Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಕಲಿ ವೋಟರ್ ಐಡಿ ತಯಾರಿಕೆ ಆರೋಪ: ರಾಜ್ಯ...

ನಕಲಿ ವೋಟರ್ ಐಡಿ ತಯಾರಿಕೆ ಆರೋಪ: ರಾಜ್ಯ ಬಿಜೆಪಿ ವಿರುದ್ಧದ ಮಾನನಷ್ಟ ಮೊಕದ್ದಮೆ ಹಿಂಪಡೆದ ರಿಝ್ವಾನ್‌ ಅರ್ಷದ್‌

ವಾರ್ತಾಭಾರತಿವಾರ್ತಾಭಾರತಿ12 Dec 2025 11:08 PM IST
share
ನಕಲಿ ವೋಟರ್ ಐಡಿ ತಯಾರಿಕೆ ಆರೋಪ: ರಾಜ್ಯ ಬಿಜೆಪಿ ವಿರುದ್ಧದ ಮಾನನಷ್ಟ ಮೊಕದ್ದಮೆ ಹಿಂಪಡೆದ ರಿಝ್ವಾನ್‌ ಅರ್ಷದ್‌

ಬೆಂಗಳೂರು: ಮತದಾರರ ನಕಲಿ ಗುರುತಿನ ಚೀಟಿ ತಯಾರಿಸುತ್ತಿದ್ದಾರೆಂದು ಆರೋಪಿಸಿ 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮಾಡಲಾಗಿದ್ದ ಟ್ವೀಟ್‌ಗಳ‌ನ್ನು ಅಳಿಸಿ ಹಾಕಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯನ್ನು ಶಾಸಕ ರಿಝ್ವಾನ್‌ ಅರ್ಷದ್‌ ಹಿಂಪಡೆದಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಹಾಗೂ ಐಟಿ ಘಟಕದ ಅಧ್ಯಕ್ಷರ ವಿರುದ್ಧ ಶಿವಾಜಿನಗರ ಕಾಂಗ್ರೆಸ್ ಶಾಸಕ ರಿಝ್ವಾನ್‌ ಅರ್ಷದ್ ಸಲ್ಲಿಸಿದ್ದ ಖಾಸಗಿ ದೂರಿನ ಕುರಿತು ನಗರದ 42ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ (ಎಸಿಜೆಎಂ) ಕೆ.ಎನ್‌. ಶಿವಕುಮಾರ್ ಅವರು ಶುಕ್ರವಾರ ವಿಚಾರಣೆ ನಡೆಸಿದರು.

ರಿಝ್ವಾನ್‌ ಪರ ವಕೀಲರಾದ ಸೂರ್ಯ ಮುಕುಂದರಾಜ್‌ ಹಾಗೂ ಸಂಜಯ್ ಯಾದವ್‌ ಹಾಜರಾಗಿ, ದೂರುದಾರರ ಬಗ್ಗೆ ಆಧಾರರಹಿತ ಆರೋಪಗಳನ್ನು ಮಾಡಿ ಟ್ವಿಟರ್‌ನಲ್ಲಿ ಪೋಸ್ಟ್‌ ಹಾಕಿದ್ದರಿಂದ ಈ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು. ಇದೀಗ, ಆಕ್ಷೇಪಾರ್ಹ ಟ್ವೀಟ್‌ಗಳ ಲಿಂಕ್‌ಗಳನ್ನು ತೆಗೆದು ಹಾಕಲಾಗಿದ್ದು, ಈ ಸಂಬಂಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಡಿಸೆಂಬರ್ 8ರಂದು ನ್ಯಾಯಾಲಯಕ್ಕೆ ಮೆಮೊ ಸಲ್ಲಿಸಿದ್ದಾರೆ. ಟ್ವೀಟ್‌ಗಳನ್ನು ತೆಗೆದುಹಾಕಿರುವುದರಿಂದ ಅದರಲ್ಲಿ ಮಾಡಲಾಗಿದ್ದ ಆರೋಪಗಳನ್ನೂ ಹಿಂಪಡೆದಂತಾಗಿದ್ದು, ದೂರುದಾರರು ಪ್ರಕರಣವನ್ನು ಮುಂದುವರಿಸುವ ಅಪೇಕ್ಷೆ ಹೊಂದಿಲ್ಲ. ಆದ್ದರಿಂದ, ಆರೋಪಿಗಳ ಮೆಮೊ ಪರಿಗಣಿಸಿ, ಖಾಸಗಿ ದೂರು ಹಿಂಪಡೆಯಲು ದೂರುದಾರರಿಗೆ ಅನುಮತಿ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಇದನ್ನು ಪರಿಗಣಿಸಿದ ನ್ಯಾಯಾಧೀಶರು, ಖಾಸಗಿ ದೂರು ಹಿಂಪಡೆಯಲು ಶಾಸಕ ರಿಜ್ವಾನ್ ಅರ್ಷದ್‌ಗೆ ಅನುಮತಿಸಿ, ಪ್ರಕರಣವನ್ನು ಮುಕ್ತಾಯಗೊಳಿಸಿದರು. ವಿಚಾರಣೆ ವೇಳೆ ರಿಜ್ವಾನ್ ಅರ್ಷದ್ ಖುದ್ದು ನ್ಯಾಯಾಲಯದಲ್ಲಿ ಹಾಜರಿದ್ದರು.

