Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬರ ಪರಿಹಾರಕ್ಕೆ ನ್ಯಾಯಾಲಯದ ಮೊರೆ: ರಾಜ್ಯ...

ಬರ ಪರಿಹಾರಕ್ಕೆ ನ್ಯಾಯಾಲಯದ ಮೊರೆ: ರಾಜ್ಯ ಸರಕಾರ ದಿವಾಳಿಯಾಗಿರುವುದಕ್ಕೆ ಇದೇ ಸಾಕ್ಷಿ ಎಂದ ಆರ್.ಅಶೋಕ್

ಅಮ್ಜದ್ ಖಾನ್ ಎಂ./ವಾರ್ತಾಭಾರತಿಅಮ್ಜದ್ ಖಾನ್ ಎಂ./ವಾರ್ತಾಭಾರತಿ29 Nov 2026 10:11 PM IST
share
ಬರ ಪರಿಹಾರಕ್ಕೆ ನ್ಯಾಯಾಲಯದ ಮೊರೆ: ರಾಜ್ಯ ಸರಕಾರ ದಿವಾಳಿಯಾಗಿರುವುದಕ್ಕೆ ಇದೇ ಸಾಕ್ಷಿ ಎಂದ ಆರ್.ಅಶೋಕ್

ಬೆಂಗಳೂರು : ಬರ ಪರಿಹಾರಕ್ಕಾಗಿ ರಾಜ್ಯ ಸರಕಾರ ನ್ಯಾಯಾಲಯದ ಮೊರೆ ಹೋಗಿರುವುದನ್ನು ಟೀಕಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸರಕಾರ ದಿವಾಳಿ ಆಗಿರುವುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕೆ ಎಂದು ಹೇಳಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿ ಆಗಿರುವುದನ್ನು ಒಪ್ಪಿಕೊಳ್ಳಲಿ. ಬಳಿಕ ಸರ್ವಪಕ್ಷ ನಿಯೋಗದೊಂದಿಗೆ ದಿಲ್ಲಿಗೆ ತೆರಳೋಣ ಎಂದು ಸವಾಲು ಹಾಕಿದರು.

ಬರ ಪರಿಹಾರಕ್ಕಾಗಿ ಎಲ್ಲ ವಿಚಾರಗಳನ್ನೂ ನ್ಯಾಯಾಲಯದಲ್ಲೆ ತೀರ್ಮಾನಿಸಬೇಕೆ? ಎನ್‍ಡಿಆರ್‍ಎಫ್ ಮತ್ತು ಎಸ್‍ಡಿಆರ್‍ಎಫ್‍ನ ಹಣ ಎಲ್ಲಿದೆ? ಪರಿಹಾರ ವಿಳಂಬವಾಗುತ್ತಿರುವುದನ್ನು ಮರೆಮಾಚಲು ಸರಕಾರ ನ್ಯಾಯಾಲಯದ ಮೊರೆ ಹೋಗುತ್ತಿದೆ ಎಂದು ಅವರು ಆರೋಪಿಸಿದರು.

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಕರ್ನಾಟಕಕ್ಕೆ ಎಷ್ಟು ಬರ ಪರಿಹಾರ ನೀಡಲಾಗಿತ್ತು ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಎಷ್ಟು ಪರಿಹಾರ ನೀಡಿದೆ ಎಂಬುದನ್ನು ರಾಜ್ಯ ಸರಕಾರ ಬಹಿರಂಗಪಡಿಸಲಿ ಎಂದು ಅಶೋಕ್ ಆಗ್ರಹಿಸಿದರು.

ವಿಜಯ್ ವಿರುದ್ಧ ವಾಗ್ದಾಳಿ: ಕಾರ್ತಿಕ ದೀಪ ವಿವಾದದ ಕುರಿತು ಮಾತನಾಡಿದ ಅಶೋಕ್, ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರನ್ನು ನಮ್ಮ ರಾಜ್ಯದ ದೇವಸ್ಥಾನಗಳಿಗೂ ಬಿಡಬಾರದು. ಅವರು ಕರ್ನಾಟಕಕ್ಕೆ ಬಂದಾಗಲೂ ಬಹಿಷ್ಕರಿಸಬೇಕು ಎಂದು ಕರೆ ನೀಡಿದರು.

