ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟಿಸಲಿರುವ ಪ್ರಧಾನಿ
ಬೆಂಗಳೂರು: ಕರ್ನಾಟಕ ಸರ್ಕಾರ, ವಸತಿ ಮತ್ತು ಕೇಂದ್ರ ನಗರ ವ್ಯವಹಾರಗಳ ಸಚಿವಾಲಯ ಹಾಗೂ ಕೇಂದ್ರ ರೈಲ್ವೆ ಮಂಡಳಿ ಮತ್ತು ರೈಲ್ವೇ ಸಚಿವಾಲಯದ ವತಿಯಂದ ಹಮ್ಮಿಕೊಳ್ಳಲಾಗಿರುವ ಬೆಂಗಳೂರು ಮೆಟ್ರೋ ಹಂತ 2ರ ಹಳದಿ ಮಾರ್ಗ ಉದ್ಘಾಟನೆ, ಬೆಂಗಳೂರು ಮೆಟ್ರೋ ಹಂತ 3 ರ ಶಂಕುಸ್ಥಾಪನೆ ಹಾಗೂ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಚಾಲನೆ ನೀಡುವ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಪ್ರಧಾನಿಯನ್ನು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಎಂ.ಎ. ಸಲೀಂ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್. ಜಿ ಸೇರಿದಂತೆ ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story







