Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೃಹತ್ ಭೂ ಹಗರಣ: ಆರೋಪಿಗಳಿಗೆ ಲೋಕಾಯುಕ್ತ...

ಬೃಹತ್ ಭೂ ಹಗರಣ: ಆರೋಪಿಗಳಿಗೆ ಲೋಕಾಯುಕ್ತ ಸಮನ್ಸ್

ವಾರ್ತಾಭಾರತಿವಾರ್ತಾಭಾರತಿ20 Aug 2026 11:08 PM IST
share
ಬೃಹತ್ ಭೂ ಹಗರಣ: ಆರೋಪಿಗಳಿಗೆ ಲೋಕಾಯುಕ್ತ ಸಮನ್ಸ್

ಬೆಂಗಳೂರು : ಸರಕಾರಿ ಸಾಫ್ಟ್‌ವೇರ್ ಹಾಗೂ ಡಿಜಿಟಲ್ ಸಹಿ ದುರ್ಬಳಕೆ ಮಾಡಿಕೊಂಡು 500 ಕೋಟಿ ರೂ.ಮೌಲ್ಯದ 62.20 ಎಕರೆ ಖಾಸಗಿ ಜಮೀನನ್ನು ಅಕ್ರಮವಾಗಿ ಖಾತೆ ವರ್ಗಾವಣೆ ಮಾಡಿರುವ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯು ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿದೆ.

ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡು ಶೋಧನಾ ವಾರಂಟ್ ಹೊರಡಿಸಿದ್ದರು. ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್‌ಗಳಾದ ಉಮಾ ಮಹೇಶ್ ಮತ್ತು ಹಾಲಪ್ಪವೈ.ಬಾಲದಂಡಿ ಅವರ ತಂಡವು ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ ದೇವನಹಳ್ಳಿ ತಹಶೀಲ್ದಾರ್ ಕಚೇರಿಗಳ ಮೇಲೆ ದಿಢೀರ್ ದಾಳಿ ನಡೆಸಿ ದಾಖಲೆ ಪರಿಶೀಲಿಸಿ ಸತ್ಯಾಂಶಗಳನ್ನು ಹೊರಗೆಳೆದಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿಗಳಾದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಉಪವಿಭಾಗಾಧಿಕಾರಿಯಾಗಿದ್ದ ದುರ್ಗಾಶ್ರೀ ಹಾಗೂ ಪ್ರಥಮ ದರ್ಜೆ ಸಹಾಯಕ ಮನೋಜ್ ಎಸ್. ಎಂಬವರು ಇ-ಆಫೀಸ್‌ನಲ್ಲಿ ಜನರೇಟ್ ಆಗದ ನಕಲಿ ಆದೇಶಗಳನ್ನು ಬೇರೆಡೆ ಸೃಷ್ಟಿಸಿ, ದೇವನಹಳ್ಳಿ ತಹಶೀಲ್ದಾರ್ ಅವರಿಗೆ ‘ಭೂಮಿ’ ತಂತ್ರಾಂಶದಲ್ಲಿ ಸೇರ್ಪಡಿಸಲು ಕಳುಹಿಸಿದ್ದರು. ನಕಲಿ ಆದೇಶಗಳಲ್ಲಿ ಉಲ್ಲೇಖಿಸಲಾಗಿದ್ದ ಕರ್ನಾಟಕ ಉಚ್ಚ ನ್ಯಾಯಾಲಯದ ರಿಟ್ ಅರ್ಜಿ ಹಾಗೂ ಕೆಎಟಿ ಪ್ರಕರಣ ಸಂಖ್ಯೆಗಳು ಆನ್‌ಲೈನ್‌ನಲ್ಲಿ ಪರಿಶೀಲಿಸಿದಾಗ, ಅವು ಈ ಜಮೀನುಗಳಿಗೆ ಸಂಬಂಧಿಸಿಲ್ಲದಿರುವುದು ದೃಢಪಟ್ಟಿದೆ.

ವಿಷಯ ನಿರ್ವಾಹಕ ಮನೋಜ್ ಎಸ್.ಅವರ ಲಾಗಿನ್ ಮೂಲಕ ನಕಲಿ ದಾಖಲೆಗಳನ್ನು ಆರ್‌ಟಿಸಿ ಮ್ಯಾನೇಜ್‌ಮೆಂಟ್ ಟೂಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ನಂತರ ಎಸಿ ದುರ್ಗಾಶ್ರೀ ಅವರು ತಮ್ಮ ಬಯೋಮೆಟ್ರಿಕ್ ಥಂಬ್ ಹಾಗೂ ಡಿಜಿಟಲ್ ಸಿಗ್ನೇಚರ್ ಬಳಸಿ ಅಕ್ರಮವಾಗಿ ಅನುಮೋದನೆ ನೀಡಿದ್ದಾರೆ.

ಸೆ.22ಕ್ಕೆ ಖುದ್ದು ಹಾಜರಾತಿಗೆ ಆದೇಶ: ಸಾರ್ವಜನಿಕ ದಾಖಲೆಗಳನ್ನು ತಿರುಚಿ, ಸರಕಾರಿ ವ್ಯವಸ್ಥೆಗೆ ಧಕ್ಕೆ ತಂದು ನೂರಾರು ಕೋಟಿ ಮೌಲ್ಯದ ಆಸ್ತಿ ಅಕ್ರಮ ವರ್ಗಾವಣೆ ಎಸಗಿರುವ ಹಿನ್ನೆಲೆಯಲ್ಲಿ, ಆರೋಪಿಗಳಾದ ದುರ್ಗಾಶ್ರೀ ಹಾಗೂ ಮನೋಜ್ ಎಸ್. ಸೆ.22ರಂದು ಲೋಕಾಯುಕ್ತ ಪೀಠದ ಮುಂದೆ ಖುದ್ದಾಗಿ ಹಾಜರಾಗಿ ತಮ್ಮ ಆಕ್ಷೇಪ ಸಲ್ಲಿಸಬೇಕು ಎಂದು ಉಪಲೋಕಾಯುಕ್ತ ಬಿ.ವೀರಪ್ಪಆದೇಶಿಸಿದ್ದಾರೆ.

Tags

Lokayuktaland scam
share
ವಾರ್ತಾಭಾರತಿ
ವಾರ್ತಾಭಾರತಿ
Next Story
X