Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ...

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸಿ : ಎಲ್.ಕೆ.ಅತೀಕ್

ವಾರ್ತಾಭಾರತಿವಾರ್ತಾಭಾರತಿ30 Aug 2025 7:56 PM IST
share
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸಿ : ಎಲ್.ಕೆ.ಅತೀಕ್
‘ಕರ್ನಾಟಕ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ-2: ಈಡೇರುವುದೇ ಸರ್ವ ಸಮುದಾಯಗಳ ನಿರೀಕ್ಷೆ?’ ವಿಚಾರ ಸಂಕಿರಣ

ಬೆಂಗಳೂರು, ಆ.30: ‘ರಾಜ್ಯ ಸರಕಾರವು ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ-2ರಲ್ಲಿ ಎಲ್ಲರೂ ಭಾಗವಹಿಸಬೇಕು. ಇಲ್ಲವಾದಲ್ಲಿ ಶೋಷಿತ ಸಮುದಾಯಗಳಿಗೆ ಅನ್ಯಾಯವಾಗುತ್ತದೆ’ ಎಂದು ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ಅವರು ತಿಳಿಸಿದ್ದಾರೆ.

ಶನಿವಾರ ಇಲ್ಲಿನ ಗಾಂಧಿಭವನದಲ್ಲಿ ‘ಜಾಗೃತ ಕರ್ನಾಟಕ’ವು ಆಯೋಜಿಸಿದ್ದ ‘ಕರ್ನಾಟಕ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2: ಈಡೇರುವುದೇ ಸರ್ವ ಸಮುದಾಯಗಳ ನಿರೀಕ್ಷೆ?’ ಎಂಬ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನೀತಿ ನಿರೂಪಣೆ, ಕಾರ್ಯಕ್ರಮಗಳನ್ನು ರೂಪಿಸಲು ಸಮೀಕ್ಷೆ ಬೇಕಾಗಿದೆ ಎಂದು ಪ್ರತಿಪಾದಿಸಿದರು.

ಮೊದಲನೆಯ ಜಾತಿಗಣತಿ ಸಮೀಕ್ಷೆ ಅನುಷ್ಟಾನ ಆಗಿಲ್ಲ ಎಂದು ಹತಾಶೆಯಿಂದ ಸಮೀಕ್ಷೆ-2ರಲ್ಲಿ ಭಾಗಿಯಾಗದಿದ್ದರೆ, ಶೋಷಿತ ಸಮುದಾಯಗಳಿಗೆ ಅನ್ಯಾಯವಾಗುತ್ತದೆ. ಹೀಗಾಗಿ ಎಲ್ಲ ಸಮುದಾಯಗಳು ಸಮೀಕ್ಷೆಯಲ್ಲಿ ಭಾಗವಹಿಸಬೇಕು. ಆಗ ಸಮುದಾಯಗಳ ಬಗ್ಗೆ ಒಂದು ದತ್ತಾಂಶ ಸಿಗುತ್ತದೆ. ರಚನಾತ್ಮಕ ಸಮಸ್ಯೆಗಳೂ ಬಗೆಹರಿಯುತ್ತವೆ. ಜಾತಿಗಣತಿ ಬಗ್ಗೆ ಏನೇ ಪರ-ವಿರೋಧ ಇದ್ದರೂ, ಜಾತಿ ಸಮೀಕ್ಷೆಯಲ್ಲಿ ನಾವೆಲ್ಲರೂ ಭಾಗವಹಿಸಬೇಕು ಎಂದು ಅವರು ಕರೆ ನೀಡಿದರು.

ಜಾತಿ ಸಮೀಕ್ಷೆಯು ಜನಗಣತಿಯ ಒಂದು ಭಾಗವಾಗಿತ್ತು. 1931ರ ತನಕ ದೇಶದಲ್ಲಿ ಜನಗಣತಿಯೊಂದಿಗೆ ಜಾತಿಗಣತಿ ನಡೆದಿದೆ. ಸ್ವತಂತ್ರ್ಯ ಬಂದ ಮೇಲೆ 1951ರಲ್ಲಿ ಗಣತಿಯಾಯಿತು. ಸ್ವತಂತ್ರೋತ್ತರ ಭಾರತದ ಮೊದಲ ಈ ಗಣತಿಯಲ್ಲಿ ಜಾತಿ ಸಮೀಕ್ಷೆ ಅಗತ್ಯವಿಲ್ಲ ಎಂದು ತೀರ್ಮಾನಿಸಲಾಯಿತು. ಇದಾದ ಮೇಲೆ 1953ರಲ್ಲಿ ಕಾಕಾ ಕಾಲೇಲ್ಕರ್ ಸಮಿತಿಯನ್ನು ನೆಹರು ಅವರು ನೇಮಕ ಮಾಡಿದರು. ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ನೀಡಿ ಎಂದು ಸಮಿತಿಯು ವರದಿಯನ್ನು ನೀಡಿತು. ಆದರೆ ಅದು ಒಪ್ಪಿಗೆಯಾಗಲಿಲ್ಲ ಎಂದು ಅವರು ತಿಳಿಸಿದರು.

