Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಡವರಿಗೆ ಆರೋಗ್ಯ ಭಾಗ್ಯ ಕಲ್ಪಿಸುವ...

ಬಡವರಿಗೆ ಆರೋಗ್ಯ ಭಾಗ್ಯ ಕಲ್ಪಿಸುವ ಜವಾಬ್ದಾರಿ ಸರಕಾರಿ ವೈದ್ಯರ ಮೇಲಿದೆ: ಸಿಎಂ ಸಿದ್ದರಾಮಯ್ಯ

‘ಪ್ರಶಸ್ತಿ ಪುರಸ್ಕೃತ ವೈದ್ಯರು ವೈದ್ಯ ಸಮೂಹಕ್ಕೆ ಮಾದರಿ ಆಗಬೇಕು’

ವಾರ್ತಾಭಾರತಿವಾರ್ತಾಭಾರತಿ1 July 2023 3:32 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬಡವರಿಗೆ ಆರೋಗ್ಯ ಭಾಗ್ಯ ಕಲ್ಪಿಸುವ ಜವಾಬ್ದಾರಿ ಸರಕಾರಿ ವೈದ್ಯರ ಮೇಲಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜು.1: ಹಣವಂತರಿಗೆ ಆರೋಗ್ಯ ಸೇವೆ ಪಡೆದುಕೊಳ್ಳುವುದು, ಆರೋಗ್ಯ ರಕ್ಷಣೆ ಕಷ್ಟದ ಕೆಲಸವಲ್ಲ. ಬಡವರಿಗೆ ಆರೋಗ್ಯ ಭಾಗ್ಯ ಕಲ್ಪಿಸುವ ಜವಾಬ್ದಾರಿ ಸರಕಾರಿ ವೈದ್ಯರ ಮೇಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಶನಿವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಿದ್ದ ‘ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮ’ದಲ್ಲಿ ವೈದ್ಯರಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದ ಅವರು, ಸಮಾಜದಲ್ಲಿ ತಾರತಮ್ಯ ಇರುವ ಕಾರಣಕ್ಕೆ ಉತ್ತಮ ಆರೋಗ್ಯ, ಉತ್ತಮ ಶಿಕ್ಷಣ, ಒಳ್ಳೆ ಅವಕಾಶಗಳು ಸಿಗುತ್ತಿಲ್ಲ. ಬಡವರು ಖಾಸಗಿ ಆಸ್ಪತ್ರೆಗೆ ಹೋಗುವ ಅನಿವಾರ್ಯತೆ ಬಾರದ ರೀತಿಯಲ್ಲಿ ಸರಕಾರಿ ವೈದ್ಯರು ವೃತ್ತಿಪರತೆ, ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಹಳ್ಳಿಗಳಿಂದ, ಬಡತನ, ಶೋಷಿತ, ಹಿಂದುಳಿದ ಕೌಟುಂಬಿಕ ಹಿನ್ನೆಲೆಯಿಂದ ಬರುತ್ತಿರುವ ವೈದ್ಯರ ಪ್ರಮಾಣವೆ ಹೆಚ್ಚಾಗಿದೆ. ಇವರು ಗ್ರಾಮೀಣ ಭಾಗಗಳಲ್ಲಿ ಕೆಲಸ ಮಾಡಲು ಹೆಚ್ಚು ಉತ್ಸಾಹದಿಂದ ಸ್ವಯಂಪ್ರೇರಿತವಾಗಿ ಮುಂದೆ ಬರಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬರುವ ರೋಗಿಗಳು ತಮ್ಮದೆ ಹಿನ್ನೆಲೆಯವರು ಎನ್ನುವುದನ್ನು ಮರೆಯಬಾರದು ಎಂದು ಮುಖ್ಯಮಂತ್ರಿ ತಿಳಿಸಿದರು.

ಅಗತ್ಯ ಸವಲತ್ತುಗಳನ್ನು ತಕ್ಕ ಮಟ್ಟಿಗೆ ದೊರಕಿಸಿಕೊಟ್ಟರೂ ಗ್ರಾಮೀಣ ಭಾಗದಲ್ಲಿ ವೈದ್ಯರು ಸೇವೆ ಸಲ್ಲಿಸಲು ಹಿಂದೇಟು ಹಾಕುತ್ತಿರುವುದು ಬೇಸರದ ಸಂಗತಿ. ಸರ್ವರಿಗೂ ಉತ್ತಮ ಆರೋಗ್ಯ, ಶಿಕ್ಷಣ ಕೊಡುವುದು ಸರಕಾರದ ಕರ್ತವ್ಯ. ಜನರ ಈ ನಿರೀಕ್ಷೆಗೆ ತಕ್ಕಂತೆ ಸರಕಾರಿ ವೈದ್ಯರು, ಖಾಸಗಿ ವೈದ್ಯರು ಕರ್ತವ್ಯ ನಿರ್ವಹಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಪಶ್ಚಿಮ ಬಂಗಾಳದ ಎರಡನೆ ಮುಖ್ಯಮಂತ್ರಿ ಆಗಿದ್ದ ಬಿಧಾನ್ ಚಂದ್ರ ರಾಯ್ ಅವರು ಮುಖ್ಯಮಂತ್ರಿ ಆಗಿದ್ದಾಗಲೂ ವೈದ್ಯ ವೃತ್ತಿ ಮುಂದುವರೆಸಿದ್ದರು. ಜನರಿಗೆ ಆರೋಗ್ಯ ಸೇವೆ ನೀಡುತ್ತಿದ್ದರು. ಹೀಗಾಗಿ ಭಾರತ ರತ್ನ ಎನಿಸಿಕೊಂಡರು. ಪ್ರತಿಯೊಬ್ಬ ವೈದ್ಯರಿಗೂ ಬಿ.ಸಿ.ರಾಯ್ ಮಾದರಿ ಆಗಲು ಏಕೆ ಸಾಧ್ಯವಿಲ್ಲ ಎಂದು ಅವರು ಪ್ರಶ್ನಿಸಿದರು.

ಎಲ್ಲರೂ ಅಂಬೇಡ್ಕರ್ ಆಗಲು, ಬುದ್ದ ಆಗಲು, ಗಾಂಧಿ ಆಗಲು ಸಾಧ್ಯವಿಲ್ಲ. ಆದರೆ ಅವರ ದಾರಿಯಲ್ಲಿ ನಡೆಯಲು ಎಲ್ಲರಿಗೂ ಸಾಧ್ಯವಿದೆ. ವೈದ್ಯ ಸಮುದಾಯ ಡಾಕ್ಟರ್ ಬಿಧಾನ್ ಚಂದ್ರ ರಾಯ್ ಅವರು ಹಾಕಿಕೊಟ್ಟ ಮಾದರಿ ದಾರಿಯಲ್ಲಿ ನಡೆಯಲು ಶ್ರಮಿಸಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಪರಿಷತ್ ಮಾಜಿ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್, ಇಲಾಖೆ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. ಶಾಸಕ ರಿಝ್ವಾನ್ ಅರ್ಶದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X