Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ: 19...

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ: 19 ಮೊಬೈಲ್, 16 ಸಿಮ್ ಕಾರ್ಡ್, 15,800 ರೂ.ನಗದು ಪತ್ತೆ

ವಾರ್ತಾಭಾರತಿವಾರ್ತಾಭಾರತಿ28 Nov 2025 10:13 PM IST
share
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ: 19 ಮೊಬೈಲ್, 16 ಸಿಮ್ ಕಾರ್ಡ್, 15,800 ರೂ.ನಗದು ಪತ್ತೆ
ಪ್ರತ್ಯೇಕ 2 ಪ್ರಕರಣ ದಾಖಲು

ಬೆಂಗಳೂರು: ಇಲ್ಲಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಇತ್ತೀಚೆಗೆ ಕೈದಿಗಳ ಮೊಬೈಲ್ ಬಳಕೆ ವಿಡಿಯೋ ವೈರಲ್ ಬೆನ್ನಲೇ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು, ಜೈಲಿನಲ್ಲಿ ತಪಾಸಣೆ ನಡೆಸಿ ಸಜಾಬಂಧಿಗಳು ಅಕ್ರಮವಾಗಿ ಬಳಸುತ್ತಿದ್ದ ವಿವಿಧ ಕಂಪೆನಿಗಳ 19 ಮೊಬೈಲ್‍ಗಳನ್ನು ಪತ್ತೆಹಚ್ಚಿದ್ದಾರೆ.

ಜೈಲಿನಲ್ಲಿ ಅಕ್ರಮ ತಡೆಗಟ್ಟಲು ಹಾಗೂ ಸುಧಾರಣೆ ತರಲು ಮೊದಲ ಬಾರಿಗೆ ರಾಜ್ಯ ಸರಕಾರ ಐಪಿಎಸ್ ಅಧಿಕಾರಿ ಅಂಶು ಕುಮಾರ್ ಅವರನ್ನು ನಿಯೋಜಿಸಿತ್ತು. ಇವರ ನೇತೃತ್ವದಲ್ಲಿ ಇತ್ತೀಚೆಗೆ ದಾಳಿ ನಡೆಸಿರುವ ತಂಡವು ಸಜಾಬಂಧಿಗಳು ಬಳಸುತ್ತಿದ್ದ ಒಟ್ಟು 19 ಮೊಬೈಲ್‍ಗಳು, 16 ಸಿಮ್ ಕಾರ್ಡ್‍ಗಳು, 4 ಚಾರ್ಜರ್ ವೈರ್ ಗಳು, 3 ಇಯರ್ ಬಡ್ಸ್ ಗಳು ಹಾಗೂ 15,800 ರೂಪಾಯಿ ನಗದು ದೊರೆತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಸಜಾಬಂಧಿಗಳಾದ ಸಾಗರ್ ಯಾನೆ ರಕೀಬುಲ್ಲಾ, ಮುನಿರಾಜು ಸೇರಿದಂತೆ ಇನ್ನಿತರ ಬಂಧಿಗಳ ವಿರುದ್ಧ ಕರ್ನಾಟಕ ಕಾರಾಗೃಹ (ತಿದ್ದುಪಡಿ) ಅಧಿನಿಯಮದ ಕಲಂ 22 ಹಾಗೂ ಇತರೆ ಕಲಂಗಳ ಅಡಿಯಲ್ಲಿ ಪ್ರತ್ಯೇಕ ಎರಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಲೆದಿಂಬು, ಶೌಚಾಲಯದ ಗೋಡೆಯೊಳಗೆ ಮೊಬೈಲ್ ಪತ್ತೆ: ಕಾರಾಗೃಹದಲ್ಲಿ ಮೊಬೈಲ್ ಬಳಕೆ ಸಂಬಂಧ ನ.26ರಂದು ಮಧ್ಯರಾತ್ರಿ 12.50ರಿಂದ 1.25ರವರೆಗೆ ಅಧಿಕಾರಿ ಹಾಗೂ ಸಿಬ್ಬಂದಿ ತಪಾಸಣೆ ನಡೆಸಿದಾಗ ಜೈಲಿನ ಬ್ಯಾರಕ್‍ಗಳ ವಿವಿಧ ಕೊಠಡಿಯಲ್ಲಿ 15 ಮೊಬೈಲ್‍ಗಳು ಹಾಗೂ 11 ಸಿಮ್ ಕಾರ್ಡ್‍ಗಳು ಸೇರಿದಂತೆ ಇನ್ನಿತರ ನಿಷೇಧಿತ ವಸ್ತುಗಳ ಪತ್ತೆಯಾಗಿದ್ದವು. ಸಜಾಬಂಧಿ ಸಾಗರ್ ಎಂಬುವನ ಹಾಸಿಗೆಯಲ್ಲಿ ಒನ್ ಪ್ಲಸ್ ಕಂಪೆನಿಯ ಒಂದು ಮೊಬೈಲ್ ಹಾಗೂ ಸಿಮ್ ಕಾರ್ಡ್ ಹಾಗೂ ಮತ್ತೋರ್ವ ಸಜಾಬಂಧಿ ಮುನಿರಾಜು ಬಳಸುತ್ತಿದ್ದ ತಲೆದಿಂಬಿನಲ್ಲಿ ರೆಡ್ ಮಿ ಕಂಪೆನಿಯ ಒಂದು ಮೊಬೈಲ್ ಹಾಗೂ ಸಿಮ್ ಕಾರ್ಡ್ ದೊರಕಿತ್ತು. 5ನೇ ಬ್ಯಾರಕ್‍ನ ಶೌಚಾಲಯಕ್ಕೆ ತೆರಳುವ ಕಮಾನುಗಳ ಮೇಲೆ 2 ಚಾರ್ಜರ್ ವೈರ್ ಹಾಗೂ ಒಂದು ಇಯರ್ ಬರ್ಡ್ ಪತ್ತೆಯಾಗಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಅಧಿಕಾರಿಗಳ ಮತ್ತೊಂದು ತಂಡವು ನ.26ರಂದು ಬೆಳಗ್ಗೆ ಜಾವ 7.20 ರಿಂದ 7.50 ರವರೆಗೆ ನಡೆಸಿದ ತಪಾಸಣೆ ವೇಳೆ 4 ಮೊಬೈಲ್, 5 ಸಿಮ್ ಕಾರ್ಡ್‍ಗಳು ಹಾಗೂ 15,800 ರೂಪಾಯಿ ನಗದು ಪತ್ತೆಯಾಗಿದೆ. ನಿಷೇಧಿತ ವಸ್ತುಗಳನ್ನು ಜೈಲಿಗೆ ಸಾಗಿಸಿದವರು, ಇದಕ್ಕೆ ನೆರವು ನೀಡಿದವರು ಅಂತಿಮವಾಗಿ ಮೊಬೈಲ್ ಬಳಸುತ್ತಿದ್ದ ಕೈದಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜೈಲಾಧಿಕಾರಿಗಳು ದೂರಿನಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X