ಚುನಾವಣೆಗೂ ಮುನ್ನ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದ ವಿಜಯ್, ಈಗ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸುತ್ತಿಲ್ಲ. ಸಿನಿಮಾ ಶೈಲಿಯಲ್ಲಿ ಎಲ್ಲವನ್ನೂ ಮಾಡಲು ಹೋಗಿ ಹಳ್ಳಕ್ಕೆ ಬಿದ್ದ ನರಿಯಂತಾಗಿದ್ದಾರೆ ಎಂದು ಅಶೋಕ್ ಟೀಕಿಸಿದರು.

ಆಶಾ ಕಾರ್ಯಕರ್ತೆಯರ ಪರ ಹೋರಾಟ: ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಿದೆ. 2 ಸಾವಿರ ರೂ. ಗೌರವಧನಕ್ಕಾಗಿ 13 ದಿನ ಹೋರಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು ಸರಕಾರದ ವೈಫಲ್ಯಕ್ಕೆ ಸಾಕ್ಷಿ. ಆಶಾ ಕಾರ್ಯಕರ್ತೆಯರ 15 ಸಾವಿರ ರೂ. ಗೌರವಧನದ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಸಬೇಕು. ಅಧಿವೇಶನದಲ್ಲೂ ಅವರ ಪರವಾಗಿ ಧ್ವನಿ ಎತ್ತುವುದಾಗಿ ಅಶೋಕ್ ಹೇಳಿದರು.

ಮಹಿಳಾ ಮೀಸಲಾತಿ ಮಸೂದೆಗೆ ಸ್ವಾಗತ: ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್‍ವಿಂಗಡಣೆ ಮಸೂದೆಗಳನ್ನು ಸ್ವಾಗತಿಸಿದ ಅಶೋಕ್, ಕಾಂಗ್ರೆಸ್ ರಾಜಕೀಯ ಕಾರಣಗಳಿಗಾಗಿ ಅವುಗಳನ್ನು ವಿರೋಧಿಸುತ್ತಿದೆ. ಎರಡೂ ಮಸೂದೆಗಳು ಸಂಸತ್ತಿನ ಅಧಿವೇಶನದಲ್ಲಿ ಅಂಗೀಕಾರವಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ, ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಭೇಟಿಗೆ ತೆರಳುತ್ತಿರುವ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟದ ನಾಯಕರ ನಡೆಯನ್ನು ಟೀಕಿಸಿದ ಅವರು, ಡಿಎಂಕೆಗೆ ದ್ರೋಹ ಮಾಡಿದ ಕಾಂಗ್ರೆಸ್ ಈಗ ಅವರ ಬೆಂಬಲ ಕೇಳುತ್ತಿದೆ ಎಂದರು.

ರಾಜ್ಯ ಸಚಿವ ಸಂಪುಟ ವಿಸ್ತರಣೆಯೂ ರಾಜಕೀಯ ನಾಟಕವಾಗಿದ್ದು, ಬಿ.ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ಮರುಸೇರ್ಪಡೆ ಮಾಡಿಕೊಂಡರೆ ಬಿಜೆಪಿ ಅದನ್ನು ಖಂಡಿತವಾಗಿಯೂ ವಿರೋಧಿಸಲಿದೆ ಎಂದು ಅಶೋಕ್ ತಿಳಿಸಿದರು.

Tags

R. Ashoka
share
ಅಮ್ಜದ್ ಖಾನ್ ಎಂ./ವಾರ್ತಾಭಾರತಿ
ಅಮ್ಜದ್ ಖಾನ್ ಎಂ./ವಾರ್ತಾಭಾರತಿ

ಅಮ್ಜದ್ ಖಾನ್ ಎಂ. ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದು, 2007ರಿಂದ ವಾರ್ತಾಭಾರತಿ ಕನ್ನಡ ದೈನಿಕ ಬೆಂಗಳೂರು ಆವೃತ್ತಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವಾಸಿ ಅನುಭವದ ವಿಶೇಷ ಲೇಖನಗಳನ್ನು ಬರೆಯುವುದು, ಪುಸ್ತಕ ಓದುವುದು‌, ಸಾಮಾಜಿಕ ಸೇವಾ ಕಾರ್ಯಗಳು ಇವರ ಹವ್ಯಾಸವಾಗಿವೆ.

Next Story
X