Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತಾಂತ್ರಿಕ ಸಮಸ್ಯೆ ಬಗೆಹರಿದಿದ್ದು,...

ತಾಂತ್ರಿಕ ಸಮಸ್ಯೆ ಬಗೆಹರಿದಿದ್ದು, ಸಮೀಕ್ಷೆ ಚುರುಕುಗೊಳಿಸಿ: ಸಿದ್ದರಾಮಯ್ಯ ಸೂಚನೆ

ವಾರ್ತಾಭಾರತಿವಾರ್ತಾಭಾರತಿ26 Sept 2025 3:11 PM IST
share
ತಾಂತ್ರಿಕ ಸಮಸ್ಯೆ ಬಗೆಹರಿದಿದ್ದು, ಸಮೀಕ್ಷೆ ಚುರುಕುಗೊಳಿಸಿ: ಸಿದ್ದರಾಮಯ್ಯ ಸೂಚನೆ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ವಿಡಿಯೊ ಕಾನ್ಫರೆನ್ಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದರು.

* ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸೂಚನೆ ನೀಡಿದರು.

* ಸಮೀಕ್ಷೆ ಕಾರ್ಯಕ್ಕೆ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಸಮೀಕ್ಷೆ ಕಾರ್ಯವನ್ನು ಎಲ್ಲಾ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದರು.

* ರಾಜ್ಯದಲ್ಲಿ ಒಟ್ಟು 1,43,81,702 ಕುಟುಂಬಗಳ ಸಮೀಕ್ಷೆ ನಡೆಸಬೇಕಾಗಿದ್ದು, ಇದುವರೆಗೆ 2,76,016 ಕುಟುಂಬಗಳ ಸಮೀಕ್ಷೆ ಪೂರ್ಣಗೊಳಿಸಲಾಗಿದೆ. ಸಮೀಕ್ಷೆ ಕಾರ್ಯಕ್ಕೆ ಒಟ್ಟು 1,20,728 ಗಣತಿದಾರರನ್ನು ನಿಯೋಜಿಸಲಾಗಿದೆ. ಒಟ್ಟು 1,22,085 ಗಣತಿ ಬ್ಲಾಕ್ಗಳನ್ನು ಗುರುತಿಸಲಾಗಿದೆ. ಅಕ್ಟೋಬರ್ 7ರ ಒಳಗಾಗಿ ಗಣತಿ ಕಾರ್ಯ ಪೂರ್ಣಗೊಳ್ಳಬೇಕು ಎಂದು ಸಿಎಂ ವಿವರಿಸಿದರು.

* ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಶಿಕ್ಷಕರು ತಮಗೆ ವಹಿಸಲಾಗಿರುವ ಕಾರ್ಯವನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಯಾವುದೇ ಶಿಕ್ಷಕರು ಗಣತಿ ಕಾರ್ಯಕ್ಕೆ ಅಸಹಕಾರ ತೋರಿಸಬಾರದು. ಇದು ಸರಕಾರಿ ಕೆಲಸವಾಗಿದ್ದು, ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಬಾರದು. ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದರು.

ಶಿಕ್ಷಕರಿಗೆ ಗೌರವಧನದ ಬಗ್ಗೆ ಯಾವುದೇ ಅನುಮಾನ ಬೇಡ. ಈಗಾಗಲೇ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಗಣತಿ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಹೇಳಿದರು.

ಇದು ಕೇವಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಮೀಕ್ಷೆಯಲ್ಲ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನಿಗದಿತ ಗುರಿಯ ಪ್ರಗತಿ ಬಗ್ಗೆ ಪ್ರತಿ ದಿನ ಪರಿಶೀಲನೆ ನಡೆಸಬೇಕು. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದ ಮುಖ್ಯಮಂತ್ರಿ, ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ನಿಧಾನಗತಿಯಲ್ಲಿದ್ದು, ಚುರುಕುಗೊಳಿಸಬೇಕು. ಅಗತ್ಯವಿರುವ ಕಡೆ ಅನುದಾನಿತ ಶಾಲೆಗಳ ಶಿಕ್ಷಕರ ಸೇವೆಯನ್ನು ಪಡೆದುಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೂ ಈ ಕುರಿತು ಸಂಪರ್ಕದಲ್ಲಿರಬೇಕು ಎಂದು ಹೇಳಿದರು.

ಸಮೀಕ್ಷೆ ಕಾರ್ಯದ ಮೇಲ್ವಿಚಾರಣೆ ನಡೆಸಲು ಪ್ರತಿ ತಾಲೂಕಿಗೆ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ, ಜಿಲ್ಲಾ ಮಟ್ಟದಲ್ಲಿ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದರೆ ಸ್ಥಳೀಯವಾಗಿ ಸಮಸ್ಯೆ ಬಗೆಹರಿಸಲು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿರುವ ಐಟಿ ತಂತ್ರಜ್ಞರ ನೆರವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

* ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯ ಇಂದಿನಿಂದ ಆರಂಭವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 50 ಲಕ್ಷ ಮನೆಗಳಿದ್ದು, ಆದಷ್ಟು ಬೇಗನೆ ಗಣತಿ ಕಾರ್ಯವನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದ ಪ್ರತಿಯೊಂದು ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಬೇಕು. ಯಾವುದೇ ಕುಟುಂಬ ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಗುಡ್ಡಗಾಡು ಪ್ರದೇಶಗಳ ವ್ಯಾಪ್ತಿಯಲ್ಲಿ ಶಾಲೆಗಳಲ್ಲಿ ಸಮೀಕ್ಷೆ ಕೇಂದ್ರಗಳನ್ನು ಆರಂಭಿಸಲು ಅವಕಾಶ ನೀಡಲಾಗಿದೆ. ಜನರು ಕೇಂದ್ರಕ್ಕೆ ಬಂದು ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಳ್ಳಬಹುದಾಗಿದೆ. ಆನ್ಲೈನ್ ಮೂಲಕ ಸಹ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು. ಸಮೀಕ್ಷೆ ಸಂದರ್ಭದಲ್ಲಿ ಮನೆಗಳಿಗೆ ಬೀಗ ಹಾಕಿದ್ದರೆ, ಅಂತಹ ಮನೆಗಳಲ್ಲೂ ಗಣತಿ ಕಾರ್ಯವನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ನಿರ್ದೇಶಿಸಿದರು.

ಪ್ರತಿ ದಿನ ಜಿಲ್ಲಾವಾರು ಕನಿಷ್ಠ ಶೇ.10ರಷ್ಟು ಸಮೀಕ್ಷೆ ಗುರಿಯನ್ನು ಸಾಧಿಸಬೇಕು. ಪ್ರಾದೇಶಿಕ ಆಯುಕ್ತರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಮೀಕ್ಷೆ ಪ್ರಗತಿಯ ಪರಿಶೀಲನೆ ನಡೆಸಬೇಕು ಎಂದು ಮುಖ್ಯಮಂತ್ರಿ ನಿರ್ದೇಶನ ನೀಡಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ಶಿವರಾಜ ತಂಗಡಗಿ, ಕೃಷ್ಣ ಭೈರೇಗೌಡ, ರಹೀಂ ಖಾನ್, ಭೈರತಿ ಸುರೇಶ್, ಮಧು ಬಂಗಾರಪ್ಪ, ಬೋಸರಾಜು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ ನಾಯ್ಕ್, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಝ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X