Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. KIAಗೆ MRPLನ ಏವಿಯೇಷನ್ ಟರ್ಬೈನ್ ಇಂಧನ...

KIAಗೆ MRPLನ ಏವಿಯೇಷನ್ ಟರ್ಬೈನ್ ಇಂಧನ ಪೈಪ್‌ಲೈನ್‌ ಗೆ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ22 May 2026 12:19 AM IST
share
KIAಗೆ MRPLನ ಏವಿಯೇಷನ್ ಟರ್ಬೈನ್ ಇಂಧನ ಪೈಪ್‌ಲೈನ್‌ ಗೆ ಅನುಮೋದನೆ

ಹೊಸದಿಲ್ಲಿ: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಏವಿಯೇಷನ್ ಟರ್ಬೈನ್ ಇಂಧನ (ಎಟಿಎಫ್‌) ಪೂರೈಕೆಯನ್ನು ಮತ್ತಷ್ಟು ಬಲಪಡಿಸಲು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (ಎಂಆರ್‌ಪಿಎಲ್‌) ಕೈಗೊಂಡಿರುವ 2.5 ಎಂಎಂಟಿಪಿಎ ಸಾಮರ್ಥ್ಯದ ಪೈಪ್‌ಲೈನ್‌ ಯೋಜನೆಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ನಿಯಂತ್ರಣ ಮಂಡಳಿ (ಪಿಎನ್‌ಜಿಆರ್‌ಬಿ) ಅನುಮೋದನೆ ನೀಡಿದೆ.

ONGCಯ ಅಂಗಸಂಸ್ಥೆಯೂ ಆಗಿರುವ ಎಂಆರ್‌ಪಿಎಲ್‌ಗೆ ದೇವನಗೊಂತಿಯಿಂದ ಕೆಐಎವರೆಗೆ ಪೆಟ್ರೋಲಿಯಂ ಮತ್ತು ಪೆಟ್ರೋಲಿಯಂ ಉತ್ಪನ್ನ ಪೈಪ್‌ಲೈನ್‌ ನಿರ್ಮಿಸಲು, ನಿರ್ವಹಿಸಲು ಹಾಗೂ ಅಗತ್ಯವಿದ್ದರೆ ವಿಸ್ತರಿಸಲು ಅಧಿಕಾರ ನೀಡಲಾಗಿದೆ.

ಈ ಯೋಜನೆಯಡಿ ದೇವನಗೊಂತಿಯ ಎಂಆರ್‌ಪಿಎಲ್‌ ಮಾರ್ಕೆಟಿಂಗ್ ಟರ್ಮಿನಲ್‌ನಿಂದ ಕೆಐಎದಲ್ಲಿರುವ ಅಸ್ತಿತ್ವದಲ್ಲಿನ ಸಾಮಾನ್ಯ ಬಳಕೆದಾರ ಇಂಧನ ಸಂಗ್ರಹ ಕೇಂದ್ರ ಹಾಗೂ ನಿರ್ಮಾಣ ಹಂತದಲ್ಲಿರುವ ಉಪಗ್ರಹ ಇಂಧನ ಸಂಗ್ರಹ ಕೇಂದ್ರಕ್ಕೆ ಎಟಿಎಫ್‌ ಪೈಪ್‌ಲೈನ್‌ ಸಂಪರ್ಕ ಕಲ್ಪಿಸಲಾಗುತ್ತದೆ.

ಪೈಪ್‌ಲೈನ್‌ ವ್ಯವಸ್ಥೆಯ ಸಾಮರ್ಥ್ಯ 2.5 ಎಂಎಂಟಿಪಿಎ ಆಗಿದ್ದು, 36 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.

