Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ಸುತ್ತಮುತ್ತ ಸಾವಿರ ಎಕರೆಯಲ್ಲಿ...

ಬೆಂಗಳೂರು ಸುತ್ತಮುತ್ತ ಸಾವಿರ ಎಕರೆಯಲ್ಲಿ ಮಾದರಿ ನವೋದ್ಯಮ ಪಾರ್ಕ್: ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ18 Nov 2026 10:03 PM IST
share
ಬೆಂಗಳೂರು ಸುತ್ತಮುತ್ತ ಸಾವಿರ ಎಕರೆಯಲ್ಲಿ ಮಾದರಿ ನವೋದ್ಯಮ ಪಾರ್ಕ್: ಎಂ.ಬಿ.ಪಾಟೀಲ್

ಬೆಂಗಳೂರು : ರಾಜ್ಯದಲ್ಲಿ ನವೋದ್ಯಮಗಳಿಗೆ ಮತ್ತಷ್ಟು ಉತ್ತೇಜನ ನೀಡಲು ಬೆಂಗಳೂರು ಸಮೀಪ ಒಂದು ಸಾವಿರ ಎಕರೆ ವಿಸ್ತಾರದ ಮತ್ತು ಹುಬ್ಬಳ್ಳಿ-ಧಾರವಾಡ ಸಮೀಪ 100-200 ಎಕರೆ ವಿಸ್ತಾರದ ಮಾದರಿಯಾದ ನವೋದ್ಯಮ(ಸ್ಟಾರ್ಟಪ್) ಪಾರ್ಕ್ ಗಳನ್ನು ಸ್ಥಾಪಿಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಬೆಂಗಳೂರು ತಂತ್ರಜ್ಞಾನ ಸಮಾವೇಶದ ಎರಡನೆಯ ದಿನವಾದ ಬುಧವಾರ ಅವರು ನವೋದ್ಯಮ ಸ್ಥಾಪಕರು ಮತ್ತು ಹೂಡಿಕೆದಾರರ ಜತೆ ಸಂವಾದದಲ್ಲಿ ಪಾಲ್ಗೊಂಡು, ಅವರ ಅಗತ್ಯಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಅವರು ಸಮಾವೇಶದಲ್ಲಿರುವ ಎರಡು ಮಳಿಗೆಗಳಿಗೆ ಭೇಟಿ ನೀಡಿ, ಅಲ್ಲಿನ ವೈಶಿಷ್ಟ್ಯಗಳನ್ನು ತಿಳಿದುಕೊಂಡರು.

ನವೋದ್ಯಮಿಗಳ ಜತೆ ಸಂವಾದ ನಡೆಸಿದ ನಂತರ ಮಾತನಾಡಿದ ಎಂ.ಬಿ.ಪಾಟೀಲ್, ಬೆಂಗಳೂರಿನಲ್ಲಿ ಭೂಮಿಯ ಬೆಲೆ ಗಗನಕ್ಕೇರಿದ್ದು, ಆದಷ್ಟು ಕಡಿಮೆ ಬೆಲೆಗೆ ಭೂಮಿ ಕೊಡಿಸಿದರೆ ಒಳ್ಳೆಯದೆಂದು ಕೆಲವು ನವೋದ್ಯಮಿಗಳು ಗಮನ ಸೆಳೆದಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸಲು ರಾಜ್ಯದ ಎರಡೂ ಭಾಗಗಳಲ್ಲಿ ಇಂತಹ ಸ್ಟಾರ್ಟಪ್ ಪಾಕ್ರ್ಸ್ ಸ್ಥಾಪಿಸುವ ಚಿಂತನೆ ನಮ್ಮ ಮುಂದಿದೆ. ಯಾವ ರೀತಿ ಅನುಕೂಲ ಮಾಡಬಹುದು ಎಂಬುದನ್ನು ಗಮನದಲ್ಲಿ ಇಟ್ಟುಕೊಂಡು ಮುಂದಿನ ಹೆಜ್ಜೆ ಇಡಲಾಗುವುದು ಎಂದು ಹೇಳಿದರು.

