Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಡಿಕೇರಿ ದಸರಾ | ಡಿಜೆ ಬಳಕೆಗೆ ಅನುಮತಿ...

ಮಡಿಕೇರಿ ದಸರಾ | ಡಿಜೆ ಬಳಕೆಗೆ ಅನುಮತಿ ಕುರಿತು ಅ.15ರೊಳಗೆ ಕಾನೂನು ಪ್ರಕಾರ ನಿರ್ಧಾರ ಕೈಗೊಳ್ಳಲು ಡಿಸಿಗೆ ಹೈಕೋರ್ಟ್ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ9 Oct 2026 9:35 PM IST
share
ಮಡಿಕೇರಿ ದಸರಾ | ಡಿಜೆ ಬಳಕೆಗೆ ಅನುಮತಿ ಕುರಿತು ಅ.15ರೊಳಗೆ ಕಾನೂನು ಪ್ರಕಾರ ನಿರ್ಧಾರ ಕೈಗೊಳ್ಳಲು ಡಿಸಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಮಡಿಕೇರಿ ದಸರಾ ಆಚರಣೆಯ ಹಿನ್ನೆಲೆಯಲ್ಲಿ ಸ್ತಬ್ಧಚಿತ್ರಗಳ ಮೆರೆವಣಿಗೆ ವೇಳೆ ಡಿಜೆ ಧ್ವನಿವರ್ಧಕ ಬಳಕೆಗೆ ಅನುಮತಿ ಕೋರಿ ದಸರಾ ದಶಮಂಟಪ ಸಮಿತಿ ಸಲ್ಲಿಸಿರುವ ಮನವಿ ಕುರಿತು ಅ.15ರ ಒಳಗೆ ಕಾನೂನು ಪ್ರಕಾರ ನಿರ್ಧಾರ ಕೈಗೊಳ್ಳುವಂತೆ ಕೊಡಗು ಜಿಲ್ಲಾಧಿಕಾರಿಗೆ ಹೈಕೋರ್ಟ್‌ ನಿರ್ದೇಶಿಸಿದೆ.

ದಸರಾ ದಶಮಂಟಪ ಸಮಿತಿ ಅಧ್ಯಕ್ಷ ಪಂಡೀರಾ ಟಿ. ಪೂಣಚ್ಚ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ಏಕಸದಸ್ಯ ನ್ಯಾಯಪೀಠ, ಕೊಡಗು ಜಿಲ್ಲಾಧಿಕಾರಿಗೆ ಈ ನಿರ್ದೇಶನ ನೀಡಿ ಅರ್ಜಿ ಇತ್ಯರ್ಥಪಡಿಸಿತು.

ಇದೇ ತಿಂಗಳ 21 ಹಾಗೂ 22ರಂದು ಮಡಿಕೇರಿ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗುವ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಡೆಸುವ ಸ್ತಬ್ಧಚಿತ್ರ ಮೆರವಣಿಗೆ ವೇಳೆ ಡಿಜಿ ಧ್ವನಿವರ್ಧಕ ಬಳಸಲು ಅನುಮತಿ ಕೋರಿ ಅರ್ಜಿದಾರರು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಮನವಿ ಪತ್ರ ಪರಿಗಣಿಸದಂತೆ ಕೆಲವರು ಈ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಅದರಂತೆ, ಅರ್ಜಿಗೆ ಆಕ್ಷೇಪಣೆ ವ್ಯಕ್ತಪಡಿಸಿರುವವರು ತಮ್ಮ ಅಹವಾಲನ್ನು ಅ.12ರ ಒಳಗೆ ಜಿಲ್ಲಾಧಿಕಾರಿಗೆ ಸಲ್ಲಿಸಬೇಕು. ಆ ಆಕ್ಷೇಪಣೆಯೊಂದಿಗೆ ಅರ್ಜಿದಾರರ ಮನವಿ ಪತ್ರವನ್ನು ಪರಿಗಣಿಸಿ ಅ.15ರೊಳಗೆ ಕಾನೂನು ಪ್ರಕಾರ ನಿರ್ಧಾರ ಕೈಗೊಂಡು ಅರ್ಜಿದಾರರಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಅರ್ಜಿದಾರರ ಮನವಿ :

