Bengaluru | ತಾಂತ್ರಿಕ ದೋಷದಿಂದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ರೈಲು ಸೇವೆ ಸ್ಥಗಿತ

Screengrab:X/@ChristinMP_
ಬೆಂಗಳೂರು: ಮಂಗಳವಾರ ಸಂಜೆ ವೇಳೆ ನೇರಳೆ ಮಾರ್ಗದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಸಂಚರಿಸುತ್ತಿದ್ದ ಒಂದು ರೈಲಿನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ರೈಲು ಸೇವೆಯನ್ನು ಸ್ಥಗಿತ ಮಾಡಲಾಗಿದೆ.
ಪ್ರಸ್ತುತ ನೇರಳೆ ಮಾರ್ಗದಲ್ಲಿ ಮಾಗಡಿ ರಸ್ತೆ ಮತ್ತು ಚಲ್ಲಘಟ್ಟ ನಡುವೆ ಹಾಗೂ ಎಂ.ಜಿ ರಸ್ತೆ ಮತ್ತು ವೈಟ್ಫೀಲ್ಡ್(ಕಾಡುಗೋಡಿ) ರೈಲುಗಳು ಸಂಚರಿಸುತ್ತಿವೆ. ಕಾರ್ಯಾಚರಣೆ ಹಾಗೂ ನಿರ್ವಹಣಾ ತಂಡಗಳು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿನ ದೋಷವನ್ನು ಸರಿಪಡಿಸುವ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಾಮಾನ್ಯ ಸೇವೆಯನ್ನು ಶೀಘ್ರದಲ್ಲೇ ಪುನಃಸ್ಥಾಪಿಸಲು ಪ್ರಯತ್ನಿಸುತ್ತಿದ್ದು, ಪ್ರಯಾಣಿಕರು ಸಹಕರಿಸಿ ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳುವಂತೆ ವಿನಂತಿಸಲಾಗಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
Bengaluru Metro chaos: A senior BMRCL official told @moneycontrolcom that Current Collector Device (CCD), a critical equipment on a metro train that draws electricity from the electrified third rail to power the train, was damaged at Cubbon Park Metro station. https://t.co/7hZkUfAqhm pic.twitter.com/zdQzBO6BSw
— ChristinMathewPhilip (@ChristinMP_) June 23, 2026