ದೇಶದಲ್ಲಿ 200ಕ್ಕೂ ಹೆಚ್ಚು ಇವಿ ದ್ವಿಚಕ್ರ ವಾಹನ ತಯಾರಿಕೆ ಸಂಸ್ಥೆಗಳು ಇವೆ. ಅವುಗಳಲ್ಲಿ ನಾಲ್ಕು ಕಂಪನಿಗಳು ತಿಂಗಳಿಗೆ ನೂರಕ್ಕೂ ಹೆಚ್ಚು ವಾಹನ ಮಾರಾಟ ಮಾಡುತ್ತಿವೆ. ಆ ನಾಲ್ಕು ಕಂಪನಿಗಳು ವಿನ್ಯಾಸವನ್ನು ಬೆಂಗಳೂರಿನಲ್ಲೇ ಮಾಡುತ್ತಿವೆ. ಆದರೆ ನಾಲ್ಕರಲ್ಲಿ ಮೂರು ಕಂಪನಿಗಳು ರಾಜ್ಯದಿಂದ ಹೊರಗೆ ವಾಹನ ತಯಾರಿಕೆ ಮಾಡುತ್ತಿವೆ. ಒಂದು ಕಂಪನಿ ಮಾತ್ರ ರಾಜ್ಯದಲ್ಲಿಯೇ ಉತ್ಪಾದನೆ ಮಾಡುತ್ತಿದೆ. ಇದಕ್ಕೆ ಕಾರಣ ಕಡಿಮೆ ಬೆಲೆಗೆ ಭೂಮಿ ಸಿಗದಿರುವುದು ಎಂದು ಕೆಲವು ನವೋದ್ಯಮಿಗಳು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಸಚಿವರು ನವೋದ್ಯಮ ಪಾರ್ಕ್ ಸ್ಥಾಪಿಸುವ ಭರವಸೆಯನ್ನು ನೀಡಿದರು.

ಪ್ರತಿಯೊಂದಕ್ಕೂ ಉದ್ಯಮಿಗಳೇ ಹಣ ಹಾಕುವುದು ಕಷ್ಟವಾಗುತ್ತದೆ ಎನ್ನುವುದು ಸರಕಾರಕ್ಕೆ ಗೊತ್ತಿದೆ. ಉದ್ದೇಶಿತ ಸ್ಟಾರ್ಟಪ್ ಪಾರ್ಕುಗಳಲ್ಲಿ ಕೈಗಾರಿಕಾ ನಿವೇಶನಗಳನ್ನು ಲೀಸ್ ಕಂ ಸೇಲ್ ಅಥವಾ ಬೇರೆ ಯಾವ ಸ್ವರೂಪದಲ್ಲಿ ನೀಡಬಹುದು ಎನ್ನುವುದನ್ನು ಕುರಿತು ಚಿಂತಿಸಲಾಗುವುದು. ಜತೆಗೆ ಬೆಂಗಳೂರಿನಿಂದ ಹೊರಗಿರುವ (ಬಿಯಾಂಡ್ ಬೆಂಗಳೂರು) ನವೋದ್ಯಮಗಳಿಗೆ ಈಗ ಕೊಡುತ್ತಿರುವುದಕ್ಕಿಂತ ಹೆಚ್ಚುವರಿಯಾಗಿ ಶೇ.5ರಷ್ಟು ಸಹಾಯಧನ ಕೊಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಎಂ.ಬಿ.ಪಾಟೀಲ್ ನುಡಿದರು.