ಆಕ್ಷೇಪಾರ್ಹ ಟ್ವೀಟ್‌ಗಳು ಡಿಲೀಟ್:

ಖಾಸಗಿ ದೂರಿನ ಸಂಬಂಧ 2025ರ ಅಕ್ಟೋಬರ್ 28ರಂದು ನಡೆದ ವಿಚಾರಣೆ ವೇಳೆ ಬಿಜೆಪಿ ರಾಜ್ಯ ಘಟಕದ ಪರ ವಕೀಲರು, ಪ್ರಕರಣದಲ್ಲಿ ರಾಜಿ ಮಾಡಿಕೊಳ್ಳುವ ವಿಚಾರವಾಗಿ ತಮ್ಮ ಕಕ್ಷಿದಾರರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿ, ಕಾಲಾವಕಾಶ ಪಡೆದುಕೊಂಡಿದ್ದರು. ಡಿಸೆಂಬರ್ 8ರಂದು ಪ್ರಕರಣ ಮತ್ತೆ ವಿಚಾರಣೆಗೆ ಬಂದಾಗ ರಿಜ್ವಾನ್ ಅರ್ಷದ್ ವಿರುದ್ಧ ಮಾಡಲಾಗಿದ್ದ ಮೂರು ಆಕ್ಷೇಪಾರ್ಹ ಟ್ವೀಟ್‌ಗಳನ್ನು ಅಳಿಸಿ ಹಾಕಲಾಗಿದೆ ಎಂದು ತಿಳಿಸಿ, ಈ ಸಂಬಂಧ ನ್ಯಾಯಾಲಯಕ್ಕೆ ಮೆಮೊ ಸಲ್ಲಿಸಿದ್ದರು.

ಪ್ರಕರಣವೇನು?

ರಿಝ್ವಾನ್‌ ಅರ್ಷದ್‌ 2019ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ (ಸೆಂಟ್ರಲ್‌) ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ವೇಳೆ ಅವರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಯೂತ್ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಇಬ್ರಾಹಿಂ ಖಲೀಲುಲ್ಲಾ ಅವರನ್ನು ಬಿಜೆಪಿ ಮಾಡಿದ್ದ ಆರೋಪದಡಿ ಬಂಧಿಸಲಾಗಿತ್ತು.

ಈ ಕುರಿತು 2019ರ ಎಪ್ರಿಲ್ 15ರಂದು ಬಿಜೆಪಿ ಕರ್ನಾಟಕ ಟ್ವಿಟರ್ ಹ್ಯಾಂಡಲ್‌ನಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಿ, ಇಬ್ರಾಹಿಂ ಖಲೀಲುಲ್ಲಾ ಅವರು ರಿಜ್ವಾನ್‌ ಅರ್ಷದ್‌ ಪರವಾಗಿ ಕೆಜಿ‌ ರಸ್ತೆಯ ಪ್ರಭಾತ್‌ ಕಾಂಪ್ಲೆಕ್ಸ್‌ನ ಮೂರನೇ ಮಹಡಿಯ ಕೊಠಡಿ ಸಂಖ್ಯೆ 507ರಲ್ಲಿ ನಕಲಿ ಮತದಾರರ ಗುರುತಿನ ಚೀಟಿಗಳನ್ನು ಮುದ್ರಿಸುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಬಿತ್ತರಿಸಿದ್ದ ಬಿಜೆಪಿ, ರಿಝ್ವಾನ್‌ ಅರ್ಷದ್ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿತ್ತು.

ಇದರಿಂದ, 2019ರ ಮೇ 22ರಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದ ರಿಝ್ವಾನ್‌ ಅರ್ಷದ್, ಯಾವುದೇ ಅಕ್ರಮ ನಡೆದಿಲ್ಲವೆಂದು ಮುಖ್ಯ ಚುನಾವಣಾಧಿಕಾರಿಗಳೇ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಸಮಾಜದಲ್ಲಿ ನನ್ನ ಘನತೆಗೆ ಧಕ್ಕೆ ತರುವ ಏಕೈಕ ಉದ್ದೇಶದಿಂದ ಬಿಜೆಪಿ ಸುಳ್ಳು ಹಾಗೂ ಆಧಾರರಹಿತ ವಿಷಯವನ್ನು ಹಬ್ಬಿಸಿದೆ. ಇದರಿಂದ, ನನಗೆ, ನನ್ನ ಕುಟುಂಬ ಸದಸ್ಯರಿಗೆ, ನನ್ನ ಪಕ್ಷ ಹಾಗೂ ಪಕ್ಷದ ಕಾರ್ಯಕರ್ತರಿಗೆ ಮಾನಸಿಕ ಹಿಂಸೆಯಾಗಿದೆ. ಆದ್ದರಿಂದ, ಆರೋಪಿಗಳಾದ ಬಿಜೆಪಿಯ ರಾಜ್ಯ ಘಟಕದ ಅಂದಿನ ಅಧ್ಯಕ್ಷರು ಹಾಗೂ ಐಟಿ ಸೆಲ್‌ ಅಧ್ಯಕ್ಷರ ವಿರುದ್ಧ ಐಪಿಸಿ ಸೆಕ್ಷನ್ 499 (ಮಾನಹಾನಿ), ಸೆಕ್ಷನ್ 500 (ಮಾನಹಾನಿಗೆ ಶಿಕ್ಷೆ) ಅಡಿಯಲ್ಲಿ ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X