Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 1 ಸಾವಿರ ಕೋಟಿ ರೂ. ವ್ಯವಹಾರವಾದ ಇತಿಹಾಸ...

1 ಸಾವಿರ ಕೋಟಿ ರೂ. ವ್ಯವಹಾರವಾದ ಇತಿಹಾಸ ತಿರುಚುವ ಕೆಲಸ: ಸಚಿವ ಪ್ರಿಯಾಂಕ್ ಖರ್ಗೆ

► "ಇತ್ತೀಚಿನ ದಿನಗಳಲ್ಲಿ ಇತಿಹಾಸವನ್ನು ತಮ್ಮಿಚ್ಛೆಯಂತೆ ತಿರುಚುವುದು ಫ್ಯಾಷನ್ ಆಗಿಬಿಟ್ಟಿದೆ" ►ಪತ್ರಕರ್ತ ನವೀನ್ ಸೂರಿಂಜೆ ಬರೆದ ‘ಕರಾವಳಿಯ ಚರಿತ್ರೆಯಲ್ಲಿ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್’ ಪುಸ್ತಕ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ29 March 2026 5:33 PM IST
share
1 ಸಾವಿರ ಕೋಟಿ ರೂ. ವ್ಯವಹಾರವಾದ ಇತಿಹಾಸ ತಿರುಚುವ ಕೆಲಸ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಇತ್ತೀಚೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್)ದವರು ವಾಟ್ಸ್‌ಆ್ಯಪ್ ಯೂನಿವರ್ಸಿಟಿಯಿಂದ ಹೊರ ಬಂದು ಸುಳ್ಳು ಇತಿಹಾಸವನ್ನು ಹೇಳಲು ಚಿತ್ರಮಂದಿರದ ದೊಡ್ಡ ಪರದೆಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಇವರಿಗೆ ಇತಿಹಾಸವನ್ನು ತಿರುಚುವುದೇ ಛಾಳಿಯಾಗಿಬಿಟ್ಟಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

ರವಿವಾರ ನಗರದ ಕಬ್ಬನ್‍ಪಾರ್ಕ್‍ನಲ್ಲಿರುವ ಸಚಿವಾಲಯ ಕ್ಲಬ್‍ನ ಸಭಾಂಗಣದಲ್ಲಿ ಪತ್ರಕರ್ತ ನವೀನ್ ಸೂರಿಂಜೆ ಬರೆದಿರುವ ‘ಕರಾವಳಿಯ ಚರಿತ್ರೆಯಲ್ಲಿ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಇತಿಹಾಸವನ್ನು ತಮ್ಮಿಚ್ಛೆಯಂತೆ ತಿರುಚುವುದು ಒಂದು ಫ್ಯಾಷನ್ ಆಗಿಬಿಟ್ಟಿದೆ. ಇದು ಕೇವಲ ಹವ್ಯಾಸವಾಗಿ ಉಳಿದಿಲ್ಲ, ಬದಲಾಗಿ ಸಾವಿರಾರು ಕೋಟಿ ರೂಪಾಯಿಗಳ ವ್ಯವಹಾರವಾಗಿ ಬದಲಾಗಿದೆ ಎಂದರು.

