Bengaluru | ಶಿಶುಪಾಲನಾ ಕೇಂದ್ರದಲ್ಲಿ ಮಕ್ಕಳಿಗೆ ದೈಹಿಕ ಹಿಂಸೆ ಪ್ರಕರಣ: ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ

Photo credit: NDTV
ಬೆಂಗಳೂರು: ನಗರದಲ್ಲಿರುವ ‘ಕ್ಯಾಪ್ ಜಿಮಿನಿ’ ಎಂಬ ಖಾಸಗಿ ಸಂಸ್ಥೆಯ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಶುಪಾಲನಾ ಕೇಂದ್ರದಲ್ಲಿ ಮಕ್ಕಳಿಗೆ ದೈಹಿಕ ಹಿಂಸೆ ನೀಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (NHRC) ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಂಡಿದೆ.
ಆಯೋಗವು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಎರಡು ವಾರಗಳಲ್ಲಿ ಘಟನೆಯ ಕುರಿತಾಗಿ ವರದಿ ನೀಡಬೇಕು ಎಂದು ಸೂಚನೆಯನ್ನು ನೀಡಿದೆ.
Next Story




