Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲಿಬರ್ಟಿ, ಬಾಟಾ ಕಂಪೆನಿಗಳ ಜೊತೆಗೆ...

ಲಿಬರ್ಟಿ, ಬಾಟಾ ಕಂಪೆನಿಗಳ ಜೊತೆಗೆ ‘ಲಿಡ್ಕರ್’ ಹೆಸರುವಾಸಿಯಾಗಲು ಕ್ರಮವಹಿಸಿ : ಸಚಿವ ಮುನಿಯಪ್ಪ

ವಾರ್ತಾಭಾರತಿವಾರ್ತಾಭಾರತಿ28 Oct 2026 11:10 PM IST
share
ಲಿಬರ್ಟಿ, ಬಾಟಾ ಕಂಪೆನಿಗಳ ಜೊತೆಗೆ ‘ಲಿಡ್ಕರ್’ ಹೆಸರುವಾಸಿಯಾಗಲು ಕ್ರಮವಹಿಸಿ : ಸಚಿವ ಮುನಿಯಪ್ಪ

ಬೆಂಗಳೂರು : ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ಇಂದಿಗೆ 50 ವರ್ಷಗಳನ್ನು ಪೂರೈಸಿದ್ದು, ಲಿಬರ್ಟಿ, ಬಾಟಾ ಕಂಪೆನಿಗಳ ಜೊತೆಗೆ ಲಿಡ್ಕರ್ ಸಂಸ್ಥೆಯು ಹೆಸರುವಾಸಿಯಾಗಲು ಕ್ರಮವಹಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ.

ಬುಧವಾರ ವಸಂತನಗರದ ಲಿಡ್ಕರ್ ಭವನದಲ್ಲಿ ಆಯೋಜಿಸಿದ್ದ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಲಿಡ್ಕರ್ ಸಂಸ್ಥೆಯು ಖಾಸಗಿ ಕಂಪೆನಿಗಳ ಜೊತೆಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಪ್ರಸಿದ್ದಿಯನ್ನು ಪಡೆದಾಗ ಚರ್ಮೋತ್ಪನ್ನಗಳ ಬೇಡಿಕೆ ಹೆಚ್ಚಾಗಿ ಉತ್ಪಾದನೆ ಹೆಚ್ಚಾಗುತ್ತದೆ. ಹೀಗಾಗಿ ಆಯಾ ಜಿಲ್ಲೆಯಲ್ಲೇ ಶೋರೂಂಗಳನ್ನು ತೆರೆಯುವ ಮೂಲಕ ಚರ್ಮ ಕುಶಲಕರ್ಮಿಗಳು ತಯಾರಿಸಿದ ಚರ್ಮೋತ್ಪನ್ನಗಳನ್ನು ಮಾರಾಟವಾಗುವಂತೆ ಕ್ರಮವಹಿಸಬೇಕು ಎಂದರು.

1976ರಲ್ಲಿ ಸ್ಥಾಪನೆಯಾದ ಲಿಡ್ಕರ್ ಸಂಸ್ಥೆಯು ಇಂದಿಗೆ 50 ವಸಂತಗಳನ್ನು ಪೂರೈಸಿದೆ. ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದಾಗ ಆರಂಭವಾದ ಈ ನಿಗಮವು ಪ್ರಥಮ ಅಧ್ಯಕ್ಷರಾಗಿ ಮಲ್ಲಿಕಾರ್ಜುನ್ ಖರ್ಗೆ ಕಾರ್ಯನಿರ್ವಹಿಸಿದ್ದಾರೆ. ಈಗ ಅವರು ರಾಷ್ಟ್ರದ ನಾಯಕರಾಗಿ, ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದ್ದು, ಈ ನಿಗಮಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದು ಅವರು ಹೇಳಿದರು.

ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ಮಹತ್ವದ ತೀರ್ಮಾನವನ್ನು ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪರಿಶಿಷ್ಟ ಜಾತಿಯ 101 ಜಾತಿಗೂ ಒಳಮೀಸಲಾತಿ ಅನುಷ್ಠಾನಗೊಳಿಸಲಾಗಿದೆ. ಮೀಸಲಾತಿಯೂ ಶೇ.50ರಷ್ಟು ಮೀರಬಾರದೆಂಬ ಕೋರ್ಟಿನ ತೀರ್ಪಿನ ಹಿನ್ನೆಲೆಯಲ್ಲಿ ಶೇ.15ರಷ್ಟು ಮೀಸಲಾತಿ ಅನ್ವಯ ಶಿಕ್ಷಣ, ಉದ್ಯೋಗದಲ್ಲಿ ಅಳವಡಿಸಲಾಗಿದೆ. ಮೀಸಲಾತಿ ಪ್ರಮಾಣವನ್ನು ಜನಸಂಖ್ಯೆ ಅನುಗುಣವಾಗಿ ಹೆಚ್ಚಿಸಲು ಕ್ಯಾಬಿನೇಟ್‌ನಲ್ಲಿ ತೀರ್ಮಾನಿಸಿದ್ದು, ಸುಪ್ರೀಂ ಕೋರ್ಟ್‌ನ ಮೊರೆ ಹೋಗಲು ತೀರ್ಮಾನಿಸಿದ್ದೇವೆ ಎಂದು ಕೆ.ಎಚ್.ಮುನಿಯಪ್ಪ ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ನರೇಂದ್ರ, ಅಲೆಮಾರಿ ನಿಗಮದ ಅಧ್ಯಕ್ಷ ಪಲ್ಲವಿ, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಶೋಕ್ ಸಾಲಪ್ಪ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್, ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ರಸಾದ್, ಲಿಡ್ಕರ್‌ನ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್.ನಟರಾಜ್ ಉಪಸ್ಥಿತರಿದ್ದರು.

ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ಪರಿಶಿಷ್ಟ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ವಿವಿಧ ಯೋಜನೆಗಳ ಮೂಲಕ ಸೇವೆ ನೀಡುತ್ತಿದೆ. ಮುಂದಿನ ಡಿಸೆಂಬರ್ ತಿಂಗಳಿನಲ್ಲಿ ಈ ನಿಗಮದ ಚರ್ಮಕುಶಲಕರ್ಮಿಗಳ ವಸ್ತುಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಹೀಗಾಗಿ ಇದರ ಬಗ್ಗೆ ಯೋಜನೆ ರೂಪಿಸಿ ಉತ್ತಮ ಮಟ್ಟದಲ್ಲಿ ಕಾರ್ಯಕ್ರಮ ಮಾಡಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಪರಮೇಶ್ವರ್ ಅವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು.

-ಕೆ.ಎಚ್ ಮುನಿಯಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಚಿವ

Tags

Minister Muniyappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X