ಹಸಿ ಸುಳ್ಳುಗಳ ಇತಿಹಾಸದ ಕಥೆಗಳನ್ನು ದೊಡ್ಡ ಪರದೆಗಳಲ್ಲಿ ತಂದು ಜನರನ್ನು ದಿಕ್ಕಿ ತಪ್ಪಿಸುವ ಕೆಲಸವಾಗುತ್ತಿದೆ. ಗುಜರಾತ್ ಫೈಲ್ಸ್, ಕಾಶ್ಮೀರ ಫೈಲ್ಸ್, ಕೇರಳ ಸ್ಟೋರಿ, ಚಾವಾ ಹೀಗೆ ಅನೇಕ ಸಿನಿಮಾಗಳು ಬಂದಿವೆ. ಜನಸಾಮಾನ್ಯರು ಈ ಸಿನಿಮಾಗಳನ್ನು ನೋಡಿ ಪ್ರಶಂಸೆ ಮಾಡಿ ಸಾವಿರ ಕೋಟಿ ಲಾಭ ಮಾಡಿಕೊಟ್ಟರೆ ತೊಂದರೆಯಿಲ್ಲ. ಆದರೆ, ಮೊನ್ನೆಯಷ್ಟೇ ಬಿಡುಗಡೆಯಾದ ಧುರಂಧರ್ ಸಿನಿಮಾವನ್ನು ನೋಡಿದ ಇತಿಹಾಸ ಶಿಕ್ಷಕಿಯೊಬ್ಬರು, ‘ಈ ಸಿನಿಮಾ ನೋಡಿ ನನ್ನ ಕಣ್ಣು ತೆರೆಯಿತು, ನಾವು ಮಕ್ಕಳಿಗೆ ತಪ್ಪು ಇತಿಹಾಸ ಕಲಿಸುತ್ತಿದ್ದೆವು’ ಎಂದು ಹೇಳುತ್ತಿರುವುದು ನಿಜಕ್ಕೂ ಆತಂಕಕಾರಿ ಎಂದು ಪ್ರಿಯಾಂಕ್ ಖರ್ಗೆ ಕಳವಳ ವ್ಯಕ್ತಪಡಿಸಿದರು.

ಒಬ್ಬ ಶಿಕ್ಷಕ 100 ಮಕ್ಕಳ ಮೇಲೆ ಪ್ರಭಾವ ಬೀರುತ್ತಾರೆ. ಆ ನೂರು ಮಕ್ಕಳು ಮತ್ತಷ್ಟು ಜನರ ಮೇಲೆ ಪ್ರಭಾವ ಬೀರಬಲ್ಲರು. ಇದು ಸಮಾಜದ ಸ್ವಾಸ್ಥ್ಯವನ್ನು ಕೆಡಿಸುತ್ತದೆ. ಇದೇ ಈ ಕಾಲದ ದೊಡ್ಡ ದುರಂತ ಎಂದು ಪ್ರಿಯಾಂಕ್ ಖರ್ಗೆ ಎಚ್ಚರಿಸಿದರು.

100 ವರ್ಷದ ಇತಿಹಾಸದಲ್ಲಿ ಆರೆಸ್ಸೆಸ್‍ನವರ 10 ಸಾಧನೆ ಕೇಳಿದರೆ ಹೇಳುವುದಿಲ್ಲ. ಅದನ್ನು ಬಿಟ್ಟು ನಾವು ಕೇರಳ ಪ್ರವಾಹ ಅಥವಾ ವಯನಾಡ್‍ನಲ್ಲಿ ನೆರವು ನೀಡಿದ್ದನ್ನು ಹೇಳುತ್ತಾರೆ. ನರೇಂದ್ರ ಮೋದಿ ಅವರ ಬಗ್ಗೆ ಮತ್ತು ಆರೆಸ್ಸೆಸ್ ಬಗ್ಗೆ ಬಂದ ಸಿನಿಮಾಗಳು 100 ಕೋಟಿ ಕೂಡ ದಾಟಲಿಲ್ಲ. ಏಕೆಂದರೆ ಅವುಗಳಲ್ಲಿ ಸೃಷ್ಟಿ ಮಾಡಲು ಏನೂ ಇಲ್ಲ. ನೈಜ ಇತಿಹಾಸವಿಲ್ಲ ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದರು.