ಈ ಯೋಜನೆಯಿಂದ ದೇವನಗೊಂತಿ ಮತ್ತು ಕೆಐಎ ನಡುವೆ ನೇರ ಹಾಗೂ ಪರಿಣಾಮಕಾರಿ ಎಟಿಎಫ್‌ ಸಾಗಣೆ ವ್ಯವಸ್ಥೆ ರೂಪುಗೊಳ್ಳಲಿದ್ದು, ವಿಮಾನ ಇಂಧನ ಪೂರೈಕೆ ಇನ್ನಷ್ಟು ಸುಗಮವಾಗಲಿದೆ ಎಂದು ಸಂಸ್ಥೆ ತಿಳಿಸಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ ಹಾಗೂ ಸರಕು ಸಾಗಣೆ ಪ್ರಮಾಣ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಯೋಜನೆಗೆ ಹೆಚ್ಚಿನ ಮಹತ್ವ ದೊರೆತಿದೆ. ಬೆಂಗಳೂರು ದೇಶದ ಪ್ರಮುಖ ವಾಯುಯಾನ ಮತ್ತು ತಂತ್ರಜ್ಞಾನ ಕೇಂದ್ರವಾಗಿ ಬೆಳೆಯುತ್ತಿರುವುದರಿಂದ ಎಟಿಎಫ್‌ ಬೇಡಿಕೆಯೂ ಹೆಚ್ಚುತ್ತಿದೆ.

ದೊಡ್ಡದಾಸರಹಳ್ಳಿಯಲ್ಲಿರುವ ಎಂಆರ್‌ಪಿಎಲ್‌ನ ದೇವನಗೊಂತಿ ಮಾರ್ಕೆಟಿಂಗ್ ಟರ್ಮಿನಲ್‌ನಿಂದ ಈಗಾಗಲೇ ಮೋಟಾರ್ ಸ್ಪಿರಿಟ್‌, ಹೈ ಸ್ಪೀಡ್ ಡೀಸೆಲ್‌ ಹಾಗೂ ಏವಿಯೇಷನ್ ಟರ್ಬೈನ್ ಇಂಧನ ವಿತರಣೆ ನಡೆಯುತ್ತಿದೆ. ಮಂಗಳೂರಿನ ಎಂಆರ್‌ಪಿಎಲ್‌ನಿಂದ ಪಿಎಂಎಚ್‌ಬಿಎಲ್‌ ಪೈಪ್‌ಲೈನ್‌ ಮೂಲಕ ಪೆಟ್ರೋಲಿಯಂ ಉತ್ಪನ್ನಗಳನ್ನು ಈ ಟರ್ಮಿನಲ್‌ಗೆ ಪೂರೈಸಲಾಗುತ್ತಿದೆ.

‘ಪ್ರಸ್ತಾವಿತ ಎಟಿಎಫ್‌ ಪೈಪ್‌ಲೈನ್‌ ಯೋಜನೆ ಬೆಂಗಳೂರು ವಿಮಾನ ನಿಲ್ದಾಣದ ಹೆಚ್ಚುತ್ತಿರುವ ಎಟಿಎಫ್‌ ಅಗತ್ಯವನ್ನು ಪೂರೈಸಲು ನೆರವಾಗಲಿದೆ. ಜೊತೆಗೆ ಬೆಂಗಳೂರಿನಲ್ಲಿ ಎಂಆರ್‌ಪಿಎಲ್‌ನ ಹೈಡ್ರೋಕಾರ್ಬನ್‌ ವ್ಯಾಪ್ತಿಯನ್ನು ವಿಸ್ತರಿಸಲು ಸಹಕಾರಿಯಾಗಲಿದೆ’ ಎಂದು ಎಂಆರ್‌ಪಿಎಲ್‌ನ ಯೋಜನೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಎಚ್‌.ವಿ. ಪ್ರಸಾದ್ ತಿಳಿಸಿದ್ದಾರೆ.

Tags

MRPLMMTPA
share
ವಾರ್ತಾಭಾರತಿ
ವಾರ್ತಾಭಾರತಿ
Next Story
X