Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಡ-ಬಲ ಎನ್ನದೇ ಒಗ್ಗಟ್ಟಿನಿಂದ ಸಾಗೋಣ:...

ಎಡ-ಬಲ ಎನ್ನದೇ ಒಗ್ಗಟ್ಟಿನಿಂದ ಸಾಗೋಣ: ಸಚಿವ ಡಾ.ಎಚ್.ಸಿ. ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ6 April 2026 12:08 AM IST
share
ಎಡ-ಬಲ ಎನ್ನದೇ ಒಗ್ಗಟ್ಟಿನಿಂದ ಸಾಗೋಣ: ಸಚಿವ ಡಾ.ಎಚ್.ಸಿ. ಮಹದೇವಪ್ಪ

ಬೆಂಗಳೂರು: ಪರಿಶಿಷ್ಟ ಸಮುದಾಯಗಳು ಎಡ-ಬಲ ಎನ್ನದೇ ಒಗ್ಗಟ್ಟಿನಿಂದ ಸಾಗಬೇಕು. ಇದು ಬಾಬಾ ಸಾಹೇಬರು, ಬಾಬೂಜಿ ಅವರು ಮತ್ತು ದೇಶದ ಸಂವಿಧಾನದ ಮೂಲ ಆಶಯವಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಕರೆ ನೀಡಿದ್ದಾರೆ.

ರವಿವಾರ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಡಾ.ಬಾಬು ಜಗಜೀವನ ರಾಂ ಅವರ 119ನೆ ಜನ್ಮದಿನಾಚರಣೆ ಸಮಾರಂಭ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ನಗಾರಿ ಬಾರಿಸುವ ಮೂಲಕ ಅವರು ಮಾತನಾಡಿದರು.

ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಶಯದ ಅಡಿಯಲ್ಲಿ ಸುಮಾರು 40 ವರ್ಷಕ್ಕೂ ಹೆಚ್ಚು ಕಾಲ ಸಾರ್ವಜನಿಕ ಜೀವನದಲ್ಲಿ ಇದ್ದ ಬಾಬೂಜಿ ಅವರು ಸ್ವತಃ ಅವಮಾನ ಮತ್ತು ಅಸಮಾನತೆಯನ್ನು ಅನುಭವಿಸಿದಂತಹ ವ್ಯಕ್ತಿ. ಅಧಿಕಾರ ಇದ್ದ ಎಲ್ಲ ಸಂದರ್ಭದಲ್ಲಿಯೂ ಜನರಿಗಾಗಿ ದುಡಿದ ಅವರು ದೇಶದ ಆಹಾರ ವ್ಯವಸ್ಥೆ ಮತ್ತು ರಕ್ಷಣಾ ವ್ಯವಸ್ಥೆಯನ್ನು ಸಮರ್ಥವಾಗಿ ನಿಭಾಯಿಸಿದಂತವರು ಎಂದು ಅವರು ಉಲ್ಲೇಖಿಸಿದರು.

ಇಂತಹ ವ್ಯಕ್ತಿಗಳನ್ನು ಈ ದಿನ ಜಾತೀಯ ಸಂಕೋಲೆಗಳಲ್ಲಿ ಬಂಧಿಸಿ, ಎಡ-ಬಲ ಎಂಬ ವರ್ಗೀಕರಣದಲ್ಲಿ ಸಿಲುಕಿಸುವುದು ಕೇವಲ ಬಾಬೂಜಿ ಅವರಿಗೆ ಮಾಡುವ ಅವಮಾನ ಅಲ್ಲ, ಅದು ಶೋಷಿತ ವರ್ಗಗಳ ಸಂಜೀವಿನಿ ಆದಂತಹ ಬಾಬಾ ಸಾಹೇಬರ ಸಂವಿಧಾನಕ್ಕೆ ಮಾಡುವ ಅವಮಾನ ಎಂದು ಮಹದೇವಪ್ಪ ಬೇಸರ ವ್ಯಕ್ತಪಡಿಸಿದರು.

ದೇಶದ ಯಾವುದೇ ಸಂವಿಧಾನಿಕ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿದ ಕೀರ್ತಿ ಬಾಬು ಜಗಜೀವನ್ ರಾಂ ಅವರದ್ದು. ಮುಖ್ಯವಾಗಿ ನಾಯಕತ್ವ ಇಲ್ಲದ ಸಮುದಾಯಗಳು ಅನಾಥವಾಗುತ್ತವೆ ಎಂದು ಬಾಬಾ ಸಾಹೇಬರು ಸದಾ ಹೇಳುತ್ತಿದ್ದರು. ಈ ಹಿನ್ನಲೆಯಲ್ಲಿ ದೇಶದ ಒಳಿತಿಗಾಗಿ ದುಡಿದ ದೊಡ್ಡ ನಾಯಕರನ್ನು ಯಾವುದೋ ರಾಜಕೀಯ ಕಾರಣಕ್ಕೆ ಸೀಮಿತಗೊಳಿಸಿ ಅವರ ಪ್ರಾಮುಖ್ಯತೆಯನ್ನು ಕಳೆದರೆ, ಪರಿಶಿಷ್ಟರನ್ನು ಒಡೆಯುವ ಒಳ ಮತ್ತು ಹೊರ ಶಕ್ತಿಗಳಿಗೆ ಬಹಳ ಸುಲಭವಾಗುತ್ತದೆ ಎಂದು ಅವರು ಹೇಳಿದರು.

