Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಕಲಿ ಸ್ವಾಮಿ, ಲೂಟಿ ರವಿ ಎಲ್ಲರಿಗೂ...

ನಕಲಿ ಸ್ವಾಮಿ, ಲೂಟಿ ರವಿ ಎಲ್ಲರಿಗೂ ಉತ್ತರ ನೀಡುತ್ತೇನೆ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ16 Oct 2023 1:18 PM IST
share
ನಕಲಿ ಸ್ವಾಮಿ, ಲೂಟಿ ರವಿ ಎಲ್ಲರಿಗೂ ಉತ್ತರ ನೀಡುತ್ತೇನೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ‘ನಾನು ಹೇಡಿ ಅಲ್ಲ, ಹೆದರಿ ಎಲ್ಲಿಯೂ ಓಡಿ ಹೋಗಲ್ಲ. ಮಾಜಿ ಸಿಎಂ, ನಕಲಿ ಸ್ವಾಮಿ, ಬ್ಲಾಕ್‍ಮೇಲ್, ಲೂಟಿ ರವಿ ಎಲ್ಲರಿಗೂ ತಕ್ಕ ಉತ್ತರ ಕೊಡುತ್ತೇನೆ. ಅವರದೆಲ್ಲ ಬಿಚ್ಚಿಡುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎಚ್‍ಡಿಕೆ, ಸಿ.ಟಿ.ರವಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ನಾಯಕರು ಸಚಿವರಿಗೆ ಹಣ ಕಲೆಕ್ಷನ್ ಮಾಡುವ ಟಾಸ್ಕ್ ನೀಡಿದೆ ಎಂಬ ವಿರೋಧ ಪಕ್ಷಗಳ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದರು.

ಹೈಕೋರ್ಟ್ ತಡೆಯಾಜ್ಞೆ ತೆರವಿಗೆ ಸಿಬಿಐ ಮಾಡಿದ್ದ ಮನವಿಯನ್ನು ತಳ್ಳಿ ಹಾಕಿರುವ ಸುಪ್ರೀಂ ಕೋರ್ಟ್, ‘ಶಿವಕುಮಾರ್ ಎಲ್ಲಿಯೂ ಓಡಿ ಹೋಗೋಲ್ಲ’ ಎಂದು ಹೇಳಿರುವ ಬಗ್ಗೆ ಗಮನ ಸೆಳೆದಾಗ, ‘ಹೌದು, ನಾನು ಎಲ್ಲಿಯೂ ಓಡಿ ಹೋಗುವುದಿಲ್ಲ. ನ್ಯಾಯಾಲಯದ ವಿಚಾರಣೆ, ನೆಲದ ಕಾನೂನನ್ನು ನಾನು ಗೌರವಿಸುತ್ತೇನೆ’ ಎಂದರು.

‘ಯಾರಿಗೆ ಏನು ಉತ್ತರ ನೀಡಬೇಕೋ ನೀಡುತ್ತೇನೆ. ಅವರಿಗೆ ಐಟಿ ಇಲಾಖೆ ಪ್ರಕ್ರಿಯೆ ಗೊತ್ತಿಲ್ಲ. ಅವರು ಏಜೆಂಟರಂತೆ ಮಾತನಾಡುತ್ತಿದ್ದಾರೆ. ಅವರಂತೆ ನಾನು ಮಾತನಾಡುವುದಿಲ್ಲ. ನಾನು ಜವಾಬ್ದಾರಿಯುತ ಸ್ಥಾನದಲ್ಲಿ ನಿಂತು ಅವರಂತೆ ಮಾತನಾಡಲು ಸಾಧ್ಯವಿಲ್ಲ. ನ್ಯಾಯಾಲಯದ ವಿಚಾರದಲ್ಲಿ ಆ ರೀತಿ ಮಾತನಾಡಿದರೆ ತಪ್ಪಾಗುತ್ತದೆ. ಅವರಿಗೆ ಉತ್ತರ ನೀಡಲು ಮುಹೂರ್ತ ಫಿಕ್ಸ್ ಮಾಡುತ್ತೇನೆ’ ಎಂದು ಅವರು ತಿಳಿಸಿದರು.

ಪ್ರತಿಪಕ್ಷದವರ ಆರೋಪಕ್ಕೆ ಹೈವೋಲ್ಟೇಜೂ ಕೊಡ್ತಿನಿ, ಲೋವೋಲ್ಟೇಜೂ ಕೊಡ್ತಿನಿ, ನಕಲಿಗೂ ಕೊಡುವೆ, ಲೂಟಿಗೂ ಕೊಡುವೆ, ಸ್ವಲ್ಪ ತಾಳ್ಮೆಯಿಂದ ಕಾಯಿರಿ. ಬಿಜೆಪಿಯವರು ಪ್ರತಿಭಟನೆ ಮಾಡಬೇಕು, ಪ್ರತಿಭಟನೆ ಮಾಡಿದರೆ ಜನರಿಗೆ ಅವರ ಎಲ್ಲ ತರಹದ ಲೂಟಿ ಬಗ್ಗೆ ಗೊತ್ತಾಗುತ್ತದೆ, ಎಲ್ಲವನ್ನೂ ಬಿಚ್ಚಿಡುತ್ತೇವೆ ಎಂದು ಶಿವಕುಮಾರ್ ಎಚ್ಚರಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಿಗೆ ಭೇಟಿ ನೀಡಿದ್ದು, ಪಕ್ಷದ ನಾಯಕರ ಜೊತೆ ನಡೆಸಿರುವ ಸಭೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ನಾನು ಪಕ್ಷದ ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಲೋಕಸಭೆ ಕ್ಷೇತ್ರಗಳಿಗೆ ಹೋಗಿ ವರದಿ ನೀಡುವಂತೆ ಮಂತ್ರಿಗಳಿಗೆ ಜವಾಬ್ದಾರಿ ನೀಡಿದ್ದೆವು. ಈ ಪ್ರಕ್ರಿಯೆ ತಡವಾಗುತ್ತಿರುವುದರಿಂದ ಅದನ್ನು ತ್ವರಿತವಾಗಿ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.

ನಿಗಮ-ಮಂಡಳಿಗಳಲ್ಲಿ ಶಾಸಕರಿಗೆ ಮಾತ್ರ ಸ್ಥಾನವೇ? ಕಾರ್ಯಕರ್ತರಿಗೂ ಸ್ಥಾನ ಸಿಗುತ್ತದೆಯೋ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಶಾಸಕರು ಹಾಗೂ ಕಾರ್ಯಕರ್ತರು ಇಬ್ಬರಿಗೂ ನೀಡಬೇಕು. ಪಕ್ಷ ಎಂದರೆ ಎಲ್ಲರೂ ಸೇರುತ್ತಾರೆ. ಎಲ್ಲರಿಗೂ ಸ್ಥಾನಮಾನ ನೀಡಬೇಕು. ಈ ವಿಚಾರವಾಗಿ ನಾನು ಹಾಗೂ ಮುಖ್ಯಮಂತ್ರಿ ಒಂದೆರಡು ದಿನದಲ್ಲಿ ಚರ್ಚೆ ಮಾಡುತ್ತೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X