Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರ್ವಜ್ಞನಗರ: ಕುವೆಂಪು ಥೀಮ್ ಪಾರ್ಕ್...

ಸರ್ವಜ್ಞನಗರ: ಕುವೆಂಪು ಥೀಮ್ ಪಾರ್ಕ್ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ11 Aug 2026 11:06 PM IST
share
ಸರ್ವಜ್ಞನಗರ: ಕುವೆಂಪು ಥೀಮ್ ಪಾರ್ಕ್ ಲೋಕಾರ್ಪಣೆ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್)ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್‍ಆರ್)ಯಡಿ ನಿರ್ಮಿಸಿರುವ ‘ಕುವೆಂಪು ಥೀಮ್ ಪಾರ್ಕ್'ಅನ್ನು ಇಂಧನ ಮತ್ತು ಪ್ರಾವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಮಂಗಳವಾರ ಉದ್ಘಾಟಿಸಿದರು.

ಕೆಪಿಟಿಸಿಎಲ್ ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಎಚ್‍ಬಿಆರ್ ಬಡಾವಣೆಯಲ್ಲಿ ಈ ಥೀಮ್ ಪಾರ್ಕ್ ನಿರ್ಮಿಸಿದೆ. ಉದ್ಯಾನ ಉದ್ಘಾಟಿಸಿ ಮಾತನಾಡಿದ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಕೆ.ಜೆ.ಜಾರ್ಜ್, ಹಸಿರು ಬೆಂಗಳೂರಿಗೆ ಈ ಥೀಮ್ ಪಾರ್ಕ್ ಅತ್ಯುತ್ತಮ ಕೊಡುಗೆಯಾಗಿದ್ದು, ಸ್ವಚ್ಛ ಮತ್ತು ಹಸಿರು ಬೆಂಗಳೂರು ನಿರ್ಮಾಣದ ಸರಕಾರದ ಬದ್ಧತೆಗೆ ಸಾಕ್ಷಿಯಾಗಿದೆ ಎಂದರು.

ಕೆಪಿಟಿಸಿಎಲ್ ತನ್ನದೇ ಸ್ಥಳದಲ್ಲಿ ಸಿಎಸ್‍ಆರ್ ಅನುದಾನದಲ್ಲಿ ಈ ಸುಂದರ ಪಾರ್ಕ್ ನಿರ್ಮಿಸಿದೆ. ಇದರಿಂದಾಗಿ ಎಚ್‍ಬಿಆರ್ ಬಡಾವಣೆಯಲ್ಲಿ ಕುರುಚಲು ಕಾಡಿನಂತೆ ಇದ್ದ ಸ್ಥಳ ಈಗ ಆಕರ್ಷಕ ತಾಣವಾಗಿದೆ. ಈ ಪಾರ್ಕ್ ನಿರ್ಮಾಣಕ್ಕೆ ಸಹಕಾರ ನೀಡಿದ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಈಗಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಇದನ್ನು ಸುಂದರವಾಗಿ ನಿರ್ಮಿಸಲು ನೆರವಾದ ಕೆಪಿಟಿಸಿಎಲ್ ಅಧಿಕಾರಿಗಳು, ಸಿಬ್ಬಂದಿಗೆ ಕ್ಷೇತ್ರದ ಜನತೆ ಹಾಗೂ ಸಮಗ್ರ ಬೆಂಗಳೂರು ನಾಗರಿಕರ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ ಎಂದು ಅವರು ತಿಳಿಸಿದರು.

