Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ25 Oct 2025 10:36 PM IST
share
ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: ಬೆಂಗಳೂರು ನಗರದ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ. ಪ್ರತಿ ವಿಚಾರದಲ್ಲೂ ತಡೆಯಾಜ್ಞೆ, ಆಕ್ಷೇಪಣೆ ತರುತ್ತಿದ್ದಾರೆ. ಕೋರ್ಟ್ ತಡೆಯಾಜ್ಞೆ ತರುವುದಕ್ಕೇ ಒಂದು ತಂಡವಿದೆ. ಬಿಜೆಪಿಯವರಿಗೆ ಅಭಿವೃದ್ಧಿಗಿಂತ ರಾಜಕೀಯವೇ ಮುಖ್ಯವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು.

ಶನಿವಾರ ಇಲ್ಲಿನ ಯಶವಂತಪುರ ಕ್ಷೇತ್ರದ ಹೇರೋಹಳ್ಳಿಯ ಭರತ್‍ನಗರ ಗಾಂಧಿ ಉದ್ಯಾನವನದಲ್ಲಿ ನಾಗರಿಕರ ಜತೆ ಸಂವಾದದಲ್ಲಿ ಮಾತನಾಡಿದ ಅವರು, ನೀವು ಕಸದ ವಿಚಾರ ಪ್ರಸ್ತಾಪಿಸಿದ್ದೀರಿ. ಇದು ಮೂಲಭೂತ ಸಮಸ್ಯೆಯಾಗಿದ್ದು, ಕೆಲವರು ಕೋರ್ಟ್‍ನಿಂದ ತಡೆಯಾಜ್ಞೆ ತಂದಿದ್ದಾರೆ. ಆದರೂ ನಾನು ತಡೆಯಾಜ್ಞೆ ತೆರವುಗೊಳಿಸಲು ಮನವಿ ಮಾಡುತ್ತಿದ್ದೇವೆ. ನನ್ನ ಕೈಲಾದಷ್ಟು ನಿಮಗೆ ಸಹಾಯ ಮಾಡುತ್ತೇನೆ. ಇಡೀ ವಿಶ್ವ ಬೆಂಗಳೂರನ್ನು ನೋಡುತ್ತಿದೆ. ಬೆಂಗಳೂರಿಗೆ ಹೊಸ ರೂಪ ನೀಡಲು ಮುಂದಾಗಿದ್ದೇವೆ ಎಂದರು.

ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿದೆ, ರಸ್ತೆ ಗಾತ್ರ ಮಾತ್ರ ಅಷ್ಟೇ ಇದೆ. ಹೀಗಾಗಿ ದಟ್ಟಣೆ ಹೆಚ್ಚಾಗಿದ್ದು, ಇದನ್ನು ಬಗೆಹರಿಸಲು 117ಕಿ.ಮೀ ಉದ್ಧದ ಬೆಂಗಳೂರು ಬಿಸಿನೆಸ್ ಕಾರಿಡಾರ್ ರಸ್ತೆ ನಿರ್ಮಾಣ ಮಾಡುತ್ತಿದ್ದೇವೆ. ಈಗಾಗಲೇ ಅಧಿಸೂಚನೆ ಹೊರಡಿಸಿರುವ ಜಮೀನುಗಳನ್ನು ಯಾವುದೇ ಕಾರಣಕ್ಕೂ ಡಿನೋಟಿಫಿಕೇಷನ್ ಮಾಡುವುದಿಲ್ಲ. ಸಂತ್ರಸ್ತರಿಗೆ ಅಗತ್ಯ ಪರಿಹಾರ ನೀಡುತ್ತೇವೆ. ಇದರ ಜೊತೆಗೆ ಟನಲ್ ರಸ್ತೆಗೆ ಮುಂದಾಗಿದ್ದು, ಅದಕ್ಕೂ ಸಾಕಷ್ಟು ಅಡಚಣೆ ಮಾಡುತ್ತಿದ್ದಾರೆ. ಅವರು ಏನಾದರೂ ಮಾಡಿಕೊಳ್ಳಲಿ, ನನ್ನ ಕರ್ತವ್ಯ ಮಾಡುತ್ತೇನೆ ಎಂದು ಅವರು ತಿಳಿಸಿದರು.

ಅಹವಾಲು ಸ್ವೀಕರಿಸುತ್ತೇನೆ: ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ನನಗೆ ಅರ್ಜಿ ನೀಡಲು ಯಾರಿಗೆ ಸಾಧ್ಯವಾಗಿಲ್ಲವೋ, ಅವರೆಲ್ಲರೂ ರವಿವಾರ ಕಬ್ಬನ್ ಪಾರ್ಕ್ ನಡೆಯಲಿರುವ ಕಾರ್ಯಕ್ರಮಕ್ಕೆ ಬಂದು ಅರ್ಜಿ ನೀಡಬಹುದು. ಬೆಳಗ್ಗೆ 7ರಿಂದ 10 ಗಂಟೆ ವರೆಗೂ ನಾನು ಅರ್ಜಿ ಸ್ವೀಕರಿಸುತ್ತೇನೆ. ಬೆಂಗಳೂರಿನ ಐದೂ ಪಾಲಿಕೆ ವ್ಯಾಪ್ತಿಯ ಜನರು ಬಂದು ಭೇಟಿ ಮಾಡಬಹುದು. ಮುಂದಿನ ದಿನಗಳಲ್ಲಿ ನಿರಂತರವಾಗಿ ಈ ರೀತಿಯ ಜನಸಂಪರ್ಕ ಸಭೆಗಳನ್ನು ಮಾಡಲು ವ್ಯವಸ್ಥೆ ರೂಪಿಸಲಾಗುವುದು ಎಂದು ತಿಳಿಸಿದರು.