200 ವರ್ಷಕ್ಕೂ ಅಧಿಕ ಕಾಲ ಬ್ರಿಟಿಷರು ನಮ್ಮನ್ನು ಆಳಿದರು. ಅವರ ವಿರುದ್ಧ ಟಿಪ್ಪು ಸುಲ್ತಾನ್ ಹೋರಾಡಿದರು, ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದರು. ಟಿಪ್ಪು ನಿಜವಾದ ಸ್ವಾತಂತ್ರ್ಯ ಹೋರಾಟಗಾರರು. ಆದರೆ, ಆರೆಸ್ಸೆಸ್‍ನವರು ಬ್ರಿಟಿಷರ ವಿರುದ್ಧ ಸಣ್ಣ ಧ್ವನಿಯನ್ನು ಎತ್ತಲಿಲ್ಲ. ಟಿಪ್ಪುವಿನ ವಿರುದ್ಧ ಹುಸಿ ಇತಿಹಾಸವನ್ನು ಸೃಷ್ಟಿಸುತ್ತಾರೆ ಅಷ್ಟೇ. ಪ್ರಸ್ತುತ ಸಮಾಜದಲ್ಲಿ ಒಗ್ಗಟ್ಟಾಗಿ ಬಾಳುವುದು ಅವಶ್ಯಕತೆಯಲ್ಲ, ಅನಿವಾರ್ಯವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಭಾರತದ ಇತಿಹಾಸದ ಪುಟದಲ್ಲಿ ಬಹಳಷ್ಟು ಸ್ವಾತಂತ್ರ್ಯ ಹೋರಾಟಗಾರರ ಹೆಸರಿದೆ. ಆದರೆ, ಬ್ರಿಟಿಷರ ಇತಿಹಾಸದಲ್ಲಿ ಭಾರತ ಸ್ವಾತಂತ್ರ್ಯ ಹೋರಾಟಗಾರರ ಹೆಸರಿದ್ದರೆ, ಅದು ಟಿಪ್ಪು ಸುಲ್ತಾನ್ ಕೂಡ ಒಬ್ಬರು. ಬ್ರಿಟಿಷ್ ಅಧಿಕಾರಿ ಲಾರ್ಡ್ ವೆಲ್ಲೆಸ್ಲಿಯೇ ‘ಟಿಪ್ಪು ತರದ ವಾರಿಯರ್ ನೋಡಿಲ್ಲ’ ಎಂದು ಬರೆಯುತ್ತಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಟಿಪ್ಪುಗೆ ತೋಟಗಾರಿಕೆಯಲ್ಲಿ ಸಾಕಷ್ಟು ಆಸಕ್ತಿ ಇದ್ದದ್ದರಿಂದಲೇ ಬೆಂಗಳೂರಿನಲ್ಲಿ ಹೈದರ್ ಮತ್ತು ಟಿಪ್ಪು ಸೇರಿಕೊಂಡು ‘ಲಾಲ್ ಬಾಗ್’ ಕಟ್ಟಿಸಿದ್ದಾರೆ. ಆದರೆ, ಅಲ್ಲಿನ ಲೋಕಸಭಾ ಸದಸ್ಯ ಟಿಪ್ಪುವನ್ನು ವಿರೋಧಿಸುತ್ತಾರೆ. ನಮ್ಮ ದೇಶಕ್ಕೆ ಬರುವ ಎಲ್‍ಪಿಜಿ ಇಸ್ಲಾಮಿಕ್ ದೇಶಗಳಿಂದ. ಅತಿ ಹೆಚ್ಚು ಪೆಟ್ರೋಲ್ ಬರುವುದು ಮಧ್ಯಪ್ರಾಚ್ಯದಿಂದ. ಇದನ್ನು ಮಾತನಾಡಲು ಹೋದಾಗ ಆರೆಸ್ಸೆಸ್‍ನವರು ಸುಮ್ಮನಾಗುತ್ತಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಟಿಪ್ಪು 150ಕ್ಕೂ ಹೆಚ್ಚು ದೇವಸ್ಥಾನಗಳನ್ನು ಜೀರ್ಣೋದ್ದಾರ ಮಾಡಿದ್ದಾರೆ. ಅದರ ಬಗ್ಗೆ ಯಾರೂ ಮಾತನಾಡುವುದಿಲ್ಲ. ಇದನ್ನು ಬಿಟ್ಟು, ಟಿಪ್ಪು ಹಿಂದೂ ವಿರೋಧಿ ಎಂಬ ನರೇಟಿವ್‍ಗಳನ್ನು ಸೃಷ್ಟಿ ಮಾಡುತ್ತಾರೆ. ನಮ್ಮ ನಿಜವಾದ ಇತಿಹಾಸ ಇರುವುದು ಪಾಲಿ ಮತ್ತು ಪ್ರಾಕೃತ ಭಾಷೆಯಲ್ಲಿಯೇ ಹೊರತು ಸಂಸ್ಕೃತದಲ್ಲಿ ಅಲ್ಲ. ಇದರ ಬಗ್ಗೆ ಸರಿಯಾದ ಅಧ್ಯಯನಗಳು ಆಗಬೇಕು ಎಂದು ಪ್ರಿಯಾಂಕ್ ಖರ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು.