ಬೆಂಗಳೂರು ನಗರಾಭಿವೃದ್ದಿ ಸಚಿವ ಕೃಷ್ಣಬೈರೇಗೌಡ ಮಾತನಾಡಿ, ಸಚಿವ ಕೆ.ಜೆ.ಜಾರ್ಜ್ ಅವರು ತಮ್ಮ ಇಲಾಖೆಯನ್ನು ಯಶಸ್ವಿಯಾಗಿ ನಡೆಸುತ್ತಿರುವುದಲ್ಲದೆ, ಸುಂದರ ಬೆಂಗಳೂರು ನಿರ್ಮಾಣಕ್ಕೂ ಹೆಚ್ಚಿನ ಸಹಕಾರ ನೀಡುತ್ತಿದ್ದಾರೆ. ಕೆಪಿಟಿಸಿಎಲ್ ತನ್ನದೇ ಆಸ್ತಿಯನ್ನು ಕ್ಷೇತ್ರದ ಜನತೆಗೆ ಮುಕ್ತವಾಗಿಸಿದ್ದು, ನಿಗಮದ ಸಹಕಾರದಿಂದ ಗಿಡಗಂಟೆಗಳಿದ್ದ ಸ್ಥಳ ಈಗ ಅತ್ಯುತ್ತಮ ಉದ್ಯಾನವಾಗಿ ರೂಪತಳೆದಿದೆ. ಮಕ್ಕಳು ಹಿರಿಯರಾದಿಯಾಗಿ ಎಲ್ಲರಿಗೂ ಸ್ಥಳ ಸಮುದಾಯ ಚಟುವಟಿಕೆ ಕೇಂದ್ರವಾಗಿ ಮುನ್ನಡೆಯಲಿದೆ. ಬೆಂಗಳೂರನ್ನು ಸುಂದರಗೊಳಿಸುವ ಈ ತಾಣ ಮುಖ್ಯವಾಗಲಿದೆ ಎಂದು ಹೇಳಿದರು.

ಕೆ.ಜೆ.ಜಾರ್ಜ್ ಅವರನ್ನು ಅಭಿನಂದಿಸಿದ ಕೃಷ್ಣಬೈರೇಗೌಡ: ಬೆಂಗಳೂರು ಅಭಿವೃದ್ಧಿಯಲ್ಲಿ ಈಗ ಹೊಸ ಪರ್ವ ಶುರುವಾಗಿದೆ. ಕೆ.ಜೆ.ಜಾರ್ಜ್ ಅವರ ಸೂಚನೆ ಮೇರೆಗೆ ಕ್ಲೀನ್-ಅಪ್ ಬೆಂಗಳೂರು ಅಭಿಯಾನಕ್ಕೆ ಬೆಸ್ಕಾಂ ಅಭೂತಪೂರ್ವ ಸಹಕಾರ ನೀಡಿದೆ. ರಜಾದಿನಗಳಲ್ಲೂ ಬೆಸ್ಕಾಂ ಸಿಬ್ಬಂದಿ ನಗರಾದ್ಯಂತ ಸಮೀಕ್ಷೆ ನಡೆಸಿ ಪಾದಚಾರಿ ಮಾರ್ಗಗಳಲ್ಲಿನ ಅನುಪಯುಕ್ತ ಕಂಬಗಳು, ಪರಿವರ್ತಕಗಳು, ಮಾರ್ಗದಲ್ಲಿ ಅಡಚಣೆ ಮಾಡುತ್ತಿದ್ದ ಉಪಕರಣಗಳನ್ನು ತೆರವುಗೊಳಿಸಿದ್ದಾರೆ. ಇದರ ಜತೆಗೆ ಕಸವನ್ನೂ ತೆರವುಗೊಳಿಸಿದ್ದಾರೆ. ಇದಕ್ಕಾಗಿ ಜಾರ್ಜ್ ಹಾಗೂ ಬೆಸ್ಕಾಂ ಅಧಿಕಾರಿ ಸಿಬ್ಬಂದಿಯನ್ನು ಅಭಿನಂದಿಸುತ್ತೇನೆ ಕೃಷ್ಣಬೈರೇಗೌಡ ಹೇಳಿದರು.

ಉದ್ಯಾನ ಲೋಕಾರ್ಪಣೆ ಬಳಿಕ ಸಚಿವರಿಬ್ಬರೂ ಒಂದು ಸುತ್ತು ಹಾಕಿ ಪಾರ್ಕ್ ವಿಶೇಷತೆಗಳನ್ನು ತಿಳಿದುಕೊಂಡರು. ಕಾರ್ಯಕ್ರಮದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಯೋಜನೆಗಳ ವಿಭಾಗದ ನಿರ್ದೇಶಕ ಆರ್.ಜಯಕುಮಾರ್, ನಿಗಮದ ಹಿರಿಯ ಅಧಿಕಾರಿಗಳು ಹಾಗೂ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಕುವೆಂಪು ಥೀಮ್ ಪಾರ್ಕ್ ವಿಶೇಷತೆ:

