Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಯೋಗಾಭ್ಯಾಸ...

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಯೋಗಾಭ್ಯಾಸ ಅಗತ್ಯ: ಸಚಿವ ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ21 Jun 2026 7:03 PM IST
share
ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಯೋಗಾಭ್ಯಾಸ ಅಗತ್ಯ: ಸಚಿವ ಯು.ಟಿ.ಖಾದರ್

ಬೆಂಗಳೂರು: ಆರೋಗ್ಯಕರವಾದ ಸಮಾಜ ನಿರ್ಮಾಣಕ್ಕೆ ಯೋಗಾಭ್ಯಾಸ ಮಾಡುವುದು ಅತ್ಯಂತ ಅಗತ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ನಗರದ ವಿಧಾನಸೌಧ ಮುಂಭಾಗದಲ್ಲಿ ಆಯುಷ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ‘ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ' ಎಂಬ ಘೋಷವಾಕ್ಯದಡಿ 12ನೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗ ಅಗತ್ಯವಾಗಿದ್ದು, ನಾವು ಮಾತ್ರವಲ್ಲ ಎಲ್ಲರೂ ಯೋಗವನ್ನು ತಮ್ಮ ದಿನಚರಿಯಲ್ಲಿ ಅಳವಡಿಸಿಕೊಂಡಾಗ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.

ಇಂದು ಯೋಗ ನಮ್ಮ ದೇಶ ಮಾತ್ರವಲ್ಲ ವಿದೇಶಕ್ಕೂ ಹಬ್ಬಿದೆ. ಯೋಗ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರದೆ, ಪ್ರತಿದಿನವೂ ಯೋಗದಿನವಾಗಬೇಕು. ನಾವು ಮುಂದಿನ ಪೀಳಿಗೆಗೆ ಯೋಗ ಮಾಡುವುದನ್ನು ವರ್ಗಾಯಿಸಬೇಕು. ಗ್ರಾಮ ಗ್ರಾಮಕ್ಕೂ ಯೋಗ ವಿಸ್ತರಿಸುತ್ತೇವೆ. ಈಗಾಗಲೇ ಹಲವು ಗ್ರಾಮದಲ್ಲಿ ಯೋಗ ಗುರುಗಳಿದ್ದಾರೆ. ಇದನ್ನು ಎಲ್ಲ ಜಿಲ್ಲೆಗಳಿಗೆ ವಿಸ್ತರಿಸಬೇಕಿದೆ. ಸಿಎಂ ಮುಂಬೈಯಲ್ಲಿದ್ದಾರೆ. ಡಿಸಿಎಂಗೆ ಅನಾರೋಗ್ಯ ಅದಕ್ಕೆ ಕಾರ್ಯಕ್ರಮಕ್ಕೆ ಬಂದಿಲ್ಲ. ಸಾವಿರಾರು ಜನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ಮೂಲಕ ರಾಜ್ಯಕ್ಕೆ ಉತ್ತಮ ಸಂದೇಶ ನೀಡಿದ್ದಾರೆ ಎಂದು ಸಚಿವ ಖಾದರ್ ಹೇಳಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾತನಾಡಿ, ಯೋಗ, ಸಾವಿರಾರು ವರ್ಷಗಳ ಪುರಾತನವಾದದ್ದು. ಮಾನವನ ಆರೋಗ್ಯಕ್ಕೆ ಮಾರ್ಗ ತೋರಿಸಿದ್ದು ಯೋಗ. ಮನಸ್ಸು, ಶರೀರದ ಏಕತೆಗೆ ಯೋಗ ಮುಖ್ಯ. ಇಂದು ಜಗತ್ತು ಸ್ಪರ್ಧೆಗೆ ಬಿದ್ದಿದೆ. ಇದರಿಂದ ಮಾನಸಿಕ ಮತ್ತು ಶರೀರದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಹೀಗಾಗಿ ಮೋದಿಯವರು ಅಂತರಾಷ್ಟ್ರೀಯ ಯೋಗ ದಿನ ಅಂತ 12 ವರ್ಷಗಳ ಹಿಂದೆ ಘೋಷಣೆ ಮಾಡಿದರು ಎಂದು ತಿಳಿಸಿದರು.

ಯುವ ಸಮೂಹ ಪ್ರತಿದಿನ ಯೋಗಕ್ಕೆ ಸಮಯ ಮೀಸಲಿಡಬೇಕು. ಉತ್ತಮ ಆರೋಗ್ಯಕ್ಕಾಗಿ ಯೋಗ ಎಂಬ ಘೋಷಣೆ ಅನ್ವಯ ಯೋಗ ದಿನ ಆಚರಿಸಲಾಗುತ್ತದೆ. ಯೋಗವನ್ನು ಜೀವನದ ಅಂಗವಾಗಿ ಮಾಡಿಕೊಳ್ಳಬೇಕಾಗಿದೆ. ಈ ಕುರಿತು ರಾಜ್ಯ ಸರಕಾರ ಯೋಗದ ಪ್ರಚಾರ ಹಾಗೂ ಜಾಗೃತಿ ಮೂಡಿಸುತ್ತಿದೆ ಎಂದು ಥಾವರ್ ಚಂದ್‍ಗೆಹ್ಲೋಟ್ ನುಡಿದರು.

ಕಾರ್ಯಕ್ರಮದಲ್ಲಿ ನಟಿಯರಾದ ಸುಧಾರಾಣಿ, ಹರಿಪ್ರಿಯಾ, ನಟ ವಶಿಷ್ಠ ಸಿಂಹ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

ವಿಧಾನಸೌಧ ಮುಂಭಾಗದಲ್ಲಿ ಯೋಗ ದಿನಾಚರಣೆಯ ಪ್ರಯುಕ್ತ ಹಲವು ಯೋಗ ಸಂಘಟನೆಗಳಿಂದ ಯೋಗ ಪ್ರದರ್ಶನ ನಡೆಯಿತು. ಈ ವೇಳೆಯಲ್ಲಿ, ಏಳುಬಾರಿ ವಿಶ್ವದಾಖಲೆ ಮಾಡಿರುವ ಬೆಳಗಾವಿ ಮಲ್ಲಗಂಭ ಅಕಾಡೆಮಿ ವತಿಯಿಂದ ನಡೆದ ಮಲ್ಲಗಂಭ ಪ್ರದರ್ಶನವು ಯೋಗ ಪಟುಗಳ ಗಮನ ಸೆಳೆಯಿತು. ಈ ಅಕಾಡೆಮಿಯು ಹಲವು ದೇಶಗಳಲ್ಲಿ ಪ್ರದರ್ಶನ ನೀಡಿದೆ.

Tags

International Yoga DayUT Khader
share
ವಾರ್ತಾಭಾರತಿ
ವಾರ್ತಾಭಾರತಿ
Next Story
X