Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸ್ಲೋವಾಕಿಯಾದಲ್ಲಿರುವ ಕರ್ನಾಟಕದ...

ಸ್ಲೋವಾಕಿಯಾದಲ್ಲಿರುವ ಕರ್ನಾಟಕದ ಉದ್ಯೋಗಿಗಳೊಂದಿಗೆ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಸಂವಾದ

ವಾರ್ತಾಭಾರತಿವಾರ್ತಾಭಾರತಿ3 Dec 2025 1:53 PM IST
share
ಸ್ಲೋವಾಕಿಯಾದಲ್ಲಿರುವ ಕರ್ನಾಟಕದ ಉದ್ಯೋಗಿಗಳೊಂದಿಗೆ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಸಂವಾದ
ಸಚಿವರ ನಿಯೋಗದಲ್ಲಿ ಸಚಿವ ಡಾ. ಸುಧಾಕರ್‌, ಹಿರಿಯ ಅಧಿಕಾರಿಗಳು

ಬ್ರಾಟಿಸ್ಲಾವಾ (ಸ್ಲೋವಾಕಿಯಾ), ಡಿ. 3: ಕರ್ನಾಟಕದಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ತರಬೇತಿ ಪಡೆದು ಅತ್ಯುನ್ನತ ಮಟ್ಟದ ಕೌಶಲ್ಯ ತರಬೇತಿ ಪಡೆದುಕೊಳ್ಳುತ್ತಿರುವ ಉದ್ಯೋಗಿಗಳಿಗೆ ಜಾಗತಿಕ ಮಟ್ಟದಲ್ಲಿ ಹೆಚ್ಚಿನ ಬೇಡಿಕೆ ಬರುತ್ತಿರುವುದು ನಿಜಕ್ಕೂ ಖುಷಿಯ ವಿಚಾರ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ.

ಬ್ರಾಸಿಸ್ಲಾವಾದಲ್ಲಿರುವ ಸಿಟ್ರೊಯೆನ್‌ C3, C3 ಏರ್‌ಕ್ರಾಸ್ ಮತ್ತು ಒಪೆಲ್ ಫ್ರಾಂಟೆರಾ ಮಾದರಿಗಳ ವಾಹನ ತಯಾರಕ ಸಂಸ್ಥೆಯಾದ ಸ್ಟೆಲ್ಲಾಂಟಿಸ್ ಈಗಾಗಲೇ ಆಟೊಮೊಬೈಲ್‌ ವಿದ್ಯುತ್ ಕೌಶಲ್ಯ ತರಬೇತಿ ಹೊಂದಿದವರನ್ನು ಕಳುಹಿಸಿಕೊಡಬೇಕೆಂದು ಮನವಿ ಮಾಡಿದೆ.

ಬ್ರಾಟಿಸ್ಲಾವಾ ಬಳಿಯ ತ್ರ್ವಾನಾ ಘಟಕದಲ್ಲಿ ಈಗಾಗಲೇ ಕರ್ನಾಟಕದ ಸುಮಾರು 100 ಅಸೆಂಬ್ಲಿ-ಲೈನ್ ಆಪರೇಟರ್‌ಗಳು ಕಾರ್ಯ ನಿರ್ವಹಿಸುತ್ತಿದ್ದಾರೆ.

2026 ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಉದ್ಯೋಗ ಮೇಳಕ್ಕೆ ಪೂರ್ವಭಾವಿಯಾಗಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್, ಮತ್ತು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಯುರೋಪ್‌ ಖಂಡದ ಪ್ರವಾಸ ಕೈಗೊಂಡಿದ್ದು, ರೋಡ್ ಶೋ ನಡೆಸಿ, ವಿವಿಧ ನಗರಗಳಿಗೂ ಭೇಟಿ ನೀಡುತ್ತಿದ್ದಾರೆ.

ಮಂಗಳವಾರ ಸಂಜೆ ಹಾಗು ಬುಧವಾರ ಸ್ಟೆಲ್ಲಾಂಟಿಸ್‌ಗೆ ಭೇಟಿ ನೀಡಿದ ಉಭಯ ಸಚಿವರು, ಕರ್ನಾಟಕದ ಉದ್ಯೋಗಿಗಗಳಿಗೆ ಸ್ಥಾವರದಲ್ಲಿ ನೀಡುತ್ತಿರುವ ಸೌಲಭ್ಯಗಳು ಮತ್ತು ಇತರೆ ವ್ಯವಸ್ಥೆಯ ಕುರಿತು ಪರಿಶೀಲಿಸಿದರು.

