Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೇಶ ಆಳಬೇಕಿದ್ದವರು ಕೂಲಿಕಾರರಾಗಿದ್ದಾರೆ...

ದೇಶ ಆಳಬೇಕಿದ್ದವರು ಕೂಲಿಕಾರರಾಗಿದ್ದಾರೆ : ಸತೀಶ್ ಜಾರಕಿಹೊಳಿ

‘ರಾಮೇನಹಳ್ಳಿ ಟು ವಿಶ್ವಸಂಸ್ಥೆ’ ಪುಸ್ತಕ ಬಿಡುಗಡೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ7 Oct 2026 11:41 PM IST
share
ದೇಶ ಆಳಬೇಕಿದ್ದವರು ಕೂಲಿಕಾರರಾಗಿದ್ದಾರೆ : ಸತೀಶ್ ಜಾರಕಿಹೊಳಿ

ಬೆಂಗಳೂರು : ಯಾರು ಈ ದೇಶವನ್ನು ಆಳಬೇಕಾಗಿತ್ತೋ, ಅವರು ಇವತ್ತು ಕೂಲಿಕಾರರಾಗಿದ್ದಾರೆ. ಯಾರು ಇಲ್ಲಿಗೆ ಕೆಲಸ ಹುಡುಕಿಕೊಂಡು ಬಂದಿದ್ದರೋ, ಅವರು ದೇಶ ಆಳುತ್ತಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಬುಧವಾರ ನಗರದ ಡಾ.ಮನಮೋಹನ್ ಸಿಂಗ್ ಬೆಂಗಳೂರು ಕೇಂದ್ರ ವಿವಿಯ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಡಾ.ಚಂದ್ರಶೇಖರ್ ಆರ್.ವಿ. ಅವರ ‘ರಾಮೇನಹಳ್ಳಿ ಟು ವಿಶ್ವಸಂಸ್ಥೆ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಈ ದೇಶವನ್ನು ಆಳಬೇಕಾದಂತಹ ದಲಿತರು ಕೂಲಿಕಾರರಾಗಿರುವುದು ದುರಂತ. ಭಾರತದ ಮೂಲ ನಿವಾಸಿಗಳಾಗಿರುವ ದಲಿತರ ಪರಿಸ್ಥಿತಿ ಇಂದು ಏನಾಗಿದೆ? ನಾಲ್ಕನೇ ದರ್ಜೆ ನೌಕರಿ ಸಿಕ್ಕರೆ ಸಾಕು ಎಂಬ ಮನಸ್ಥಿತಿ ದಲಿತರಿಗಿದೆ. ಡ್ರೈವರ್‌ಗಳು, ಕಸ ಹೊಡೆಯುವವರು, ಶೌಚಾಲಯ ಸ್ವಚ್ಛಗೊಳಿಸುವ ಕೆಲಸಗಳಲ್ಲಿ ದೇಶದ ಮೂಲ ನಿವಾಸಿಗಳು ಕಾಣಿಸಿಕೊಳ್ಳುತ್ತಾರೆ ಎಂದು ಸತೀಶ್ ಜಾರಕಿಹೊಳಿ ಬೇಸರ ವ್ಯಕ್ತಪಡಿಸಿದರು.

ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಮಾತನಾಡಿ, ಡಾ.ಚಂದ್ರಶೇಖರ್ ಅವರು ನಾನು ಕಂಡಂತಹ ಅತ್ಯಂತ ಅಪರೂಪದ ಸಂಶೋಧಕ. ಎಲ್ಲಕ್ಕಿಂತಲೂ ಮುಖ್ಯವಾಗಿ ಬಹಳ ಒಳ್ಳೆಯ ಆ್ಯಕ್ಟಿವಿಸ್ಟ್. ಜನರ ಜೊತೆಗೆ ಬೆರೆತು, ಜನರ ನೋವನ್ನು ಪ್ರತ್ಯಕ್ಷವಾಗಿ ಅರಿತು, ಅವರ ಕಷ್ಟ-ಕಾರ್ಪಣ್ಯಗಳ ಬಗ್ಗೆ, ವಿಶೇಷವಾಗಿ ಜಾತಿಯಿಂದ ಬಂದಿರುವಂತಹ ಎಲ್ಲ ಸಂಕೋಲೆ, ತಾರತಮ್ಯಗಳ ಬಗ್ಗೆ ಅವಿರತವಾಗಿ ಹೋರಾಟ ಮಾಡುತ್ತಿರುವ ಡಾ.ಚಂದ್ರಶೇಖರ್ ಅವರು ವಿಶ್ವಸಂಸ್ಥೆಗೆ ಹೋಗಿ ಬಂದದ್ದು ನಮ್ಮೆಲ್ಲರಿಗೂ ಸಂತಸದ ವಿಚಾರ ಎಂದರು.

ಕಾರ್ಯಕ್ರಮದಲ್ಲಿ ಕುವೆಂಪು ವಿವಿ ನಿಕಟಪೂರ್ವ ಕುಲಪತಿ ಪ್ರೊ.ಜೋಗನ್ ಶಂಕರ್, ಸಖಿ ಸಂಸ್ಥೆಯ ನಿರ್ದೇಶಕಿ ಡಾ.ಭಾಗ್ಯಲಕ್ಷ್ಮೀ, ಸಮಾಜಶಾಸ್ತ್ರಜ್ಞ ಡಾ.ಸಿ.ಜಿ.ಲಕ್ಷ್ಮೀಪತಿ ಮಾತನಾಡಿದರು. ಹಿರಿಯ ಪತ್ರಕರ್ತ ಸುಬ್ರಹ್ಮಣ್ಯ ಎಚ್.ಎಂ., ತಮಟೆ ಸಂಸ್ಥೆ ನಿರ್ದೇಶಕ ಡಾ.ಕೆ.ಬಿ.ಓಬಳೇಶ್ ಉಪಸ್ಥಿತರಿದ್ದರು.

ಸಮಾಜದಲ್ಲಿನ ಶ್ರೇಣಿಕೃತ ವ್ಯವಸ್ಥೆ ಕುರಿತು ದಲಿತರಿಗೆ ಸ್ವತಃ ತಿಳುವಳಿಕೆ ಬರಬೇಕು ಆಗ ಮಾತ್ರ ಬದಲಾವಣೆ ಸಾಧ್ಯ. ಇಲ್ಲದಿದ್ದರೆ ಯಾವುದೇ ಸರಕಾರ ಬಂದರೂ ಏನನ್ನೂ ಮಾಡಲು ಆಗುವುದಿಲ್ಲ. ಮೊದಲಾಗಿ ದಲಿತರೇ ಸಿಎಂ ಆದರೂ ಕೂಡ ಬದಲಾವಣೆ ಆಗಲು ಸಾಧ್ಯವಿಲ್ಲ. ಎ-ದರ್ಜೆಯ ಕೆಲಸಗಳು, ವಿಧಾನಸೌಧ, ವಿಧಾನಸಭೆ, ಸಂಸತ್ ಕಡೆಗೆ ದಲಿತರ ಚಿಂತನೆಗಳಿರಬೇಕು.

ಸತೀಶ್ ಜಾರಕಿಹೊಳಿ, ಸಚಿವ

Tags

Satish Jarakiholi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X