ಗ್ರಾಮೀಣ ಗ್ರಂಥಾಲಯಗಳಲ್ಲಿ ಮಕ್ಕಳು ಓದಬೇಕಾದ ಪುಸ್ತಕಗಳನ್ನು ಬಿಟ್ಟು, ರೋಹಿತ್ ಚಕ್ರತೀರ್ಥನಂತಹ ಬಾಡಿಗೆ ಭಾಷಣಕಾರರ ಪುಸ್ತಕಗಳನ್ನು ಇಟ್ಟಿದ್ದರು. ಈಗ ಶುದ್ಧಿಕರಣ ಮಾಡಿದ್ದೇವೆ. ಸಂವಿಧಾನದ ಮೌಲ್ಯವನ್ನು ಹೇಳುವ, ಭ್ರಾತೃತ್ವ ಭಾವನೆಯನ್ನು ಉಂಟುಮಾಡುವ, ಪರೀಕ್ಷೆಗೆ ಉಪಯೋಗವಾಗುವ ಪುಸ್ತಕಗಳನ್ನು ಇಡಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಕೃತಿ ಚಿಂತಕ ಡಾ.ಬಂಜಗೆರೆ ಜಯಪ್ರಕಾಶ್, ಇತಿಹಾಸಕಾರ್ತಿ ಡಾ.ರುಚಿಕಾ ಶರ್ಮ, ಹಿರಿಯ ಚಿಂತಕ ಡಾ.ಸಿದ್ದನಗೌಡ ಪಾಟೀಲ್, ಹಿರಿಯ ಪತ್ರಕರ್ತ ಸುದೀಪ್ತೋ ಮೊಂಡಲ್, ಹೋರಾಟಗಾರ ಮುನೀರ್ ಕಾಟಿಪಳ್ಳ, ಪುಸ್ತಕದ ಕತೃ ನವೀನ್ ಸೂರಿಂಜೆ ಉಪಸ್ಥಿತರಿದ್ದರು.


ವಾಟ್ಸಪ್ ಯುನಿವರ್ಸಿಟಿ, ಸೋಶಿಯಲ್ ಮೀಡಿಯಾ ಇವೆರಡೂ ನೈಜ ಇತಿಹಾಸಕ್ಕೆ ದೊಡ್ಡ ಅಪಾಯ..!:

ಇಂದು ನಿಜವಾದ ಇತಿಹಾಸಕ್ಕೆ ಎರಡು ದೊಡ್ಡ ಅಪಾಯಗಳಿವೆ. ಒಂದು ವಾಟ್ಸಪ್ ಯುನಿವರ್ಸಿಟಿ. ಇನ್ನೊಂದು ಸೋಶಿಯಲ್ ಮೀಡಿಯಾ. ಟಿವಿ ಮಾಧ್ಯಮಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಬಾಡಿಗೆ ಭಾಷಣಕಾರರೇ ಇರುತ್ತಾರೆ. ನೋಟ್ ಬ್ಯಾನ್ ಆದಾಗ ಆರ್ಥಿಕ ತಜ್ಞರಾಗುವವರು ಯುದ್ಧ ಬಂದಾಗ ಮಿಲಿಟರಿ ತಜ್ಞರಾಗುತ್ತಾರೆ, ಕೊರೊನಾ ಬಂದರೆ ಅವರೇ ಹೆಲ್ತ್ ಸ್ಪೆಷಲಿಸ್ಟ್ ಆಗುತ್ತಾರೆ. ಇವರ ಮುಂದೆ ಬೇರೆ ಓದಿದವರೆಲ್ಲ ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಇತಿಹಾಸವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದ ಇಂತಹ ಬಾಡಿಗೆ ಭಾಷಣಕಾರರು ಹೇಳಿದ್ದನ್ನೇ ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರು ಒತ್ತಿ ಒತ್ತಿ ಹೇಳುತ್ತಾರೆ ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.


Tags

Book releaseNaveen soorinje
share
ವಾರ್ತಾಭಾರತಿ
ವಾರ್ತಾಭಾರತಿ
Next Story
X