ಅಸೆಂಬ್ಲಿ ಲೈನ್‌ ಆಪರೇಟರ್‌ಗಳಿಗೆ ಅವಕಾಶ

ಪ್ರಸ್ತುತ, ಕಂಪನಿಯು ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ (ಕೆವಿಟಿಎಸ್‌ಡಿಸಿ)ದ ವತಿಯಿಂದ ತರಬೇತಿ ಪಡೆದಿರುವ ಕೌಶಲ್ಯಪೂರ್ಣ 100 ಅಸೆಂಬ್ಲಿ-ಲೈನ್ ಆಪರೇಟರ್‌ಗಳನ್ನು ನೇಮಿಸಿಕೊಂಡಿದೆ. 50 ಕ್ಕೂ ಹೆಚ್ಚು ಹೆವಿ ವೆಹಿಕಲ್ ಡ್ರೈವರ್‌ಗಳನ್ನೂ ನೇಮಿಸಲಾಗಿದೆ. ಉದ್ಯೋಗಿಗಳ ವಲಸೆ ಮತ್ತು ನಿಯೋಜನೆ ಹಾಗೂ ಇತರೆ ಸೌಲಭ್ಯವನ್ನು ಕರ್ನಾಟಕ ಅಂತರರಾಷ್ಟ್ರೀಯ ವಲಸೆ ಕೇಂದ್ರ (IMC-K) ಸುಗಮಗೊಳಿಸಿದೆ.

ಉದ್ಯೋಗಿಗಳಿಂದ ಸರ್ಕಾರಕ್ಕೆ ಧನ್ಯವಾದ

ತ್ರ್ವಾನಾ ಸ್ಥಾವರದಲ್ಲಿ ಪ್ರತಿದಿನ 4,000 ಕ್ಕೂ ಹೆಚ್ಚು ಕಾರ್ಮಿಕರು ಸುಮಾರು 1,300 ವಾಹನಗಳನ್ನು ತಯಾರಿಸುತ್ತಿದ್ದಾರೆ.

ಈಗ ಸ್ಲೋವಾಕಿಯಾದಲ್ಲಿ ಉದ್ಯೋಗ ಪಡೆದಿರುವ ಕಲಬುರಗಿ ಜಿಲ್ಲೆಯ ಸೇಡಂನ ಸುನಿಲ್ ಕುಮಾರ್, ಕೆವಿಟಿಎಸ್‌ಡಿಸಿಗೆ ಕೃತಜ್ಞತೆ ಸಲ್ಲಿಸಿ, ಈ ಉಪಕ್ರಮವು ಸ್ಥಿರ ಆದಾಯ ಮತ್ತು ಉತ್ತಮ ಕೆಲಸ ಒದಗಿಸಿದೆ ಎಂದು ಹೇಳಿದರು.

ಧಾರವಾಡ ಜಿಲ್ಲೆಯ ಕಲಘಟಗಿಯ ರೋಹನ್ ಲಗಾಲಿ ಕೂಡ ಸರ್ಕಾರಕ್ಕೆ ಹಾಗೂ ಸಚಿವರಿಗೂ ಧನ್ಯವಾದ ಅರ್ಪಿಸಿದರು.

ನಮ್ಮ ಹುಡುಗರು ಈಗ ಜಾಗತಿಕ ಮಟ್ಟಕ್ಕೇರಿದ್ದಾರೆ

ಈ ವೇಳೆ ಮಾತನಾಡಿದ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್, ನಮ್ಮ ಕರ್ನಾಟಕದ ಯುವ ಸಮೂಹವನ್ನು ಜಾಗತಿಕ ಮಟ್ಟದಲ್ಲಿ ಉದ್ಯೋಗ ಗಿಟ್ಟಿಸುವ ಅವಕಾಶ ಹೆಚ್ಚಿಸಲು ತರಬೇತಿ ನೀಡಲಾಗುತ್ತಿದೆ. ಇಂಗ್ಲಿಷ್, ಜರ್ಮನ್ ಮತ್ತು ಇಟಾಲಿಯನ್ ಭಾಷಾ ತರಬೇತಿ ನೀಡಲಾಗುತ್ತಿದೆ ಇದರಿಂದ ಎಲ್ಲರಿಗೂ ಅನುಕೂಲವಾಗಿದೆ. ನಮ್ಮ ರಾಜ್ಯದ ಯುವ ಸಮೂಹ ಈಗ ಜಾಗತಿಕ ಮಟ್ಟಕ್ಕೇರುತ್ತಿದೆ ಎಂದರು.

