Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೇಲೂರಿನಲ್ಲಿ ಅಂಬಾಭವಾನಿ ಜಾತ್ರೆಯ ವೈಭವ...

ಬೇಲೂರಿನಲ್ಲಿ ಅಂಬಾಭವಾನಿ ಜಾತ್ರೆಯ ವೈಭವ : 15 ದಿನಗಳ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ತೆರೆ

ವಾರ್ತಾಭಾರತಿವಾರ್ತಾಭಾರತಿ26 Oct 2026 6:51 PM IST
share
ಬೇಲೂರಿನಲ್ಲಿ ಅಂಬಾಭವಾನಿ ಜಾತ್ರೆಯ ವೈಭವ : 15 ದಿನಗಳ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ತೆರೆ

ಹುಲಸೂರು : ತಾಲೂಕಿನ ಬೇಲೂರ್‌ ಗ್ರಾಮದಲ್ಲಿ ಅಂಬಾಭವಾನಿ ಜಾತ್ರಾ ಮಹೋತ್ಸವ ಮೈಸೂರು ದಸರಾ ವೈಭವವನ್ನು ನೆನಪಿಸುವಂತೆ ಅದ್ದೂರಿಯಾಗಿ ನಡೆಯಿತು. 79 ವರ್ಷಗಳಿಂದ ನಿರಂತರವಾಗಿ ಆಚರಿಸಿಕೊಂಡು ಬರುತ್ತಿರುವ ಗ್ರಾಮ ದೇವತೆ ಅಂಬಾಭವಾನಿಯ ಜಾತ್ರೆಯಲ್ಲಿ ಅಂಬಾರಿ ಹೊತ್ತ ಆನೆಯ ಭವ್ಯ ಮೆರವಣಿಗೆ, ವಿವಿಧ ಸಾಂಸ್ಕೃತಿಕ ಕಲಾತಂಡಗಳ ಪ್ರದರ್ಶನ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಭಕ್ತರ ಗಮನ ಸೆಳೆದವು.

ಗ್ರಾಮದಲ್ಲಿ 15 ದಿನಗಳ ಕಾಲ ನಡೆದ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವರ್ಷದಿಂದ ವರ್ಷಕ್ಕೆ ಉತ್ಸವದ ವೈಭವ ಹೆಚ್ಚುತ್ತಿದ್ದು, ಗ್ರಾಮದಾದ್ಯಂತ ಬಣ್ಣಬಣ್ಣದ ವಿದ್ಯುತ್ ದೀಪಗಳ ಅಲಂಕಾರ ಕಂಗೊಳಿಸಿತು. ರಾಜ್ಯದ ವಿವಿಧ ಭಾಗಗಳ ಕಲಾವಿದರು, ಶಾಲಾ ಮಕ್ಕಳು ಹಾಗೂ ಭಕ್ತರು ಉತ್ಸವದಲ್ಲಿ ಪಾಲ್ಗೊಂಡಿದ್ದರು.

ಅಂಬಾರಿ ಹೊತ್ತ ಆನೆಯ ಭವ್ಯ ಮೆರವಣಿಗೆ : ಅಶ್ವಿನಿ ಹುಣ್ಣಿಮೆಯಂದು ಅಂಬಾಭವಾನಿ ಉತ್ಸವ ಮೂರ್ತಿಯೊಂದಿಗೆ ಅಂಬಾರಿ ಹೊತ್ತ ಆನೆಯ ಭವ್ಯ ಮೆರವಣಿಗೆ ನಡೆಯಿತು. ಮೆರವಣಿಗೆಗೆ ಶಾಸಕ ಶರಣು ಸಲಗರ ಚಾಲನೆ ನೀಡಿದರು. ಮೆರವಣಿಗೆಯು ಅಂಬಾಭವಾನಿ ದೇವಸ್ಥಾನದಿಂದ ಮುಖ್ಯ ರಸ್ತೆಯ ಮೂಲಕ ಬಸವೇಶ್ವರ ವೃತ್ತದವರೆಗೆ ಸಾಗಿತು. ದೇವಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ಆನೆಯ ಮೇಲೆ ಅಂಬಾರಿಯಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಮೆರವಣಿಗೆ ನಡೆಸಲಾಯಿತು.

ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ವೀರಗಾಸೆ, ಕಂಸಾಳೆ, ಯಕ್ಷಗಾನ, ಬಯಲಾಟ ಹಾಗೂ ಗೋರವರ ಕುಣಿತ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಿದ್ದವು. ಡಿಜೆ ಸಂಗೀತಕ್ಕೆ ಯುವಕರು ಹೆಜ್ಜೆ ಹಾಕಿದರು.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್‌ ಖಂಡ್ರೆ ಅವರು ಭವಾನಿ ಮಂದಿರಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಈ ವೇಳೆ ಮಾತನಾಡಿದ ಅವರು, ‘ಶಕ್ತಿಯ ಸಂಕೇತವಾಗಿರುವ ಅಂಬಾಭವಾನಿ ದೇವಿಯು ದುಷ್ಟರ ಸಂಹಾರ ಮಾಡಿ ಶಿಷ್ಟರ ಸಂರಕ್ಷಣೆ ಮಾಡುವ ತಾಯಿ. ಸ್ತ್ರೀ ಸಬಲೀಕರಣ ಹಾಗೂ ನಾರಿಶಕ್ತಿಯ ಸಂಕೇತವೂ ಆಗಿದ್ದಾಳೆ. ರಾಜ್ಯವನ್ನು ಕಾಡುತ್ತಿರುವ ಬರಗಾಲ ಬೇಗ ನಿವಾರಣೆಯಾಗಲಿ. ಹಿಂಗಾರು ಮಳೆ ಉತ್ತಮವಾಗಿ ಸುರಿದು ರೈತರ ಮುಖದಲ್ಲಿ ಸಂತಸ ಮೂಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ಅಂಬಾಭವಾನಿ ಜಾತ್ರಾ ಮಹೋತ್ಸವವು ಕಲ್ಯಾಣ ಕಟ್ಟಿಮನಿ ಸಂಸ್ಥಾನ ಮಠದ ಪೀಠಾಧಿಪತಿ ಪ್ರಭುದೇವ ಸ್ವಾಮೀಜಿ ಹಾಗೂ ಗುರು ಬಸವೇಶ್ವರ ವಿರಕ್ತ ಮಠದ ಶಿವಕುಮಾರ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯಿತು. ಬಸವಕಲ್ಯಾಣ ಶಾಸಕ ಶರಣು ಸಲಗರ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಬೇಲೂರಿನ ಕಲ್ಯಾಣ ಕಟ್ಟಿಮನಿ ಹಿರಿತನ ಮಠದ ಪ್ರಭುಕುಮಾರ ಶಿವಾಚಾರ್ಯ, ಮಾಲಾ ಬಿ. ನಾರಾಯಣರಾವ್, ಮಾಜಿ ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್, ಸಾವಿತ್ರಿ ಸಲಗರ್‌, ಅಶೋಕ್‌ ವಕಾರೆ, ಲೋಕೇಶ್‌, ಪ್ರಕಾಶ್‌ ಮೆಂಡೊಳೆ, ಅಂಬಾಭವಾನಿ ಮಂದಿರ ಟ್ರಸ್ಟ್‌ನ ಅಧ್ಯಕ್ಷ ಸೂರ್ಯಕಾಂತ್‌ ಚೆಲ್ಲಾಬಟ್ಟೆ, ಉಪಾಧ್ಯಕ್ಷ ರಾಮಣ್ಣ ಸಾಗಾವೆ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಅನಿಲ್ ಭೂಸಾರೆ, ಪಪ್ಪು ಉದಾನೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹಾಗೂ ಹಲವು ಗಣ್ಯರು ಪಾಲ್ಗೊಂಡಿದ್ದರು. ಕಳೆದ 15 ದಿನಗಳಿಂದ ನಡೆದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಬಸವರಾಜ್ ಗುಂಗೆ ನಿರೂಪಿಸಿದರು.

Tags

Amba BhavaniBelurreligiouscultural events
share
ವಾರ್ತಾಭಾರತಿ
ವಾರ್ತಾಭಾರತಿ
Next Story
X