ಬೆಂಗಳೂರು ದೊಡ್ಡ ಗಾತ್ರದಲ್ಲಿ ಬೆಳೆದಿದೆ. ಜನಸಂಖ್ಯೆ 1.40ಕೋಟಿಗೆ ಏರಿಕೆಯಾಗಿದೆ. 70ಲಕ್ಷ ಜನ ನಿತ್ಯ ಬಂದು ಹೋಗುತ್ತಾರೆ. 110 ಹಳ್ಳಿಗಳಿಗೆ ಕಾವೇರಿ ನೀರು ಒದಗಿಸಿರಲಿಲ್ಲ, ನಾನು ಬಂದ ನಂತರ ತೊರೆಕಾಡನಹಳ್ಳಿಯಿಂದ ಕಾವೇರಿ ನೀರನ್ನು ತಂದು ನಿಮಗೆ ನೀರು ಒದಗಿಸಿದ್ದೇವೆ. ಆದರೂ ಅನೇಕರು ಇದರ ಸಂಪರ್ಕ ಪಡೆದಿಲ್ಲ. ಈ ಅವಕಾಶ ಕಳೆದುಕೊಳ್ಳಬೇಡಿ. ನೀರು ಬೇರೆಡೆಗೆ ಹೋಗುತ್ತಿದೆ. ಈ ಭಾಗದ ಜನರು ಸಂಪರ್ಕ ತೆಗೆದುಕೊಳ್ಳಿ. ಸಂಪರ್ಕ ಪಡೆಯಲು ವಿವಿಧ ಕಂತುಗಳಲ್ಲಿ ಹಣ ಪಾವತಿಗೂ ಅವಕಾಶ ಕಲ್ಪಿಸಿದ್ದೇವೆ ಎಂದು ತಿಳಿಸಿದರು.

ಅವಕಾಶ ಬಳಸಿಕೊಳ್ಳಿ: ಬೆಂಗಳೂರಿನ ಆಸ್ತಿಗಳನ್ನು ‘ಬಿ' ಖಾತೆಯಿಂದ ‘ಎ' ಖಾತೆಗೆ ಪರಿವರ್ತನೆ ಮಾಡಲಾಗುತ್ತಿದೆ. ನೀವು ಕಂದಾಯ ಭೂಮಿ ತೆಗೆದುಕೊಂಡಿದ್ದು, ದಾಖಲೆಗಳು ಸರಿ ಇಲ್ಲವಾದರೆ ಯಾರಿಗೂ ಸಾಲ ಸೌಲಭ್ಯ ಸಿಗುವುದಿಲ್ಲ. ಹೀಗಾಗಿ ಇದೊಂದು ಐತಿಹಾಸಿಕ ನಿರ್ಧಾರ. ನೀವು ನಿಮ್ಮ ಆಸ್ತಿಯ ಮಾರ್ಗಸೂಚಿ ದರದ ಮೇಲಿನ ಶೇ.5ರಷ್ಟು ಹಣವನ್ನು ಪಾವತಿ ಮಾಡಿ. ‘ಎ ಖಾತಾ ಪಡೆದರೆ ನಿಮ್ಮ ಆಸ್ತಿ ಮೌಲ್ಯ ದ್ವಿಗುಣವಾಗುತ್ತದೆ. ಇನ್ನು ನಿಮ್ಮ ಆಸ್ತಿ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡಿಸುತ್ತಿದ್ದು, ಭವಿಷ್ಯದಲ್ಲಿ ಯಾರೂ ನಿಮ್ಮ ಆಸ್ತಿ ದಾಖಲೆಗಳನ್ನು ಅಕ್ರಮವಾಗಿ ತಿದ್ದುವುದಕ್ಕೆ ಆಸ್ಪದ ಇರುವುದಿಲ್ಲ ಎಂದು ಅವರು ತಿಳಿಸಿದರು.

ಜಿಬಿಎ ವ್ಯಾಪ್ತಿಗೆ ಕೆಲವು ಪ್ರದೇಶಗಳನ್ನು ಸೇರಿಸಬೇಕಾಗಿದ್ದು, ತಕ್ಷಣವೇ ಸೇರಿಸುವುದಿಲ್ಲ. ಈಗ ಚುನಾವಣೆ ಮಾಡುತ್ತೇವೆ. ಅದಾದ ನಂತರ ಯಾವ ಪ್ರದೇಶಗಳನ್ನು ಸೇರಿಸಿಕೊಳ್ಳಬೇಕೆಂದು ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಅನಂತರ ಕಾನೂನಾತ್ಮಕವಾಗಿ ಸೇರಿಸಿಕೊಳ್ಳಲಾಗುವುದು. ಇಲ್ಲಿ ಬಂದಿರುವ ಅನೇಕರು ಶಾಸಕ ಎಸ್.ಟಿ ಸೋಮಶೇಖರ್ ಕಾರ್ಯವನ್ನು ಮೆಚ್ಚಿದ್ದೀರಿ. ನೀವು ಉತ್ತಮ ಶಾಸಕರನ್ನು ಪಡೆದಿದ್ದೀರಿ. ಅವರು ನನ್ನ ಬಳಿ ಬಂದು ನಿಮ್ಮ ಕ್ಷೇತ್ರಕ್ಕೆ ಅನುದಾನ ಪಡೆದಿದ್ದಾರೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X