ಹಿರಿಯ ಪತ್ರಕರ್ತ ಮಹೇಶ್ ಕುಮಾರ್ ನಿಧನ

ಬೆಂಗಳೂರು: ‘ನಾವು ಕನ್ನಡಿಗರು’ ದಿನಪತ್ರಿಕೆ ಸಂಪಾದಕ ಹಾಗೂ ಹಿರಿಯ ಪತ್ರಕರ್ತ ಮಹೇಶ್‍ಕುಮಾರ್ ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಎನ್.ಎಸ್.ಮಹೇಶ್ ಕುಮಾರ್ ಅವರಿಗೆ 53 ವರ್ಷ ವಯಸ್ಸಾಗಿತು. ಪತ್ನಿ, ಪುತ್ರಿ-ಪುತ್ರ ಹಾಗೂ ಅಪಾರ ಸಂಖ್ಯೆಯ ಬಂಧು-ಮಿತ್ರರನ್ನು ಅಗಲಿದ್ದಾರೆ. ಕೆಂಗೇರಿ ಉಪನಗರದಲ್ಲಿ ವಾಸ ಮಾಡುತ್ತಿದ್ದ ಮಹೇಶ್ ಕುಮಾರ್, ಸೆ.24ರಂದು ವಿಧಾನಸಭೆ ಕಲಾಪದ ವರದಿಗಾರಿಕೆಗಾಗಿ ಹಾಜರಾಗಿದ್ದು, ಬಳಿಕ ಮನೆಗೆ ಹಿಂದಿರುಗಿದ್ದರು.
ಸಂಜೆ 7ಗಂಟೆಯ ಸುಮಾರಿಗೆ ಮನೆಯಲ್ಲಿ ಪೂಜೆ ಮಾಡಿದ ಬಳಿಕ ಏಕಾಏಕಿ ಕುಸಿದುಬಿದ್ದಿದ್ದಾರೆ ಎಂದು ಹೇಳಲಾಗಿದೆ. ಕೂಡಲೇ ಅವರನ್ನು ಅವರ ಪುತ್ರ ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಹೃದಯಾಘಾತದಿಂದ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಗೊತ್ತಾಗಿದೆ.
ಸೆ.25ರ ಮಧ್ಯಾಹ್ನ 1:30ರ ಸುಮಾರಿಗೆ ಇಲ್ಲಿನ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮಹೇಶ್ ಕುಮಾರ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪ್ರೆಸ್‍ಕ್ಲಬ್‍ನ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.




