ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ ಹಿನ್ನೆಲೆ: ಬಿಗಿ ಪೊಲೀಸ್ ಬಂದೋಬಸ್ತ್, ಮಾರ್ಗ ಬದಲಾವಣೆ

ಸಾಂದರ್ಭಿಕ ಚಿತ್ರ (PTI)
ಬೆಂಗಳೂರು: ಬೆಂಗಳೂರಿನ ಹಳದಿ ಮಾರ್ಗದ ನಮ್ಮ ಮೆಟ್ರೋ ರೈಲು ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ರವಿವಾರ (ಆ.10) ಉದ್ಘಾಟಿಸಲಿರುವ ಹಿನ್ನೆಲೆ ನಗರದ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಕೆಲ ರಸ್ತೆಗಳಲ್ಲಿ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ.
ನಗರದ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಬಳಿಕ ಜಯನಗರ ಸಂಚಾರ ಠಾಣಾ ವ್ಯಾಪ್ತಿಯ ರಾಗಿಗುಡ್ಡ ಮೆಟ್ರೋ ನಿಲ್ದಾಣ ಬಳಿ ಹಳದಿ ಮಾರ್ಗದ ಮೆಟ್ರೋ ಮಾರ್ಗ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ಭಾಗಿಯಾಗಲಿದ್ದಾರೆ.
ಹೀಗಾಗಿ, 10ಕ್ಕೂ ಅಧಿಕ ಡಿಸಿಪಿಗಳು, 52 ಎಸಿಪಿ, 200 ಪಿಐ, 650 ಪಿಎಸ್ಸೈ, 1000 ಎ¸ಸ್ಸೈ, ಪುರುಷ ಹಾಗೂ ಮಹಿಳಾ ಕಾನ್ಸ್ಟೇಬಲ್ಗಳು 7,000 ಸೇರಿದಂತೆ ಸುಮಾರು 10 ಸಾವಿರ ಪೆÇಲೀಸರನ್ನು ಬಂದೋಬಸ್ತ್ ಗೆ ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಶನಿವಾರ ನಗರದ ಪೂರ್ವ, ಪಶ್ಚಿಮ, ಉತ್ತರ ಹಾಗೂ ಕೇಂದ್ರ ಸೇರಿದಂತೆ ವಿವಿಧ ವಿಭಾಗಳಲ್ಲಿ 32ಕ್ಕೂ ಹೆಚ್ಚು ಪೊಲೀಸರು ನಾಕಾಬಂದಿ ಹಾಕಿ ತಪಾಸಣೆ ನಡೆಸಿ ಅನುಮಾನಾಸ್ಪದ ವಸ್ತುಗಳನ್ನು ಪರಿಶೀಲಿಸಿದರು. ಜತೆಗೆ, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಜಮಾವಣೆ ಹಾಗೂ ವಾಹನ ಸಂಚಾರ ಹೆಚ್ಚಳವಾಗುವ ಸಾಧ್ಯತೆಯಿದ್ದು, ಸಂಚಾರ ಹಿತದೃಷ್ಟಿಯಿಂದ ಕೆಲ ಮಾರ್ಪಾಡುಗಳನ್ನು ಪೊಲೀಸರು ಮಾಡಿದ್ದಾರೆ.
ಪ್ರಮುಖವಾಗಿ ಮಾರೇನಹಳ್ಳಿ ಮುಖ್ಯರಸ್ತೆಯ ರಾಜಲಕ್ಷ್ಮೀ ಜಂಕ್ಷನ್ನಿಂದ ಮಾರೇನಹಳ್ಳಿ 18ನೆ ಮುಖ್ಯರಸ್ತೆಯವರೆಗೆ ಹಾಗೂ ಮಾರೇನಹಳ್ಳಿ ಈಸ್ಟ್ ಎಂಡ್ ಮುಖ್ಯರಸ್ತೆ ಜಂಕ್ಷನ್ನಿಂದ ಅರವಿಂದ ಜಂಕ್ಷನ್ವರೆಗೆ ಬೆಳಗ್ಗೆ 8.30 ರಿಂದ ಮಧ್ಯಾಹ್ನ 12.30ರವರೆಗೆ ಸಂಚಾರ ನಿರ್ಬಂಧಿಸಲಾಗಿದೆ.
ಬೆಳಗ್ಗೆ 9:30 ರಿಂದ 2:30ರವರೆಗೆ ಸಿಲ್ಕ್ ಬೋರ್ಡ್ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಮೇಲ್ಸುತುವೆ ಮತ್ತು ಹೊಸೂರು ರಸ್ತೆ ಮೂಲಕ ಹೊಸೂರು ಕಡೆಗೆ, ಹೊಸೂರು ಕಡೆಯಿಂದ ಬೆಂಗಳೂರು ನಗರದ ಕಡೆಗೆ ಎಲೆಕ್ಟ್ರಾನಿಕ್ ಸಿಟಿ 1ನೆ ಹಂತದ ಇನ್ಫೋಸಿಸ್ ಅವೆನ್ಯೂ, ವೇಲಾಂಕಣಿ ರಸ್ತೆ, ಎಚ್ಪಿ ಅವೆನ್ಯೂ ರಸ್ತೆಯಲ್ಲಿ ನಿಗದಿತ ಅವಧಿಯಲ್ಲಿ ವಾಹನ ಸಂಚಾರ ನಿಬರ್ಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.







