16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಗೋಪಾಲ್ ಸಿಂಗ್ ಠಾಕೂರ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ಔರಾದ್: ಎಸ್ಐಆರ್ ಹಾಗೂ ಇವಿಎಂ ಸಂಪೂರ್ಣ ರದ್ದತಿಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಗೋಪಾಲ್ ಸಿಂಗ್ ಠಾಕೂರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಪಟ್ಟಣದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೋಪಾಲ್ ಸಿಂಗ್ ಠಾಕೂರ್ ಅವರು ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮೇ.3ರಿಂದ ಕೇವಲ ನೀರು ಸೇವಿಸುತ್ತಲೇ ಏಕಾಂಗಿಯಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಅವರ ಹೋರಾಟ ಇಂದು 17ನೇ ದಿನಕ್ಕೆ ಕಾಲಿಟ್ಟಿದೆ. ಮಂಗಳವಾರ ಬೆಳಿಗ್ಗೆ ಅವರು ಏಕಾಏಕಿ ಅಸ್ವಸ್ಥಗೊಂಡು, ರಕ್ತದೊತ್ತಡ (ಬಿಪಿ) ಕಡಿಮೆಯಾಗಿದ್ದು, ತಲೆಸುತ್ತಿ ಮೂರ್ಛೆ ಹೋಗಿದ್ದಾರೆ ಎನ್ನಲಾಗಿದೆ.
ಸ್ಥಳೀಯರು ತಕ್ಷಣವೇ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸೇರಿಸಿದ್ದಾರೆ. ಸದ್ಯಕ್ಕೆ ಅವರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
Next Story