ಏಕಗವಾಕ್ಷಿ ವ್ಯವಸ್ಥೆಯಡಿಯಲ್ಲಿ ಒಟ್ಟು 130ಕ್ಕೂ ಹೆಚ್ಚು ಸೇವೆಗಳು ಸಿಗುವಂತೆ ಗುರಿ ಇಟ್ಟುಕೊಳ್ಳಲಾಗಿದೆ. ಈ ಪೈಕಿ ಈಗಾಗಲೇ 116 ಸೇವೆಗಳಿವೆ. ಇನ್ನು ಉಳಿದಿರುವ 10-15 ಸೇವೆಗಳನ್ನು ಕೂಡ ಇನ್ನೊಂದು ತಿಂಗಳಲ್ಲಿ ಇದರಡಿಗೆ ತರಲಾಗುವುದು. ಏಕಗವಾಕ್ಷಿ ವ್ಯವಸ್ಥೆ ಎನ್ನುವುದು ನಿಜವಾದ ಅರ್ಥದಲ್ಲಿ ಅಸ್ತಿತ್ವಕ್ಕೆ ಬರುವಂತೆ ನೋಡಿಕೊಳ್ಳಲಾಗುವುದು. ಜತೆಗೆ ಕೈಗಾರಿಕೆಗಳ ಅಗತ್ಯಕ್ಕೆ ತಕ್ಕಂತೆ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಪಠ್ಯಕ್ರಮ ಪರಿಷ್ಕರಿಸುವ ಅಗತ್ಯ ಇದೆ ಎಂದು ಅವರು ಹೇಳಿದರು.

ಸರಕಾರದ ನವೋದ್ಯಮ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ಮಾತನಾಡಿ, ಕರ್ನಾಟಕದಲ್ಲಿ ನವೋದ್ಯಮಕ್ಕೆ ಅತ್ಯುತ್ತಮ ಕಾರ್ಯ ಪರಿಸರವಿದೆ. ಆದ್ದರಿಂದ ಉದ್ಯಮಿಗಳು ಕೇವಲ ವಿನ್ಯಾಸ ಮತ್ತು ತಯಾರಿಕೆಗೆ ಮಾತ್ರ ಸೀಮಿತವಾಗದೆ, ತಯಾರಿಕಾ ಚಟುವಟಿಕೆಗಳಿಗೆ ಬೇಕಾಗುವ ಯಂತ್ರೋಪಕರಣಗಳನ್ನು ಕೂಡ ಇಲ್ಲೇ ತಯಾರಿಸಬೇಕು. ಇದರಿಂದ ಮಿತವ್ಯಯ ಸಾಧಿಸಬಹುದು ಎಂದರು.

ಸಂವಾದದಲ್ಲಿ ಸ್ಪೆಷಲ್ ಇನ್ವೆಸ್ಟ್ ಕಂಪನಿಯ ಅರ್ಜುನ್ ರಾವ್, ಸ್ಯಾಮ್ಸಂಗ್ ವೆಂಚರ್ಸ್ ಪಾಲುದಾರ ರೋಹನ್ ಶೆಟ್ಟಿ, ಅಕ್ಷಯಕಲ್ಪ ಸಂಸ್ಥೆಯ ಶಶಿಕುಮಾರ್, ಕ್ಯೂಪೈ-ಎಐ ಸಂಸ್ಥಾಪಕರಾದ ನಾಗೇಂದ್ರ ಮತ್ತು ನಾಗರಾಜ, ಸಿಂಪ್ಲಿಫೈ ನಿರ್ದೇಶಕ ಸುಮಂತ್ ಕೃಷ್ಣ ಸೇರಿದಂತೆ 23 ಕಂಪನಿಗಳ ಪ್ರಮುಖರು ಪಾಲ್ಗೊಂಡಿದ್ದರು. ಉದ್ಯಮಿ ಮದನ್ ಪದಕಿ ಸಂವಾದವನ್ನು ನಿರ್ವಹಿಸಿದರು. ಬೃಹತ್ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಖುಷ್ಬು ಗೋಯಲ್ ಸೇರಿದಂತೆ ಇತರರು ಇದ್ದರು.

Tags

StartupBengaluruM.B. Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X