Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಿರಿಯ ಪತ್ರಕರ್ತ ಅ.ಚ.ಶಿವಣ್ಣ ನಿಧನ

ಹಿರಿಯ ಪತ್ರಕರ್ತ ಅ.ಚ.ಶಿವಣ್ಣ ನಿಧನ

ವಾರ್ತಾಭಾರತಿವಾರ್ತಾಭಾರತಿ28 Nov 2025 8:04 PM IST
share
ಹಿರಿಯ ಪತ್ರಕರ್ತ ಅ.ಚ.ಶಿವಣ್ಣ ನಿಧನ

ಬೆಂಗಳೂರು: ಹಿರಿಯ ಪತ್ರಕರ್ತ ಅ.ಚ.ಶಿವಣ್ಣ (84) ಅವರು ಶುಕ್ರವಾರ ಮಧ್ಯಾಹ್ನ ನಿಧನರಾಗಿದ್ದಾರೆ.

ಪತ್ನಿ ಇಂದಿರಾ, ಪುತ್ರ ವಿಕ್ಟೋರಿಯಾ ಆಸ್ಪತ್ರೆಯ ತಜ್ಞ ವೈದ್ಯ ಡಾ.ದೀಪಕ್ ಸೇರಿದಂತೆ ಅಪಾರ ಸಂಖ್ಯೆಯ ಬಂಧು-ಮಿತ್ರರು ಹಾಗೂ ಸಹೋದ್ಯೋಗಿಗಳನ್ನು ಶ್ರೀಯುತರು ಅಗಲಿದ್ದಾರೆ. ಮಾಧ್ಯಮ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಚಿರಪರಿಚಿತರಾಗಿದ್ದ ಶಿವಣ್ಣ, ತಮ್ಮ ಮನೆಯಲ್ಲೇ ಮಧ್ಯಾಹ್ನ ಮೃತಪಟ್ಟಿದ್ದಾರೆ ಎಂದು ಗೊತ್ತಾಗಿದೆ.

1941ರ ಡಿಸೆಂಬರ್ 10ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಸಮೀಪದ ಅರಳುಮಲ್ಲಿಗೆ ಗ್ರಾಮದಲ್ಲಿ ಜನಿಸಿದ ಶಿವಣ್ಣ ಅವರು, ಶಿಕ್ಷಣವನ್ನು ಅಭ್ಯಾಸ ಮಾಡಿದ ಬಳಿಕ ದೇವನಹಳ್ಳಿ ತಾಲೂಕು ವಿಜಯಪುರ, ಅಲ್ಲಿಂದ ಬೆಂಗಳೂರಿಗೆ ಆಗಮಿಸಿ ‘ಲೋಕವಾಣಿ’ ಪತ್ರಿಕೆ ಮೂಲಕ ಪತ್ರಕರ್ತರಾಗಿ ಮಾಧ್ಯಮ ಕ್ಷೇತ್ರಕ್ಕೆ ಕಾಲಿಟ್ಟರು.

ಲೋಕವಾಣಿಯಲ್ಲಿ ವರದಿಗಾರರಾಗಿ, ಚಲನಚಿತ್ರ ವಿಮರ್ಶಕರಾಗಿ ಸೇವೆ ಸಲ್ಲಿಸಿದ ಶಿವಣ್ಣ, ಪ್ರಧಾನ ವರದಿಗಾರರಾಗಿ ಕಾರ್ಯನಿರ್ವಹಿಸಿ ಅಲ್ಲಿಂದ ಸಂಜೆವಾಣಿ ಪತ್ರಿಕೆಯಲ್ಲಿ ಸುಧೀರ್ಘ 26 ವರ್ಷಗಳ ಕಾಲ ಮುಖ್ಯವರದಿಗಾರರಾಗಿ ಕೆಲಸ ನಿರ್ವಹಿಸಿದ್ದಾರೆ. ಅಲ್ಲದೆ, ಬೆಂಗಳೂರು ಪ್ರೆಸ್‍ಕ್ಲಬ್, ಬೆಂಗಳೂರು ವರದಿಗಾರರ ಕೂಟಕ್ಕೆ ಹೊಸರೂಪ ನೀಡುವಲ್ಲಿಯೂ ಅವರ ಮಹತ್ವದ್ದು ಎಂದು ಹೇಳಲಾಗಿದೆ.

ಶಿವಣ್ಣ ಅವರ ಮಾಧ್ಯಮ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರ 1992ರಲ್ಲಿ ‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸಿದೆ. ಬೆಂಗಳೂರು ಮಹಾನಗರ ಪಾಲಿಕೆಯ ಕೆಂಪೇಗೌಡ ಪ್ರಶಸ್ತಿ(1999), ಕನ್ನಡ ಸಾಹಿತ್ಯ ಪರಿಷತ್ತಿನ ಕಿಡಿ ಶೇಷಪ್ಪ ಪ್ರಶಸ್ತಿ(1999), ಬೆಂಗಳೂರು ಪ್ರೆಸ್‍ಕ್ಲಬ್ ಪ್ರಶಸ್ತಿ ಹಾಗೂ ಕಾರ್ಯನಿರತ ಪತ್ರ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಪ್ರಶಸ್ತಿ, ಎಸ್.ವಿ.ಜಯಾಶೀಲರಾವ್ ಪ್ರಶಸ್ತಿ, ಅ.ನ.ಕೃ ಪ್ರಶಸ್ತಿಗಳು ಅವರಿಗೆ ಸಂದಿವೆ.

Tags

Senior journalistShivanna
share
ವಾರ್ತಾಭಾರತಿ
ವಾರ್ತಾಭಾರತಿ
Next Story
X