ನೂರಾರು ವರ್ಷಗಳ ಬಳಿಕ ಶೋಷಿತರಿಗೆ ಸಂವಿಧಾನ ಒದಗಿಸಿಕೊಟ್ಟ, ದನಿ ಮತ್ತು ಅವಕಾಶವನ್ನು ಕಳೆದುಕೊಳ್ಳಬೇಕೋ ಅಥವಾ ಒಗ್ಗಟ್ಟಿನಿಂದ ಮುನ್ನಡೆಯಬೇಕೋ ಎಂಬುದನ್ನು ನಮ್ಮ ಪರಿಶಿಷ್ಟ ಸಮುದಾಯದವರು, ಸಂಘಟನೆಗಳು ಮತ್ತು ಎಲ್ಲ ಪ್ರಜ್ಞಾವಂತರೂ ಯೋಚಿಸಬೇಕು ಎಂದು ಡಾ.ಎಚ್.ಸಿ. ಮಹದೇವಪ್ಪ ನುಡಿದರು.

ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ, ಮಹಾನ್ ನಾಯಕ ಬಾಬು ಜಗಜೀವನ ರಾಂ ರವರ ಜೀವನ ನಮಗೆ ಮಾರ್ಗದರ್ಶನ ಅವರ ರಾಜಕೀಯ ಜೀವನದುದ್ದಕ್ಕೂ ಕೇಂದ್ರದಲ್ಲಿ ಸಚಿವರಾಗಿಯೇ ಕಾರ್ಯ ನಿರ್ವಹಿಸಿ ಸುದೀರ್ಘ ಸಂಸದರಾಗಿ ಸೇವೆ ಸಲ್ಲಿಸಿರುವ ಮಹಾನ್ ಚೇತನ. ಅವರ ಆದರ್ಶವನ್ನು ನಾವು ಪಾಲನೆ ಮಾಡಬೇಕಾಗಿದೆ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ಭೋದಿಸಲಾಯಿತು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹನೀಯರಿಗೆ ಬಾಬೂ ಜಗಜೀವನ ರಾಂ ಪ್ರಶಸ್ತಿಯನ್ನು ಪ್ರದಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸರಕಾರದ ಕಾರ್ಯದರ್ಶಿ ರಣದೀಪ್, ಸಮುದಾಯದ ಮುಖಂಡರು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಜಗಜೀವನರಾಂ ಪ್ರೇರಣೆ:

‘ಡಾ.ಬಾಬು ಜಗಜೀವನ್ ರಾಂ ಅವರ 119ನೆ ಜನ್ಮ ದಿನದ ಅಂಗವಾಗಿ ವಿಧಾನಸೌಧದ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ‘ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಂ ಸಮಾನತೆಗಾಗಿ ನಡೆಸಿದ ಹೋರಾಟ, ಶೋಷಿತ ಸಮಾಜಗಳಿಗೆ ನ್ಯಾಯ ಒದಗಿಸಲು ತೆಗೆದುಕೊಂಡ ನಿಲುವು ಎಲ್ಲರಿಗೂ ಪ್ರೇರಣೆ’ ಎಂದು ನುಡಿದರು.

ಪ್ರಶಸ್ತಿ ಪ್ರದಾನ:

ಕಾರ್ಯಕ್ರಮದಲ್ಲಿ 2026ನೆ ಸಾಲಿನ ಡಾ.ಬಾಬು ಜಗಜೀವನ್ ರಾಮ್ ಪ್ರಶಸ್ತಿಯನ್ನು ಸಾಧಕರಾದ ಚಂದ್ರಮ್ಮ, ಡಿಂಗ್ರಿ ನರಸಪ್ಪ, ಡಾ.ಸರಜೂ ಕಾಟ್ಕರ್, ನಾರಾಯಣ ಹಾಗೂ ನರಸೀಯಪ್ಪ ಅವರಿಗೆ ಪ್ರದಾನ ಮಾಡಿ ಗೌರವಿಸಲಾಯಿತು.

Tags

unityH.C. Mahadevappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X