2011ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ, ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಯಿತು. ಆದರೆ ಅದರ ವರದಿಯು ಇಂದಿಗೂ ಬಹಿರಂಗವಾಗಿಲ್ಲ. ಜಾತಿ ಆಧಾರದಲ್ಲಿ ಹಿಂದುಳಿದಿರುವಿಕೆಯನ್ನು ನಿರ್ಧರಿಸಲು ಆಗುವುದಿಲ್ಲ, ಅದಕ್ಕೆ ಆರ್ಥಿಕ ಅಂಶಗಳನ್ನು ಸೇರ್ಪಡೆ ಮಾಡಬೇಕು ಎಂದು ಕಾಲೇಲ್ಕರ್ ವರದಿಯನ್ನು ಒಪ್ಪಲಿಲ್ಲ. 2011ರಲ್ಲಿ ಕೇಂದ್ರ ಗಣತಿಯು ಸಮರ್ಪಕ ದತ್ತಾಂಶಗಳನ್ನು ಒಳಗೊಂಡಿಲ್ಲ ಎಂದು ನೆಪ ಇಟ್ಟುಕೊಂಡು ಒಪ್ಪಿಗೆ ಕೊಟ್ಟಿಲ್ಲ. ಆದರೆ ಭಾರತದಲ್ಲಿ ಮೊದಲ ಬಾರಿಗೆ ಮನಮೋಹಾನ್ ಸಿಂಗ್ ಮುಸ್ಲಿಮರ ಸ್ಥಿತಿ-ಗತಿಗಳನ್ನು ಸಮೀಕ್ಷೆ ಮಾಡಲು ಸಾಚಾರ ಸಮಿತಿಯನ್ನು ನೇಮಿಸಿತು. ಇದಕ್ಕೆ ವಿರೋಧಗಳು ಬಂದವು. ಆದರೂ ವರದಿಯು ವೈಜ್ಞಾನಿಕವಾಗಿದೆ ಎಂದು ಅತೀಕ್ ವಿವರಿಸಿದರು.

ಅಂಕಣಕಾರ ಕೆ.ಎನ್.ಲಿಂಗಪ್ಪ ಮಾತನಾಡಿ, ಸರಕಾರವು ಮೊದಲನೆ ಜಾತಿಗಣತಿಯನ್ನು ತಿರಸ್ಕಾರವೂ ಮಾಡಿಲ್ಲ, ಒಪ್ಪಿಗೆಯನ್ನೂ ನೀಡಲ್ಲ. ಆದರೂ ಮತ್ತೊಂದು ಸಮೀಕ್ಷೆಯನ್ನು ಹೇಗೆ ನಡೆಸುತ್ತಿದೆ ಎಂದು ಪ್ರಶ್ನಿಸಿದರು.

ಸೆಪ್ಟೆಂಬರ್‌ನಲ್ಲಿ ನಡೆಯುವ ಎರಡನೆಯ ಜಾತಿಗಣತಿಯ ಬಗ್ಗೆ ಆಯೋಗವು ಇದುವರೆಗೂ ಒಂದು ಸುದ್ದಿಗೋಷ್ಟಿಯನ್ನು ಮಾಡಿಲ್ಲ. ಸಾರ್ವಜನಿಕರಿಗೆ ಮಾಹಿತಿಯನ್ನೂ ನೀಡಿಲ್ಲ. ಮುಖ್ಯಮಂತ್ರಿಗಳು ಮಾತ್ರ ಗಣತಿ ಬಗ್ಗೆ ಹೇಳಿದ್ದಾರೆ. ಅದರೆ ಆಯೋಗದ ಅಧ್ಯಕ್ಷರೂ ಜನರಿಗೆ ಹೇಳಬೇಕಲ್ಲವೇ? ಆದರೆ ಅಧ್ಯಕ್ಷರು ಏನೂ ಮಾಡುತ್ತಿಲ್ಲ ಎಂದು ಅವರು ಟೀಕಿಸಿದರು.

ನಿವೃತ್ತ ನ್ಯಾಯಾಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಪರಿಶಿಷ್ಟ ಸಮುದಾಯಗಳಿಗೆ ಒಳ ಮೀಸಲಾತಿಯನ್ನು ಕಲ್ಪಿಸಲು ಎರಡು ತಿಂಗಳ ಕಾಲ ಸಮೀಕ್ಷೆಯನ್ನು ನಡೆಸಿದ್ದಾರೆ. ಸಮೀಕ್ಷೆಯ ಗುರಿ 1.16 ಕೋಟಿ ಜನಸಂಖ್ಯೆ ಇತ್ತು. ಆದರೆ ಜಾತಿ ಸಮೀಕ್ಷೆಯು ರಾಜ್ಯ ಎಲ್ಲ ಜನರ ಅಂದರೆ 7 ಕೋಟಿ ಜನರನ್ನು ಹೊಂದಿದೆ. ಇದಕ್ಕೆ ಎಷ್ಟು ಸಮಯಬೇಕು ಎಂದು ಸರಕಾರ ಅಂದಾಜು ಮಾಡಬೇಕು ಎಂದು ಅವರು ವಿವರಿಸಿದರು.

ಇದೇ ವೇಳೆ ಅಜೀಂ ಪ್ರೇಮ್‍ಜಿ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕ ಎ.ನಾರಾಯಣ, ನಿವೃತ್ತ ಅಧಿಕಾರಿ ಸಣ್ಣಭತ್ತಪ್ಪ, ಶೋಷಿತ ವರ್ಗಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X