ಸ್ಟೆಲ್ಲಾಂಟಿಸ್ ನೇಮಕಾತಿ ಮುಖ್ಯಸ್ಥರಾದ ಕತ್ರಿನಾ ಫೆಲ್ಕೋವಾ ಅವರು, ವೀಸಾ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಸ್ಲೋವಾಕಿಯಾದಲ್ಲಿ ಭಾರತೀಯ ರಾಯಭಾರಿ ಅಪೂರ್ವ ಶ್ರೀವಾಸ್ತವ ಅವರನ್ನು ಒತ್ತಾಯಿಸಿದರು.

ಕರ್ನಾಟಕದಿಂದ ವಾರ್ಷಿಕವಾಗಿ ಒಂದು ಲಕ್ಷಕ್ಕೂ ಹೆಚ್ಚು ಎಂಜಿನಿಯರಿಂಗ್ ಪದವೀಧರರು ಹೊರಬರುತ್ತಿದ್ದಾರೆ. ಈ ನಿಟ್ಟಿನಲ್ಲಿ ಹೆಚ್ಚಿನ ಉದ್ಯೋಗ ಅವಕಾಶಗಳನ್ನು ಒದಗಿಸಬೇಕು. ಅಲ್ಲದೇ ಕರ್ನಾಟಕದಲ್ಲಿ ಉತ್ಪಾದನಾ ಘಟಕವನ್ನು ಆರಂಭಿಸಿದರೆ ಎಲ್ಲ ಸೌಲಭ್ಯಗಳನ್ನು ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ಡಾ. ಪಾಟೀಲ್‌ ಮತ್ತು ಡಾ. ಸುಧಾಕರ್‌ ತಿಳಿಸಿದರು.


ಫೋರ್ಕ್‌ಲಿಫ್ಟ್ ಆಪರೇಟರ್‌ಗಳಿಗೆ ಡಿಎಚ್‌ಎಲ್‌ (DHL) ಬೇಡಿಕೆ

ಬ್ರಾಟಿಸ್ಲಾವಾ ಬಳಿಯ ನಿಟ್ರಾದಲ್ಲಿ ಸಚಿವರು ಮತ್ತೊಂದು ಸಭೆ ನಡೆಸಿದರು. ಲಾಜಿಸ್ಟಿಕ್ಸ್ ಕ್ಷೇತ್ರದಲ್ಲಿ ಪ್ರಮುಖ ಸಂಸ್ಥೆಯಾಗಿರುವ ಡಿಎಚ್‌ಎಲ್‌ ಈಗ ಮತ್ತಷ್ಟು ಉದ್ಯೋಗಿಗಳಿಗೆ ಬೇಡಿಕೆ ಸಲ್ಲಿಸಿದೆ.

ಭಾರೀ ಫೋರ್ಕ್‌ಲಿಫ್ಟ್ ಆಪರೇಟರ್‌ಗಳಿಗೆ ಯುರೋಪಿನಾದ್ಯಂತ ಹೆಚ್ಚು ಬೇಡಿಕೆ ಇದೆ. ಕರ್ನಾಟಕದ ಕೌಶಲ್ಯಪೂರ್ಣ ಮಾನವ ಸಂಪನ್ಮೂಲವನ್ನು ಪೂರೈಸಬೇಕು ಎಂದು ಸಚಿವರ ಮುಂದೆಯೇ ಡಿಎಚ್‌ಎಲ್‌ನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಮಿಲೋಸ್ ಗೋಸಿಕ್ ಬೇಡಿಕೆ ಮಂಡಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ್‌, ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮವು ಈ ಪ್ರಸ್ತಾವನೆಯನ್ನು ಅಧ್ಯಯನ ಮಾಡುತ್ತದೆ ಮತ್ತು ನಿಗದಿತ ಪಠ್ಯಕ್ರಮದಲ್ಲಿ ಫೋರ್ಕ್‌ಲಿಫ್ಟ್ ತರಬೇತಿಯನ್ನೂ ಸೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಶಿವಕಾಂತಮ್ಮ ನಾಯಕ್ ಮತ್ತು ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್, ಕೌಶಲ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಕೆಎಸ್‌ಡಿಸಿ ವ್ಯವಸ್ಥಾಪಕ ನಿರ್ದೇಶಕ ಎನ್.ಎಂ. ನಾಗರಾಜ್, ಕ್ರಿಸ್ತಗೌಡ ತಾಯಣ್ಣವರ್, ರಾಮೇಗೌಡ ಮತ್ತು KS ಅವಿನಾಶ್ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X