Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಾಗಮಂಗಲ : ಗಣೇಶ ವಿಸರ್ಜನಾ ಮೆರವಣಿಗೆ...

ನಾಗಮಂಗಲ : ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಪ್ರಚೋದನಕಾರಿ ಭಾಷಣ ಆರೋಪ; ಆರೆಸ್ಸೆಸ್ ಮುಖಂಡನ ವಿರುದ್ಧ ಸುವೋಮೋಟೋ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ27 Sept 2026 1:17 AM IST
share
ನಾಗಮಂಗಲ : ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಪ್ರಚೋದನಕಾರಿ ಭಾಷಣ ಆರೋಪ; ಆರೆಸ್ಸೆಸ್ ಮುಖಂಡನ ವಿರುದ್ಧ ಸುವೋಮೋಟೋ ಪ್ರಕರಣ ದಾಖಲು

ನಾಗಮಂಗಲ : ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಪ್ರಚೋದನಾಕಾರಿ ಭಾಷಣ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಆರೆಸ್ಸೆಸ್ ಮುಖಂಡ ಶ್ರೀನಿವಾಸ್ ಎಂಬವರ ವಿರುದ್ಧ ನಾಗಮಂಗಲ ಪಟ್ಟಣ ಠಾಣೆ ಪೊಲೀಸರು ಸ್ವಯಂಪ್ರೇರಿತ ಎಫ್‌ಐಆರ್ ದಾಖಲು ಮಾಡಿರುವ ಬಗ್ಗೆ ವರದಿಯಾಗಿದೆ.

ನಾಗಮಂಗಲ ಪಟ್ಟಣದಲ್ಲಿ ಸಾಮೂಹಿಕ ಗಣೇಶ ವಿಸರ್ಜನಾ ಸಮಿತಿಯು ಸೆ.21ರಂದು ನಾಗಮಂಗಲದಲ್ಲಿ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಯನ್ನು ಆಯೋಜಿಸಿತ್ತು. ಅಂದು ಪಟ್ಟಣದ ಟಿ.ಬಿ.ವೃತ್ತದಿಂದ ಮುಖ್ಯ ರಸ್ತೆಯಲ್ಲಿ ಹೊರಟ ಮೆರವಣಿಗೆಯು ಮಧ್ಯಾಹ್ನ ಸುಮಾರು 3:30ಕ್ಕೆ ಮಂಡ್ಯ ಸರ್ಕಲ್ ತಲುಪಿತ್ತು.

ಈ ವೇಳೆ ಧ್ವನಿವರ್ಧಕದ ಮೂಲಕ ಮಾತನಾಡಿದ ಆರೆಸ್ಸೆಸ್ ಮುಖಂಡ ಶ್ರೀನಿವಾಸ್, ಎರಡು ವರ್ಷಗಳ ಹಿಂದೆ ನಾವು ತೆಪ್ಪಗೆ ಹಬ್ಬ ಮಾಡಿಕೊಂಡು ಹೋಗುತ್ತಿದ್ದೆವು, ಕೆಲವರು ಹೊಂಕರಿಸಿದ್ದರು ಈಗ ಕೇಸರಿ ವೀರರು ರಸ್ತೆಗೆ ಇಳಿದಿರುವುದಕ್ಕೆ ಅವರೆಲ್ಲಾ ಅವಿತುಕೊಂಡಿದ್ದಾರೆ. ಇದೆ ತರಹ ಅವರು ಇರಬೇಕು ಎಂದು ಪ್ರಚೋದನಕಾರಿ ಮಾತನಾಡಿದ ತಕ್ಷಣವೇ ಪೋಲೀಸರು ಮಧ್ಯ ಪ್ರವೇಶಿಸಿ ಭಾಷಣ ನಿಲ್ಲಿಸುವಂತೆ ಸೂಚಿಸಿ ತಿಳುವಳಿಕೆ ಹೇಳಿದ್ದಾರೆ. ಮತ್ತು ಮೆರವಣಿಗೆ ಶಾಂತಿಯುತವಾಗಿ ಮುಂದುವರಿಸುವಂತೆ ನೋಡಿಕೊಂಡಿದ್ದಾರೆ.

2024ರಲ್ಲಿ ನಾಗಮಂಗಲದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ನಡೆದಿದ್ದ ಕೋಮುಗಲಭೆ, ಅಂಗಡಿಗಳಿಗೆ ಬೆಂಕಿ ಹಚ್ಚಿದ ಹಾಗೂ ಕಲ್ಲುತೂರಾಟದ ಕಹಿ ಘಟನೆಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಹಾಗೂ ಸಾರ್ವಜನಿಕ ಶಾಂತಿ ಕದಡದಂತೆ ತಡೆಯಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ.

ಘಟನೆ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಜೆಎಂಎಫ್‌ಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags

Nagamangala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X