ಥೀಮ್ ಪಾರ್ಕ್ ಮೂಲಕ ಎಚ್‍ಬಿಆರ್ ಬಡಾವಣೆಯ 1500 ಚದರ ಅಡಿ ಪ್ರದೇಶವನ್ನು ಹಸಿರು ವಲಯವಾಗಿ ರೂಪಿಸಲಾಗಿದೆ. 700 ಮೀಟರ್ ನಡಿಗೆ ಮಾರ್ಗ, 100 ಜನರು ಕುಳಿತುಕೊಳ್ಳುವ ಬಯಲು ರಂಗಮಂದಿರ, ಕುಡಿಯುವ ನೀರಿನ ಘಟಕ, ಶೌಚಾಲಯ, ಧ್ವಜಸ್ಥಂಭ, ವಿಶ್ರಾಂತಿಗಾಗಿ ಗಜೀಬೋ, ನಂದಿನಿ ಹಾಲಿನ ಕೇಂದ್ರ ಹಾಗೂ ಹಾಪ್ ಕಾಮ್ಸ್ ಮಳಿಗೆಗೆ ಸ್ಥಳವಾಕಾಶ ಕಲ್ಪಿಸಲಾಗಿದೆ. ಮಕ್ಕಳಿಗಾಗಿ ಆಟದ ಸಾಮಾಗ್ರಿಗಳು ಹಾಗೂ ಓಪನ್ ಜಿಮ್ ಉಪಕರಣಗಳು ಹಾಗೂ ವಿಶ್ರಾಂತಿಗಾಗಿ ಕಲ್ಲು ಬೆಂಚುಗಳು, ವಿಶೇಷ ತಳಿಯ ಸಸ್ಯಗಳು, ಸುಸಜ್ಜಿತವಾದ ದೀಪದ ವ್ಯವಸ್ಥೆ ಎಲ್ಲವೂ ಪಾರ್ಕ್‍ನಲ್ಲಿದೆ. ಸುಮಾರು 4.65 ಕೋಟಿ ರೂ. ವೆಚ್ಚದಲ್ಲಿ ಕೆಪಿಟಿಸಿಎಲ್ ಈ ಪಾರ್ಕ್ ಅಭಿವೃದ್ದಿಪಡಿಸಿದೆ.


ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ:

ಕುವೆಂಪು ಥೀಮ್ ಪಾರ್ಕ್ ಲೋಕಾರ್ಪಣೆಗೊಳಿಸಿದ ಬಳಿಕ ಸಚಿವರಾದ ಕೆ.ಜೆ.ಜಾರ್ಜ್ ಮತ್ತು ಕೃಷ್ಣಬೈರೇಗೌಡ ಅವರು, ಸರ್ವಜ್ಞನಗರದ ವಿವಿಧಡೆ ನಡೆಯುತ್ತಿರುವ ನಾಗವಾರ ಮುಖ್ಯ ರಸ್ತೆಯ ವೈಟ್ ಟಾಪಿಂಗ್, ಕಾಚರಕನಹಳ್ಳಿ ಕೆರೆ ಪುನರುಜ್ಜೀವನ ಕಾಂಗಾರಿಗಳು ಹಾಗೂ ಕಸ ವಿಂಗಣೆ ಕೇಂದ್ರವನ್ನು ಚಾಲನೆಗೊಳಿಸಿದರು. ಲಿಡ್ಕರ್ ಘಟಕ ಹಾಗೂ ಬಾಣಸವಾಡಿ ಮುಖ್ಯ ರಸ್ತೆಯಲ್ಲಿ ಯೋಜಿಸಿರುವ ಮಾರುಕಟ್ಟೆ ಸ್ಥಳವನ್ನು ಪರಿಶೀಲನೆ ನಡೆಸಿದರು.

Tags

SarvagnanagarKuvempu Theme Park
share
ವಾರ್ತಾಭಾರತಿ
ವಾರ್ತಾಭಾರತಿ
Next Story
X