ಬೆಂಗಳೂರು | ಆಸ್ತಿ ಹಂಚಿಕೆ ವಿಚಾರವಾಗಿ ಗಲಾಟೆ: ನಿವೃತ್ತ ಸಬ್ ಇನ್‍ಸ್ಪೆಕ್ಟರ್ ಸಹಿತ ಇಬ್ಬರು ಪೊಲೀಸ್ ವಶಕ್ಕೆ

ಬೆಂಗಳೂರು: ಆಸ್ತಿ ಹಂಚಿಕೆ ವಿಚಾರವಾಗಿ ಗಲಾಟೆ ನಡೆದು ತಂಗಿಯ ಮಗನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪದಡಿ ನಿವೃತ್ತ ಸಬ್ ಇನ್‍ಸ್ಪೆಕ್ಟರ್ ಮತ್ತು ಅವರ ಮಗನನ್ನು ಮಾದನಾಯಕನಹಳ್ಳಿ ಠಾಣಾ ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ.
ನೆಲಮಂಗಲ ಬಳಿಯ ಚಿಕ್ಕಬಿದರಕಲ್ಲು ಬಳಿ ಘಟನೆ ನಡೆದಿದೆ. ಆಸ್ತಿ ಹಂಚಿಕೆ ವಿಚಾರವಾಗಿ ಸಂಬಂಧಿಗಳ ನಡುವೆ ಹಲವು ದಿನಗಳಿಂದ ಕಲಹ ಇತ್ತು. ನ.12ರಂದು ಬೆಳಗ್ಗೆ ಇದೇ ವಿಚಾರಕ್ಕೆ ಗಲಾಟೆ ನಡೆದು 35 ವರ್ಷದ ವಿವೇಕ್ ಎಂಬುವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ಆರೋಪಿಗಳಾದ ನಿವೃತ್ತ ಸಬ್ ಇನ್‍ಸ್ಪೆಕ್ಟರ್ ಜಯಣ್ಣ ಮತ್ತು ಅವರ ಮಗ ವಿಶ್ವಾಸ್‍ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ.
Next Story