ಮಡಿಕೇರಿ ಪಟ್ಟಣದಲ್ಲಿ 2026ರ ಅ.21 ಹಾಗೂ 22ರಂದು ದಸರಾ ಮಹೋತ್ಸವ ಆಚರಿಸಲಾಗುತ್ತಿದೆ. ಮಡಿಕೇರಿ ಪಟ್ಟಣದಲ್ಲಿ ದಸರಾ ಮಹೋತ್ಸವ ನಿರ್ವಹಣೆಗಾಗಿ ಕರವಲೆ ಭಗವತಿ ಮಹಿಷ ಮರ್ದಿನಿ ಹಾಗೂ ಕುಂದೂರು ಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಸ್ಥಾನ ಸೇರಿದಂತೆ ಮಡಿಕೇರಿಯ 10 ದೇವಸ್ಥಾನಗಳ ಸಮಿತಿಯನ್ನು ದಸರಾ ದಶಮಂಟಪ ಸಮಿತಿ ಅಡಿಯಲ್ಲಿ ಒಕ್ಕೂಟ ರಚಿಸಿಕೊಳ್ಳಲಾಗಿದೆ. ಪ್ರತಿಯೊಂದು ದೇವಸ್ಥಾನದ ಪರಿಕಲ್ಪನೆಯಲ್ಲಿ ಸ್ತಬ್ಧಚಿತ್ರವನ್ನು ಮೆರವಣಿಗೆ ಮಾಡಲಾಗುತ್ತದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿತ್ತು.

ಪ್ರತಿ ದೇವಸ್ಥಾನದ ಸ್ತಬ್ಧಚಿತ್ರದ ಮೆರವಣಿಗೆಯು ಆಯಾ ದೇವಸ್ಥಾನದ ಆವರಣದಿಂದ ಆರಂಭವಾಗಿ ರಾತ್ರಿ 10ಕ್ಕೆ ತಿಮ್ಮಯ್ಯ ವೃತ್ತದ ಬಳಿ ಸೇರುತ್ತವೆ. ಅಲ್ಲಿಂದ ಬೆಳಗ್ಗೆ 6 ಗಂಟೆಯವರೆಗೆ ಸ್ತಬ್ಧಚಿತ್ರ ಮೆರೆವಣಿಗೆಯು ರಾಜಬೀದಿ ಮಾರ್ಗವಾಗಿ ಬನ್ನಿಮಂಟಪವರೆಗೆ ದೀಪಾಲಂಕಾರ ಮತ್ತು ಡಿಜೆ ಧ್ವನಿವರ್ಧಕಗಳೊಂದಿಗೆ ಸಾಗುತ್ತದೆ. ಇದು ಮಡಿಕೇರಿ ದಸರಾ ಸಮಾರಂಭದ ಮುಖ್ಯ ಆಕರ್ಷಣೆಯಾಗಿದೆ. ಸ್ತಬ್ಧಚಿತ್ರ ಮೆರವಣಿಗೆ ಕಳೆದ 40 ವರ್ಷಗಳಿಂದ ಮಡಿಕೇರಿ ಪಟ್ಟಣದಲ್ಲಿ ನಡೆಸಲಾಗುತ್ತಿದೆ. 2026ರ ಅಕ್ಟೋಬರ್ 21 ಮತ್ತು 22ರಂದು ಡಿಜೆ ಧನ್ವಿವರ್ಧಕ ಬಳಕೆಗೆ ಅನುಮತಿ ಕೋರಿ ಮನವಿ ಪತ್ರ ಸಲ್ಲಿಸಲಾಗಿದೆ. ಆದರೆ, 15 ದಿನ ಕಳೆದರೂ ಸರ್ಕಾರದಿಂದ ಈವರೆಗೆ ಅನುಮತಿ ದೊರೆತಿಲ್ಲ. ಆದ್ದರಿಂದ, ಮನವಿ ಪರಿಗಣಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿತ್ತು.

Tags

DJHigh CourtMadikeri Dasara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X