Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮುಟ್ಟಿನ ರಜೆ: ರಾಜ್ಯ ಸರಕಾರದ...

ಮುಟ್ಟಿನ ರಜೆ: ರಾಜ್ಯ ಸರಕಾರದ ಅಧಿಸೂಚನೆಗೆ ವಿಧಿಸಿದ್ದ ಮಧ್ಯಂತರ ತಡೆಯಾಜ್ಞೆ ಹಿಂಪಡೆದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ9 Dec 2025 3:04 PM IST
share
Karnataka High Court
ರಾಜ್ಯ ಸರಕಾರದ ಮನವಿ ಪರಿಗಣಿಸಿ ಕ್ರಮ, ಡಿ.10ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ಸೌಲಭ್ಯ ಒದಗಿಸುವ ಸಂಬಂಧ ರಾಜ್ಯ ಸರಕಾರದ ಹೊರಡಿಸಿದ್ದ ಅಧಿಸೂಚನೆಗೆ ಇಂದು ಬೆಳಗ್ಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ಹಿಂಪಡೆದಿದೆ.

ತಡೆಯಾಜ್ಞೆ ಹಿಂಪಡೆಯುವಂತೆ ರಾಜ್ಯ ಸರಕಾರ ಮಾಡಿದ ಮನವಿಯನ್ನು ಪರಿಗಣಿಸಿ ಸರಕಾರ ಆದೇಶವನ್ನು ಮಾರ್ಪಾಡು ಮಾಡಿದೆ.

ತಡೆಯಾಜ್ಞೆ ನೀಡಿದ ಕೆಲವೇ ಗಂಟೆಗಳ ಬಳಿಕ ಹೈಕೋರ್ಟ್ ತನ್ನ ಆದೇಶವನ್ನು ಹಿಂಪಡೆದಿದ್ದು, ಬುಧವಾರ ವಿಚಾರಣೆ ಮುಂದೂಡಿದೆ.

ಇದಕ್ಕೂ ಮೊದಲು ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವ ಸಂಬಂಧ ರಾಜ್ಯ ಸರಕಾರದ ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಬೆಂಗಳೂರು ಹೋಟೆಲ್ ಗಳ ಸಂಘ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿಯವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ಬೆಳಗ್ಗೆ ವಿಚಾರಣೆ ನಡೆಸಿತು.

ಭೋಜನ ವಿರಾಮಕ್ಕೂ ಮುನ್ನ ನ್ಯಾಯಪೀಠದ ಮುಂದೆ ಹಾಜರಾದ ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಅವರು, ಋತುಚಕ್ರದ ರಜೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೀತಿ ರೂಪಿಸಬೇಕು ಎಂದು ಸುಪ್ರೀಂಕೋರ್ಟ್‌ ಪ್ರಕರಣವೊಂದರಲ್ಲಿ ಆದೇಶ ಮಾಡಿದೆ. ಅದೇ ರೀತಿ ಕಾನೂನು ಆಯೋಗವೂ ಈ ಸಂಬಂಧ ಶಿಫಾರಸು ಮಾಡಿದೆ. ಇದರ ಭಾಗವಾಗಿ ರಾಜ್ಯ ಸರ್ಕಾರಕ್ಕೆ ಸಂವಿಧಾನದ ಪರಿಚ್ಛೇದ 142ರ ಅಡಿ ದೊರೆತಿರುವ ಅಧಿಕಾರ ಬಳಸಿ ಕ್ರಮಕೈಗೊಂಡಿದೆ. ಸರ್ಕಾರದ ಅಧಿಸೂಚನೆಯನ್ನು ಕಾನೂನುಬದ್ಧವಾಗಿ ಹೊರಡಿಸಲಾಗಿದೆ. ಸರ್ಕಾರದ ವಾದ ಆಲಿಸಿದೇ ಅಧಿಸೂಚನೆಗೆ ತಡೆ ನೀಡಬಾರದು ಎಂದು ಮನವಿ ಮಾಡಿದರು.

ಇದನ್ನು ಆಲಿಸಿದ ನ್ಯಾಯಪೀಠ, ಸರ್ಕಾರದ ಅಧಿಸೂಚನೆಗೆ ತಡೆಯಾಜ್ಞೆ ನೀಡಿ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಿತಲ್ಲದೆ, ಬುಧವಾರ ಉಭಯ ಪಕ್ಷಕಾರರ ವಾದ ಆಲಿಸಿ, ಮಧ್ಯಂತರ ತಡೆ ನೀಡುವ ಕುರಿತು ನಿರ್ಧರಿಸಲಾಗುವುದು ಎಂದು ತಿಳಿಸಿ, ಅರ್ಜಿ ವಿಚಾರಣೆ ಮುಂದೂಡಿತು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X