಅಗೆದು ನಿರ್ಲಕ್ಷ್ಯ ವಹಿಸುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಆದ್ದರಿಂದ ಗುರಿ ನಿಗದಿಪಡಿಸಿ ಹಂತ ಹಂತವಾಗಿ ಕಾಮಗಾರಿ ಪೂರ್ಣಗೊಳಿಸಬೇಕು. ಸಾರ್ವಜನಿಕರ ಸಮಸ್ಯೆಗಳನ್ನು ಅರಿತು ಕಾರ್ಯನಿರ್ವಹಿಸಬೇಕು. ಸ್ಥಳ ಪರಿಶೀಲನೆ ವೇಳೆ ಸಮಸ್ಯೆಗಳು ಕಂಡುಬಂದರೆ ಅವುಗಳನ್ನು ತಕ್ಷಣ ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೇನೆ ಎಂದು ಕೃಷ್ಣಬೈರೇಗೌಡ ತಿಳಿಸಿದರು.

ಸಭೆಯಲ್ಲಿ ಬಿ-ಸ್ಮೈಲ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ನಿರ್ದೇಶಕ(ತಾಂತ್ರಿಕ) ಪ್ರಹ್ಲಾದ್, ಮುಖ್ಯ ಇಂಜಿನಿಯರ್‍ಗಳಾದ ಮಾಲತಿ, ಮಾದೇಶ್, ವಿಶ್ವನಾಥ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂಪುಟದ ಅನುಮೋದನೆ ಬಳಿಕ ಸುರಂಗ ಮಾರ್ಗ ಯೋಜನೆ ಅನುಷ್ಠಾನ: ಕೃಷ್ಣಬೈರೇಗೌಡ

ರಾಜಧಾನಿ ಬೆಂಗಳೂರಿನ ಉತ್ತರ-ದಕ್ಷಿಣ ದಿಕ್ಕಿನಲ್ಲಿ 16.7 ಕಿ.ಮೀ. ಉದ್ದದ ಸುರಂಗ ಮಾರ್ಗ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಸರಕಾರದ ಅನುಮೋದನೆಗೆ ಕಳುಹಿಸಲಾಗಿದೆ. ಸಚಿವ ಸಂಪುಟದ ಅನುಮೋದನೆಯ ಬಳಿಕ ಯೋಜನೆ ಅನುಷ್ಠಾನಗೊಳ್ಳಲಿದೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಸೋಮವಾರ ಜಿಬಿಎ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುರಂಗ ಮಾರ್ಗ ಯೋಜನೆಯು ಸಂಕೀರ್ಣ ಹಾಗೂ ಮಹತ್ವದ ಯೋಜನೆಯಾಗಿದ್ದು, ಮುಂದಿನ ದಿನಗಳಲ್ಲಿ ಅದರ ಸಂಪೂರ್ಣ ವಿವರಗಳನ್ನು ಹಂಚಿಕೊಳ್ಳಲಾಗುವುದು ಎಂದರು.

ಪೂರ್ವ-ಪಶ್ಚಿಮ ಸುರಂಗ ಮಾರ್ಗ ಯೋಜನೆಯಡಿ ಹಳೆ ಮದ್ರಾಸ್ ರಸ್ತೆಯಿಂದ ಮೈಸೂರು ರಸ್ತೆಯವರೆಗೆ 22 ಕಿ.ಮೀ. ಉದ್ದದ ಸುರಂಗ ಮಾರ್ಗ ನಿರ್ಮಾಣಕ್ಕೆ ಮುಂದಿನ ಹಂತದಲ್ಲಿ ಟೆಂಡರ್ ಆಹ್ವಾನಿಸಲಾಗುವುದು ಎಂದು ಕೃಷ್ಣಬೈರೇಗೌಡ ಹೇಳಿದರು.

150 ಕಿ.ಮೀ. ಎಲಿವೇಟೆಡ್ ಕಾರಿಡಾರ್: ನಗರದ ಸಂಚಾರ ದಟ್ಟಣೆಗೆ ದೀರ್ಘಾವಧಿಯ ಪರಿಹಾರ ಕಲ್ಪಿಸುವ ಉದ್ದೇಶದಿಂದ 150 ಕಿ.ಮೀ. ಉದ್ದದ ಎಲಿವೇಟೆಡ್ ಕಾರಿಡಾರ್‍ಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ. ಇದರಲ್ಲಿ 75 ಕಿ.ಮೀ. ಉದ್ದದ ಕಾರಿಡಾರ್ ನಿರ್ಮಾಣಕ್ಕೆ ಟೆಂಡರ್ ಕರೆಯಲು ತೀರ್ಮಾನಿಸಲಾಗಿದೆ. ಇದಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಕೃಷ್ಣಬೈರೇಗೌಡ ಹೇಳಿದರು.

ಹೊರ ವರ್ತುಲ ರಸ್ತೆ ಮರು ವಿನ್ಯಾಸ: ಹೊರ ವರ್ತುಲ ರಸ್ತೆಯ ಮರುವಿನ್ಯಾಸಕ್ಕಾಗಿ 450 ಕೋಟಿ ರೂ. ವೆಚ್ಚದ ಸಮಗ್ರ ಯೋಜನೆ ರೂಪಿಸಲಾಗಿದೆ. ಮೆಟ್ರೋ ಕಾಮಗಾರಿಯೊಂದಿಗೆ ಈ ಯೋಜನೆಯನ್ನು ಏಕಕಾಲದಲ್ಲಿ ಆರಂಭಿಸಿದರೆ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಸಂಚಾರಿ ಪೆÇಲೀಸರೊಂದಿಗೆ ಚರ್ಚಿಸಿ ಸೂಕ್ತ ಸಮಯದಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದು ಕೃಷ್ಣಬೈರೇಗೌಡ ತಿಳಿಸಿದರು.

ಇನ್ನು, ನಗರದ ಸಂಚಾರ ದಟ್ಟಣೆಯನ್ನು ಪರಿಣಾಮಕಾರಿಯಾಗಿ ಕಡಿಮೆಗೊಳಿಸಲು ಸಮಗ್ರ ಪರಿಹಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ವೈಟ್ ಟಾಪಿಂಗ್ ರಸ್ತೆಗಳು, ಸುರಂಗ ಮಾರ್ಗಗಳು ಹಾಗೂ ಎಲಿವೇಟೆಡ್ ಕಾರಿಡಾರ್‍ಗಳನ್ನು ನಿರ್ಮಿಸಲಾಗುತ್ತಿದೆ. ಎಲಿವೇಟೆಡ್ ಹಾಗೂ ಸುರಂಗ ಮಾರ್ಗಗಳು ನಿರ್ಮಾಣವಾದ ನಂತರ ಪ್ರವೇಶ ಮತ್ತು ನಿರ್ಗಮನ ಪಾಯಿಂಟ್‍ಗಳಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ರಸ್ತೆ ಜಾಲವನ್ನು ಅಭಿವೃದ್ಧಿಪಡಿಸಿ ಸೂಕ್ತ ಪರಿಹಾರ ಕ್ರಮಗಳನ್ನು ರೂಪಿಸಬೇಕು. ಈ ಸಂಬಂಧ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಕೃಷ್ಣಬೈರೇಗೌಡ ವಿವರಿಸಿದರು.

Tags

BengaluruKrishna Byre Gowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X